ಬೆಂಗಳೂರು, (ಜುಲೈ 28) ಗೃಹ ಸಚಿವ ಡಾ ಜಿ ಪರಮೇಶ್ವರ್(Dr G Parameshwar) ನಿವಾಸದ ಮುಂದೆ ಪ್ರತಿಭಟನೆ ಮಾಡಿದ್ದ ಬಿಜೆಪಿ(BJP) ಯುವ ಮೋರ್ಚಾ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರಶಾಂತ್ ಸೇರಿದಂತೆ ಇತರೆ 10 ಜನರ ವಿರುದ್ಧ ಐಪಿಸಿ ಸೆಕ್ಷನ್ 143, 149ರ ಅಡಿಯಲ್ಲಿ ಬೆಂಗಳೂರಿನ(Bengaluru) ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಉಡುಪಿ ಕಾಲೇಜು ವಿದ್ಯಾರ್ಥಿನಿಯ ಮೊಬೈಲ್ ವಿಡಿಯೋ ಚಿತ್ರೀಕರಣ ಮಾಡಿರುವ ಮೂವರು ವಿದ್ಯಾರ್ಥಿನಿಯರನ್ನು ಬಂಧಿಸಿವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚ ನಿನ್ನೆ (ಜುಲೈ 27) ಗೃಹ ಸಚಿವ ಪರಮೇಶ್ವರ ಅವರ ಸದಾಶಿವನಗರದ ನಿವಾಸದ ಮುಂದೆ ಪ್ರತಿಭಟನೆ ಮಾಡಿದ್ದರು. ಆದ್ರೆ, ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡು ಸದಾಶಿವನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದರು. ಇದೀಗ 10 ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಉಡುಪಿಯ ನೇತ್ರ ಕಾಲೇಜು ಶೌಚಾಲಯದಲ್ಲಿ(Udupi College) ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚ ಕಾರ್ಯಕರ್ತರು ಸದಾಶಿವನಗರದಲ್ಲಿರುವ ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಸದಾಶಿವನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದರು. ಮತ್ತೊಂದೆಡೆ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಬೆಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗೊತ್ತು. ಸದಾಶಿವನಗರದ ನಿವಾಸದ ರಸ್ತೆಗೆ ಬ್ಯಾರಿಕೇಟ್ ಹಾಕಿ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಿ ಸೂಕ್ತ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿತ್ತು.
ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ