ಸಿಡಿ ಲೇಡಿ ದೂರು ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ FIR ದಾಖಲು

ರಮೇಶ್ ಜಾರಕಿಹೊಳಿ ಪ್ರಭಾವಿ ಆಗಿದ್ದರಿಂದ ಹೇಳಿದಂತೆ ಕೇಳಿದ್ದೇನೆ. ಕೆಲಸದ ವಿಚಾರಕ್ಕೆ ಕರೆದಿದ್ದರಿಂದ ಮನೆಗೆ ಹೋಗಿದ್ದೆ. ಆ ವೇಳೆ, ಅವರ ಅಪಾರ್ಟ್‌ಮೆಂಟ್‌ನಲ್ಲೇ 2 ಬಾರಿ ಲೈಂಗಿಕ ಕ್ರಿಯೆ ನಡೆದಿದೆ ಎಂದು ಸಿಡಿಯಲ್ಲಿದ್ದ ಯುವತಿ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

  • TV9 Web Team
  • Published On - 15:42 PM, 26 Mar 2021
ಸಿಡಿ ಲೇಡಿ ದೂರು ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ FIR ದಾಖಲು
ಯುವತಿ (ಎಡ) ಮತ್ತು ಶಾಸಕ ರಮೇಶ್​ ಜಾರಕಿಹೊಳಿ (ಎಡ)

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ FIR ದಾಖಲಾಗಿದೆ. ಯುವತಿ ನೀಡಿರುವ ದೂರು ಆಧರಿಸಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. CDಯಲ್ಲಿದ್ದ ಯುವತಿ ಗಂಭೀರ ಆರೋಪ ಮಾಡಿದ್ದರು. ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಮಾಡಿದ್ದರು.

ಸಿಡಿಯಲ್ಲಿದ್ದ ಯುವತಿಯ ಲಿಖಿತ ದೂರು ಆಧರಿಸಿ ಇದೀಗ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಯುವತಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಲೈಂಗಿಕ ಸಂಪರ್ಕ ಮಾಡಲಾಗಿದೆ. ಕೆಲಸ ಕೊಡಿಸದೆ ವಂಚಿಸಿ ಜೀವ ಬೆದರಿಕೆ ಹಾಕಲಾಗಿದೆ. ರಮೇಶ್ ವಿಡಿಯೋ ಕರೆ ಮಾಡಿ ಅಶ್ಲೀಲ ಮಾತುಗಳನ್ನಾಡಿದ್ದಾರೆ. ನಗ್ನವಾಗಿ ಮಾತನಾಡಲು ಪುಸಲಾಯಿಸಿದ್ದಾರೆ ಎಂದು ಜಾರಕಿಹೊಳಿ ವಿರುದ್ಧ ಆರೋಪ ವ್ಯಕ್ತವಾಗಿದೆ.

ರಮೇಶ್ ಜಾರಕಿಹೊಳಿ ಪ್ರಭಾವಿ ಆಗಿದ್ದರಿಂದ ಹೇಳಿದಂತೆ ಕೇಳಿದ್ದೇನೆ. ಕೆಲಸದ ವಿಚಾರಕ್ಕೆ ಕರೆದಿದ್ದರಿಂದ ಮನೆಗೆ ಹೋಗಿದ್ದೆ. ಆ ವೇಳೆ, ಅವರ ಅಪಾರ್ಟ್‌ಮೆಂಟ್‌ನಲ್ಲೇ 2 ಬಾರಿ ಲೈಂಗಿಕ ಕ್ರಿಯೆ ನಡೆದಿದೆ ಎಂದು ಸಿಡಿಯಲ್ಲಿದ್ದ ಯುವತಿ ಜಾರಕಿಹೊಳಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ನಾಳೆಯಿಂದ ನಮ್ಮ ಆಟ ಶುರು; ಸರ್ಕಾರವನ್ನೇ ತೆಗೆದಿದ್ದೇವೆ, ಇದ್ಯಾವ ಲೆಕ್ಕ: ಸದಾಶಿವನಗರ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಸವಾಲ್

ಯುವತಿ ಕೈ ಬರಹದಲ್ಲಿ.. ನನ್ನನ್ನು ಕೊಲೆ ಮಾಡುವುದಕ್ಕೆ ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎಂದು ದೂರು