Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ವೋಟು ಬೇಡ ಎನ್ನುವ ಸುಳ್ಳು ಸುದ್ದಿ ಪೋಸ್ಟ್: 7 ಜನರ ವಿರುದ್ಧ ಎಫ್‌ಐಆರ್‌

ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಹಿಂದುಗಳ ಮತ (Hindu Votes) ನಮಗೆ ಬೇಡ, ಮುಸ್ಲಿಮರ ವೋಟು (Muslims Vote) ನಮಗೆ ಸಾಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ ಎಂಬ ಸುದ್ದಿಯೊಂದು ವೈರಲ್ ಆಗಿದ್ದು, ಇದೀಗ ಇದನ್ನು ಕಾಂಗ್ರೆಸ್​ ಗಂಭೀರವಾಗಿ ಪರಿಗಣಿಸಿದ್ದು, ಸುಳ್ಳು ಸುದ್ದಿ ಹಬ್ಬಿಸಿದ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಹಿಂದೂ ವೋಟು ಬೇಡ ಎನ್ನುವ ಸುಳ್ಳು ಸುದ್ದಿ ಪೋಸ್ಟ್:  7 ಜನರ ವಿರುದ್ಧ ಎಫ್‌ಐಆರ್‌
ನಕಲಿ ಪೋಸ್ಟ್
Follow us
ರಮೇಶ್ ಬಿ. ಜವಳಗೇರಾ
|

Updated on: Apr 10, 2024 | 7:08 PM

ಬೆಂಗಳೂರು, (ಏಪ್ರಿಲ್ 10): ಹಿಂದೂ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿ ಪತ್ರಿಕಾ ತುಣುಕು ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಏಳು ಜನರ ವಿರುದ್ಧ ದೂರು ದಾಖಲಾಗಿದೆ. ಹಿಂದೂ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದು ದಿನ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂಬಂತೆ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿತ್ತು. ಈ ಸಂಬಂಧ ಕಾಂಗ್ರೆಸ್ ಕಾನೂನು ಘಟನೆ ಸೈಬರ್ ಕ್ರೈಂ ಠಾಣೆಗೆ ಕ ದೂರು ನೀಡಿತ್ತು. ಈ ದೂರಿನ ಮೇರೆಗೆ ಸದ್ಯ ಪ್ರಭಾಕರ್, ವಸಂತ ಗಿಳಿಯಾರ್ ಸೇರಿದಂತೆ ಒಟ್ಟು 7 ಜನರು ವಿರುದ್ದ ಎಫ್​ಐಆರ್ ದಾಖಲಾಗಿದೆ

ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೂ ದೂರು

ಹಿಂದುಗಳ ಮತ (Hindu Votes) ನಮಗೆ ಬೇಡ, ಮುಸ್ಲಿಮರ ವೋಟು (Muslims Vote) ನಮಗೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸುದ್ದಿಯೊಂದು ಹರಿದಾಡುತ್ತಿದೆ. ಫ್ಯಾಕ್ಟ್​ಚೆಕ್ ಮಾಡಿ ನೋಡಿದರೆ ಈ ರೀತಿಯಾಗಿ ಯಾವುದೇ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗಿಲ್ಲ. ಈ ರೀತಿಯಾಗಿ ನಕಲಿ ಸುದ್ದಿಯೊಂದನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ನಕಲಿ ಸುದ್ದಿಯನ್ನು ಸಮಾಜಿಕ ಜಾತಲತಾಣಗಳಲ್ಲಿ ಹಂಚಿಕೊಂಡಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕಾಂಗ್ರೆಸ್ ನಾಯಕರಾದ ರಮೇಶ್ ಬಾಬು, ವಿಜಯ್ ಮತ್ತಿಕಟ್ಟಿ, ರವಿ ಗೌಡ ಹಾಗೂ ದಿವಾಕರ್ ಅವರು ಬಿಜೆಪಿ ವಿರುದ್ದ ಫೇಕ್ ನ್ಯೂಸ್ ಸೃಷ್ಟಿಸಿದೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಫೇಕ್ ನ್ಯೂಸ್ ಹರಡುವುದನ್ನು ತಡೆಯಲು ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಬಿಜೆಪಿ ವಿರುದ್ಧ ರಮೇಶ್​ ಬಾಬು ಕಿಡಿ

ದೂರು ಸಲ್ಲಿಕೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಮೇಶ್ ಬಾಬು, ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಹಿಂದೂಗಳೇ . ಬಿಜೆಪಿಯವರಿಗೆ ಬೇನಾಮಿ ಹೆಸರಲ್ಲಿ ಕಾಂಗ್ರೆಸ್ ಟೀಕಿಸುವ ಖಾಯಿಲೆ ಇದೆ. ಬಿಜೆಪಿಯವರಿಗೆ ಅದೊಂದು ಅಂಟು ರೋಗ. ಸಿದ್ದರಾಮಯ್ಯ ಹೆಸರಲ್ಲಿ ಫೇಕ್ ಅಕೌಂಟ್ ಸೃಷ್ಟಿ ಮಾಡಲಾಗಿದ್ದು, ಅವರ ಹೇಳಿಕೆಯ ಫೇಕ್ ಸ್ಟೇಟಮೆಂಟ್ ಮಾಡಲಾಗಿದೆ. ಬಿಜೆಪಿಯ ಅಧಿಕೃತ ಅಕೌಂಟ್ ಗಳಿಂದಲೇ ಫೇಕ್ ಸುದ್ದಿ ಹರಡಲಾಗುತ್ತಿದೆ. ವಿಜಯೇಂದ್ರ ಹಾಗೂ ಸ್ವಯಂ ಘೋಷಿತ ಅಶೋಕ್ ಮಾಮಾ ಇದರ ಹಿಂದೆ ಇರಬಹುದು ಎಂಬ ಅನುಮಾನ ಇದೆ. ಇವರು ಮಾಡಿದ ದುಷ್ಕೃತ್ಯದ ಅಡಿಯಲ್ಲಿ ಕ್ರಮ ಕೈಗೊಳ್ಳಲು ದೂರು ನೀಡಿದ್ದೇವೆ ಎಂದು ಹೇಳಿದರು.

ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಇನ್ನು ಈ ಕುರಿತು ಸ್ವತಃ ಸಿದ್ಧರಾಮಯ್ಯ ತಮ್ಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದು, ‘ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಬಗ್ಗೆ ಈಗಾಗಲೇ ನಾನು ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು’ ಎಂದು ಹೇಳಿದ್ದಾರೆ.

‘ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಬಿಜೆಪಿ ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು’ ಎಂದು ಅವರ ಕಿಡಿಕಾರಿದ್ದಾರೆ.

ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿಸಬೇಕು ಎಂದು ಮನಿ ಮಾಡಿಕೊಂಡಿರುವ ಅವರು, ‘ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ’ ಎಂದು ತಿಳಿಸಿದ್ದಾರೆ.

‘ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ. ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ’ ಎಂದು ಖಡಕ್ ಆಗಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ