ಆತ್ಮಹತ್ಯೆ ಬೆದರಿಕೆ ಆರೋಪ: ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಎಫ್​ಐಆರ್ ದಾಖಲು

ಬಿಬಿಎಂಪಿ ಗುತ್ತಿಗೆದಾರರ ಸಂಘ ಹಾಗೂ ರಾಜ್ಯ ಸರ್ಕಾರದ ನಡುವಿನ ಹಗ್ಗಜಗ್ಗಾಟ ಹೊಸ ತಿರುವು ಪಡೆದುಕೊಂಡಿದೆ. ಬಾಕಿ ಬಿಲ್​ ಬಿಡುಗಡೆ ಮಾಡದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ ಗುತ್ತಿಗೆದಾರರ ಸಂಘದ ಸದಸ್ಯರ ವಿರುದ್ಧ ಇದೀಗ ಎಫ್​ಐಆರ್​ ದಾಖಲಾಗಿದೆ.

ಆತ್ಮಹತ್ಯೆ ಬೆದರಿಕೆ ಆರೋಪ: ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಎಫ್​ಐಆರ್ ದಾಖಲು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Aug 17, 2023 | 2:02 PM

ಬೆಂಗಳೂರು, (ಆಗಸ್ಟ್ 17): ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದ (BBMP contractors association) ನಡುವಿನ ಹಗ್ಗಜಗ್ಗಾಟ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಬಾಕಿ ಬಿಲ್​ ಬಿಡುಗಡೆ ಮಾಡುವಂತೆ ಬಿಬಿಎಂಪಿ(BBMP) ಗುತ್ತಿಗೆದಾರರ ಸಂಘ ಆಗ್ರಹಿಸಿದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದೆ. ಈ ಹಿನ್ನೆಲೆಯಲ್ಲಿ ಇದೀಗ ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಬಿಬಿಎಂಪಿ ಅಧಿಕಾರಿ ಮಹದೇವ್ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಒಟ್ಟು 57 ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಗುತ್ತಿಗೆದಾರರಿಗೆ ನೋಟಿಸ್

ಈ ದೂರಿನ ಸಂಬಂಧ ಗುತ್ತಿಗೆದಾರರ ಪಿಟಿಷನ್ ವಿಚಾರಣೆಗೆ ಇಳಿದಿರುವ ಪೊಲೀಸರು, ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡಿದ್ದು, ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಶೇಷಾದ್ರಿಪುರಂ ಎಸಿಪಿ ಗುತ್ತಿಗೆದಾರರಿಗೆ ನೋಟಿಸ್​ ನೀಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಒತ್ತಡ ಹೇರಿ ಹಣ ಬಿಡುಗಡೆ ಮಾಡುತ್ತಿಲ್ಲ. ನಮ್ಮ ಕಾಮಗಾರಿ ಮುಕ್ತಾಯ ಆಗಿದ್ದರೂ ಹಣ ಬಿಡುಗಡೆಯಾಗಿಲ್ಲ. ಡಿಕೆ ಶಿವಕುಮಾರ್ ಹಣ ಬಿಡುಗಡೆ ಮಾಡದಂತೆ ಅಧಿಕಾರಿಗಳ ಮೇಲೆ ಒತ್ತಾಯ ಮಾಡಿದ್ದಾರೆ. ಹೀಗಾಗಿ ಸೂಕ್ತ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ಗುತ್ತಿಗೆದಾರರು ದೂರು ನೀಡಿದ್ದರು. ರಾಜ್ಯಪಾಲರಿಗೆ ನೀಡಲಾಗಿದ್ದ ದೂರು ಪೊಲೀಸ್ ಠಾಣೆಗೆ ರವಾನೆಯಾಗಿದ್ದು, ದೂರಿನಲ್ಲಿ ಸಹಿ ಹಾಕಿದ್ದ ಎಲ್ಲಾ ಗುತ್ತಿಗೆದಾರರಿಗೂ ವಿಚಾರಣೆ ಬರುವಂತೆ ನೋಟಿಸ್ ನೀಡಲಾಗಿದೆ. ಈಗಾಗಲೇ ಕೆಲವು ಗುತ್ತಿಗೆದಾರರು ಎಸಿಪಿ ಮುಂದೆ ಹಾಜರಾಗಿದ್ದು, ಎಸಿಪಿ ಪ್ರಕಾಶ್ ರೆಡ್ಡಿ ಅವರು ವಿಚಾರಣೆ ನಡೆಯುತ್ತಿದ್ದಾರೆ. ರಾಜ್ಯಪಾಲರಿಗೆ ನೀಡಿದ ದೂರಿನಲ್ಲಿ ಬಿಲ್‌ ಬಿಡುಗಡೆ ಮಾಡದ ಬಿಬಿಎಂಪಿ, ಸರ್ಕಾರದ ವಿರುದ್ಧ ಆರೋಪ ಮಾಡಲಾಗಿತ್ತು.. ಆರೋಪಕ್ಕೆ ಸಂಬಂಧಿಸಿದಂತೆ ಮಾಹಿತಿ, ದಾಖಲೆ ನೀಡುವಂತೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Published On - 12:21 pm, Thu, 17 August 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್