ಕೋರ್ಟ್ ಸೂಚನೆಯಂತೆ ವಂಚನೆ ಆರೋಪದಡಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಎಫ್​ಐಆರ್

ಈಮುನ್ನ ಇದೇ ದೂರಿಗೆ ಸಂಬಂಧಿಸಿ ಮಾಜಿ ಸಚಿವ ಕಟ್ಟಾ ವಿರುದ್ಧ ದೂರು ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದರು. ಕೊನೆಗೆ ಹಿರಿಯ ನಾಗರಿಕ, ಇಂಡ್ಸಿಂಗ್ ಡೆವಲಪರ್ಸ್ ನಿರ್ದೇಶಕ ಕೃಷ್ಣ ಅವರು ಕೋರ್ಟ್ ಮೊರೆ ಹೋಗಿದ್ದರು.

ಕೋರ್ಟ್ ಸೂಚನೆಯಂತೆ ವಂಚನೆ ಆರೋಪದಡಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಎಫ್​ಐಆರ್
ಕಟ್ಟಾ ಸುಬ್ರಹ್ಮಣ್ಯ ನಾಯ್ಡು

ಬೆಂಗಳೂರು: ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ವಂಚನೆ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿರಿಯ ನಾಗರಿಕರಿಗೆ ₹2.8 ಕೋಟಿ ವಂಚನೆ ಎಸಗಿದ ಆರೋಪವನ್ನು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಮಾಡಲಾಗಿದ್ದು, ಸೈಟ್, ಫ್ಲ್ಯಾಟ್ ಕೊಡುವುದಾಗಿ ಕೃಷ್ಣ ಎಂಬುವರಿಗೆ ದುಪ್ಪಟ್ಟು ಹಣ ನೀಡುವುದಾಗಿ ನಂಬಿಸಿ ವಂಚನೆ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈಮುನ್ನ ಇದೇ ದೂರಿಗೆ ಸಂಬಂಧಿಸಿ ಮಾಜಿ ಸಚಿವ ಕಟ್ಟಾ ವಿರುದ್ಧ ದೂರು ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದರು. ಕೊನೆಗೆ ಹಿರಿಯ ನಾಗರಿಕ, ಇಂಡ್ಸಿಂಗ್ ಡೆವಲಪರ್ಸ್ ನಿರ್ದೇಶಕ ಕೃಷ್ಣ ಅವರು ಕೋರ್ಟ್ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಸೂಚನೆಯಂತೆ ಕಟ್ಟಾ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: 

Siddaramaiah: ಮಗನಿಗೆ ‘ಸಿದ್ದರಾಮಯ್ಯ’ ಎಂದು ಹೆಸರಿಟ್ಟು ಸಂಭ್ರಮಿಸಿದ ಸಿದ್ದರಾಮಯ್ಯ ಕಟ್ಟಾ ಅಭಿಮಾನಿ!

ಪ್ರಸ್ತುತ ರಾಜಕೀಯದ ಬಗ್ಗೆ ಹೆಚ್​ಡಿ ದೇವೇಗೌಡ ಬೇಸರ; ಜಯಪ್ರಕಾಶ ನಾರಾಯಣ ಜನ್ಮ ದಿನಾಚರಣೆಯಲ್ಲಿ ಮಾತು

Read Full Article

Click on your DTH Provider to Add TV9 Kannada