ಬೆಂಗಳೂರು ಪೊಲೀಸರ ವಿರುದ್ಧ ಕೇರಳದಲ್ಲಿ ಎಫ್​ಐಆರ್; ಇನ್ಸ್​ಪೆಕ್ಟರ್ ಸೇರಿ ನಾಲ್ವರು ವಶಕ್ಕೆ; ಕಾರಣವೇನು ಗೊತ್ತಾ?

ಸೈಬರ್ ಕ್ರೈಂ ಪ್ರಕರಣವೊಂದರ ರಿಕವರಿಗೆ ತೆರಳಿದ್ದ ಸಿಇಎನ್(CEN) ಇನ್ಸ್​ಪೆಕ್ಟರ್ ಶಿಚಪ್ರಕಾಶ್ ಸೇರಿ ಮೂವರ ಮೇಲೆ ಕೆರಳದಲ್ಲಿ ಎಫ್​ಐಆರ್ ದಾಖಲಾದ ಘಟನೆ ನಡೆದಿದೆ.

ಬೆಂಗಳೂರು ಪೊಲೀಸರ ವಿರುದ್ಧ ಕೇರಳದಲ್ಲಿ ಎಫ್​ಐಆರ್; ಇನ್ಸ್​ಪೆಕ್ಟರ್ ಸೇರಿ ನಾಲ್ವರು ವಶಕ್ಕೆ; ಕಾರಣವೇನು ಗೊತ್ತಾ?
ಇನ್ಸ್​ಪೆಕ್ಟರ್ ಶಿಚಪ್ರಕಾಶ್
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 03, 2023 | 12:46 PM

ಬೆಂಗಳೂರು, ಆ.3: ಸೈಬರ್ ಕ್ರೈಂ ಪ್ರಕರಣವೊಂದರ ರಿಕವರಿಗೆ ತೆರಳಿದ್ದ ಸಿಇಎನ್(CEN) ಇನ್ಸ್​ಪೆಕ್ಟರ್ ಶಿಚಪ್ರಕಾಶ್ ಸೇರಿ ನಾಲ್ವರ ಮೇಲೆ ಕೆರಳದಲ್ಲಿ ಎಫ್​ಐಆರ್(FIR) ದಾಖಲಾಗಿದೆ. ಹೌದು, ಉದ್ಯೋಗ ಕೊಡಿಸುವುದಾಗಿ ಹೇಳಿ ಸಾಫ್ಟ್​ವೇರ್ ಇಂಜಿನಿಯರ್​(Software Engineer)ಬಳಿ ಬರೊಬ್ಬರಿ ಆನ್​ಲೈನ್ ಮೂಲಕ 26 ಲಕ್ಷ ರೂ. ಹಣವನ್ನ ಪಡೆದು ದುಷ್ಕರ್ಮಿಗಳು ವಂಚನೆ ಮಾಡಿದ್ದರು. ಈ ಹಿನ್ನಲೆ ಚಂದಕ್ ಶ್ರೀಕಾಂತ್ ಎಂಬುವವರು ವೈಟ್ ಫೀಲ್ಡ್ ಸೈಬರ್​ ಠಾಣೆಗೆ ದೂರು ಕೊಟ್ಟಿದ್ದರು. ಈ ಪ್ರಕರಣ ತನಿಖೆ ನಡೆಸುತ್ತಿದ್ದ ಸಿಇಎನ್ ಪೊಲೀಸರಿಗೆ ಸಿಕ್ಕ ಸುಳಿವಿನ ಮೇರೆಗೆ ಕೇರಳ ಹೋಗಿದ್ದರು.

ಆರೋಪಿಯನ್ನ ಬಂಧಿಸಲು ಹೋದ ಪೊಲೀಸರೇ ಅರೆಸ್ಟ್

ಮೊದಲಿಗೆ ಮಡಿಕೇರಿಯ ಆರೋಪಿ ಐಸಾಕ್ ಬಗ್ಗೆ ಸುಳಿವು ಸಿಕ್ಕಿತ್ತು. ಅಲ್ಲಿ ಹೋಗಿ ಪರಿಶೀಲನೆ ನಡೆಸಿದಾಗ ಐಸಾಕ್ ಅಕೌಂಟ್​ನಲ್ಲಿ 2 ಕೋಟಿ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ. ಇದರ ಜಾಡು ಹಿಡಿದು ವೈಟ್ ಫೀಲ್ಡ್ ಸಿಇಎನ್ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಹಾಗೂ ಅವರ ತಂಡ ಕೇರಳದ ಕೊಚ್ಚಿ ನಗರದ ಕಲ್ಲಂಚೇರಿಗೆ ಹೋಗಿದ್ದರು. ಅಲ್ಲಿ ನೌಶಾದ್ ಎಂಬುವನಿಂದ ಆನ್ ಲೈನ್ ಫ್ರಾಡ್​ ಆಗಿರುವ ಬಗ್ಗೆ ಸಾಕ್ಷಿ ಸಿಕ್ಕಿತ್ತು. ಈ ಹಿನ್ನಲೆ ಅರೆಸ್ಟ್ ಮಾಡಲು ಪೊಲೀಸರು ತೆರಳಿದ್ದರು.

ಇದನ್ನೂ ಓದಿ:ಹೆಚ್ಚಾದ ಸೈಬರ್ ಕ್ರೈಂ ಪ್ರಕರಣ; ಬೆಂಗಳೂರಲ್ಲಿ ಆ್ಯಪ್ ಡೌನ್​ಲೋಡ್ ಮಾಡಿಸಿ ನಿವೃತ್ತ ಯೋಧನಿಗೆ 1 ಲಕ್ಷ ಹಣ ವಂಚನೆ

ಅಪರಾಧ ಮುಚ್ಚಿ ಹಾಕಲು ಇನ್ಸ್​ಪೆಕ್ಟರ್ ಶಿವಪ್ರಕಾಶ್​ಯಿಂದ ನೌಶಾದ್ ಬಳಿ 3 ಲಕ್ಷ ಬೇಡಿಕೆ ಆರೋಪ

ಇನ್ನು ಕರ್ನಾಟಕದಿಂದ ಕೇರಳಕ್ಕೆ ತೆರಳಿದ್ದ ಪೊಲೀಸರಿಗೆ ಆರೋಪಿ ನೌಶಾದ್​ ಸಿಕ್ಕಿದ್ದ. ಈ ವೇಳೆ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಕೃತ್ಯ ಮುಚ್ಚಲು 10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು, ಬಳಿಕ ಮುಂಗಡವಾಗಿ 3.95 ಲಕ್ಚ ಹಣವನ್ನ ತೆಗೆದುಕೊಳ್ಳುವಾಗ ಸಿಕ್ಕಿಬಿದ್ದಿದ್ದಾರೆ. ಇನ್ನು ಈ ಕುರಿತು ಆರೋಪಿ ನೌಶಾದ್ ಕಲ್ಲಂಚೇರಿ ಪೊಲೀಸರಿಗೆ ದೂರು ನೀಡಿದ್ದ. ಬಳಿಕ ಬೆಂಗಳೂರು ಪೊಲೀಸರು ನಾವು ಪ್ರಕರಣವೊಂದರ ತನಿಖೆಗೆ ಬಂದಿರುವುದಾಗಿ ತಿಳಿಸಿದ್ದರು. ಹೀಗಿದ್ದರೂ ಕಲ್ಲಂಚೇರಿ ಪೊಲೀಸರು ಇನ್ಸ್​ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು, ನಿನ್ನೆಯೇ ಎಫ್​ಐಆರ್ ದಾಖಲು ಮಾಡಿದ್ದರು. ಸದ್ಯಕ್ಕೆ ಕಲ್ಲಂಚೇರಿ ಪೊಲೀಸರು ವಶದಲ್ಲಿ ಇನ್ಸ್​ಪೆಕ್ಟರ್ ಶಿವಪ್ರಕಾಶ್ ಹಾಗೂ ಇಬ್ಬರು ಸಿಬ್ಬಂದಿಗಳು ಇದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Thu, 3 August 23

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​