Bengaluru News: R.R ನಗರ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲು

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 13, 2023 | 8:09 AM

ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚಿಕ್ಕಜಾಲ ಠಾಣೆಯಲ್ಲಿ R.R.ನಗರ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

Bengaluru News: R.R ನಗರ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲು
ಎಂಎಲ್​ಎ ಮುನಿರತ್ನ
Follow us on

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚಿಕ್ಕಜಾಲ ಠಾಣೆಯಲ್ಲಿ R.R.ನಗರ ಶಾಸಕ ಮುನಿರತ್ನ(Muniratna) ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್  ದಾಖಲಾಗಿದೆ. ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್​ ಸ್ಫೋಟಿಸಿದ ಆರೋಪದಡಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ಅವರು ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲು ಮಾಡಿದ್ದರು. ದೂರಿನ ಮೇರೆಗೆ ಇದೀಗ ಎಫ್​ಐಆರ್​(FIR) ದಾಖಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಕಲ್ಲು ಗಣಿಗಾರಿಕೆ ಮಾಡಿದ್ದು, ಜೊತೆಗೆ ಹುಣಸಮಾರನಹಳ್ಳಿಯ ಜಮೀನಿನಲ್ಲಿ ಗಣಿಗಾರಿಕೆ ವೇಳೆ ಜು.10ರಂದು ಜಿಲೆಟಿನ್​ ಸ್ಫೋಟ ಮಾಡಿದ ಆರೋಪ ಕೇಳಿಬಂದಿತ್ತು.

ಗಣಿಗಾರಿಕೆ ವಿರುದ್ಧ ಧರಣಿ ನಡೆಸಿದ್ದ ಹುಣಸಮಾರನಹಳ್ಳಿ ಗ್ರಾಮಸ್ಥರು

ಇನ್ನು ಹುಣಸಮಾರನಹಳ್ಳಿ ಗ್ರಾಮಸ್ಥರು ಗಣಿಗಾರಿಕೆ ವಿರುದ್ಧ ಧರಣಿ ನಡೆಸಿದ್ದರು. ಧರಣಿ ಹಿನ್ನೆಲೆ ಸ್ಥಳ ಪರಿಶೀಲನೆ ನಡೆಸಿದ್ದ ತಹಶೀಲ್ದಾರ್ ಅವರು ದೂರು ದಾಖಲು ಮಾಡಿದ್ದರು. ಹುಣಸಮಾರನಹಳ್ಳಿ ಸರ್ವೆ ನಂಬರ್ 177/3, 178/1.2.3 ಹಾಗೂ ಸೊಣಪ್ಪನಹಳ್ಳಿ ಸರ್ವೆ ನಂ. 34/1 2 3, 17/7 8,9ರಲ್ಲಿ ಗಣಿಗಾರಿಕೆ ಮಾಡಲಾಗಿದ್ದು, ಆರೋಪಿಗಳಾದ ಆನಂದನ್, ಗಣೇಶ್, ರಾಧಮ್ಮ, ಶಾಸಕ ಮುನಿರತ್ನ ವಿರುದ್ಧ ಸ್ಫೋಟಕ ಕಾಯ್ದೆ 1884 US 9B(1b) , ಕರ್ನಾಟಕ ಭೂ ಕಂದಾಯ ಕಾಯ್ದೆ 1964ರಡಿ ಕೇಸ್ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:01 am, Thu, 13 July 23