ಸಚಿವ ಪರಮೇಶ್ವರ್ ನಿವಾಸಕ್ಕೆ ನುಗ್ಗಲು ಯತ್ನ, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಎಫ್​ಐಆರ್

ಗೃಹ ಸಚಿವ ಡಾ ಜಿ ಪರಮೇಶ್ವರ ಅವರ ಬೆಂಗಳೂರಿನ ನಿವಾಸದ ಮುಂದೆ ಪ್ರತಿಭಟನೆ ಮಾಡಿದ್ದ ರಾಜ್ಯ ಬಿಜೆಪಿ ಯುವ ಮೋರ್ಚ ಕಾರ್ಯಕರ್ತರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಸಚಿವ ಪರಮೇಶ್ವರ್ ನಿವಾಸಕ್ಕೆ ನುಗ್ಗಲು ಯತ್ನ, ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
Follow us
Prajwal Kumar NY
| Updated By: ರಮೇಶ್ ಬಿ. ಜವಳಗೇರಾ

Updated on: Jul 28, 2023 | 11:35 AM

ಬೆಂಗಳೂರು, (ಜುಲೈ 28)  ಗೃಹ ಸಚಿವ ಡಾ ಜಿ ಪರಮೇಶ್ವರ್(Dr G Parameshwar) ನಿವಾಸದ ಮುಂದೆ ಪ್ರತಿಭಟನೆ ಮಾಡಿದ್ದ ಬಿಜೆಪಿ(BJP) ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರಶಾಂತ್ ಸೇರಿದಂತೆ ಇತರೆ 10 ಜನರ ವಿರುದ್ಧ ಐಪಿಸಿ ಸೆಕ್ಷನ್ 143, 149ರ ಅಡಿಯಲ್ಲಿ ಬೆಂಗಳೂರಿನ(Bengaluru) ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಉಡುಪಿ ಕಾಲೇಜು ವಿದ್ಯಾರ್ಥಿನಿಯ ಮೊಬೈಲ್ ವಿಡಿಯೋ ಚಿತ್ರೀಕರಣ ಮಾಡಿರುವ ಮೂವರು ವಿದ್ಯಾರ್ಥಿನಿಯರನ್ನು ಬಂಧಿಸಿವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚ ನಿನ್ನೆ (ಜುಲೈ 27) ಗೃಹ ಸಚಿವ ಪರಮೇಶ್ವರ ಅವರ ಸದಾಶಿವನಗರದ ನಿವಾಸದ ಮುಂದೆ ಪ್ರತಿಭಟನೆ ಮಾಡಿದ್ದರು. ಆದ್ರೆ, ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡು ಸದಾಶಿವನಗರ ಪೊಲೀಸ್​ ಠಾಣೆಗೆ ಕರೆದುಕೊಂಡು ಹೋಗಿದ್ದರು. ಇದೀಗ 10 ಕಾರ್ಯಕರ್ತರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: Dr G Parameshwar: ಮಹಿಳಾ ಆಯೋಗ ಮಣಿಪುರಕ್ಕೆ ಹೋಗಿಲ್ಲ, ಇಲ್ಲಿಗೆ ಬಂದಿದ್ದಾರೆ – ಗುಡುಗಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

ಪರಮೇಶ್ವರ್​ ನಿವಾಸಕ್ಕೆ ನುಗ್ಗಲು ಯತ್ನಸಿದ್ದ ಕಾರ್ಯಕರ್ತರು

ಉಡುಪಿಯ ನೇತ್ರ ಕಾಲೇಜು ಶೌಚಾಲಯದಲ್ಲಿ(Udupi College) ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚ ಕಾರ್ಯಕರ್ತರು ಸದಾಶಿವನಗರದಲ್ಲಿರುವ ಡಾ.ಜಿ.ಪರಮೇಶ್ವರ್​ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು.  ಈ ವೇಳೆ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಸದಾಶಿವನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದರು. ಮತ್ತೊಂದೆಡೆ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಬೆಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್​ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗೊತ್ತು. ಸದಾಶಿವನಗರದ ನಿವಾಸದ ರಸ್ತೆಗೆ ಬ್ಯಾರಿಕೇಟ್ ಹಾಕಿ ಕೆಎಸ್​ಆರ್​ಪಿ ತುಕಡಿ ನಿಯೋಜನೆ ಮಾಡಿ ಸೂಕ್ತ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ