ಬೆಂಗಳೂರು ಲುಲು ಮಾಲ್‌ನಲ್ಲಿ ಯುವತಿ ಜತೆ ಅಶ್ಲೀಲ ವರ್ತನೆ: ವ್ಯಕ್ತಿ ವಿರುದ್ಧ ದೂರು ದಾಖಲು
ಬೆಂಗಳೂರಿನ ಲುಲು ಮಾಲ್ ನಲ್ಲಿ ವ್ಯಕ್ತಿಯೋರ್ವ ಯುವತಿಯೋರ್ವಳಗೆ ಲೈಂಗಿಕ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದ್ದು, ಇದೀಗ ಇದಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ. ಮಾಲ್ ಆಡಳಿತಾಧಿಕಾರಿ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.
ಬೆಂಗಳೂರು, (ಅಕ್ಟೋಬರ್ 31): ನಗರದ ಲುಲು ಮಾಲ್‌ನಲ್ಲಿ (lulu mall ) ಯುವತಿಯ ಹಿಂಭಾಗ ಮುಟ್ಟಿ ವಿಕೃತಿ ((Sexual harassment) ) ಮೆರೆದ ವಿಡಿಯೋ ವೈರಲ್ ಆಗಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಲುಲು ಮಾಲ್ ಅಧಿಕಾರಿ ನೀಡಿದ ದೂರಿನ ಅನ್ವಯ ಬೆಂಗಳೂರಿನ(Bengaluru) ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ವಿಡಿಯೋ ಆಧರಿಸಿ ತನಿಖೆ ಕೈಗೊಂಡಿದ್ದಾರೆ.
ಅಕ್ಟೋಬರ್ 29ರಂದು ಸಂಜೆ ಆರುವರೆ ಸುಮಾರಿಗೆ ಮಾಲ್ ನ ಎರಡನೇ ಮಹಡಿಯ ಫಂಚುರ್ ಗೇಮ್ ಫ್ಲೋರ್ ನಲ್ಲಿ ವ್ಯಕ್ತಿಯೋರ್ವ ಯುವತಿ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಆಕೆಯ ದೇಹವನ್ನು ಮುಟ್ಟಿದ್ದಾನೆ. ಲೈಂಗಿಕವಾಗಿ ಪ್ರಸ್ತಾಪಿಸುವ ಸಲುವಾಗಿಯೇ ಮಹಿಳೆಯ ಹಿಂಬದಿಯಲ್ಲಿ ಆಕೆಯನ್ನು ಅಶ್ಲೀಲ (sexual abuse)ವಾಗಿ ಮುಟ್ಟಿದ್ದಾನೆ. ಬಳಿಕ ತನಗೇನೂ ತಿಳಿದಿಲ್ಲ ಎಂಬಂತೆ ಆಲ್ಲಿಂದ ಪರಾರಿಯಾಗಿದ್ದಾನೆ.
ಇದನ್ನೂ ಓದಿ: ಬೆಂಗಳೂರಿನ ಪ್ರತಿಷ್ಠಿತ ಮಾಲ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ವಿಡಿಯೋ ವೈರಲ್
ಈ ವಿಡಿಯೋ ಗ್ರಾಹಕರೊಬ್ಬರ ಮೊಬೈಲ್ನಲ್ಲಿ ಸೆರೆಯಾಗಿದ್ದು, yesh_fitspiration ಎನ್ನುವ ಇನ್ಸ್ಟಾಗ್ರಾಮ್ ಖಾತೆಯಿಂದ ಈ ವಿಡಿಯೋ ಅಪ್ಲೋಡ್ ಆಗಿದೆ. ಇದರ ಬೆನ್ನಲ್ಲೇ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆಗಿರುವ ವಿಚಾರ ಟಿವಿಗಳ ಮೂಲಕ ಗೊತ್ತಾಗಿ ಲುಲು ಮಾಲ್ ಅಧಿಕಾರಿ ಇದೀಗ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಮಾಗಡಿ ರಸ್ತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ವಿಡಿಯೋ ಆಧಾರದ ಮೇಲೆ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ