ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಸುರೇಶ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಆರೋಪ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಹಾಗೂ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಪ್ರಶಾಂರ್ ಸಂಬರಗಿ ವಿರುದ್ಧ ಕೋಮುಭಾವನೆ ಕೆರಳಿಸುವ ಪೋಸ್ಟ್ ಹಾಕಿರುವ ಆರೋಪ ಕೇಳಿಬಂದಿದೆ. ವಕೀಲ ಸಿ. ಲಕ್ಷ್ಮೀ ನಾರಾಯಣ ದೂರಿನ ಮೇರೆಗೆ ಎಫ್ಐಆರ್ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ನನ್ನ ಮುಂದಾಳತ್ವದಲ್ಲಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ: ಡಿಕೆ ಶಿವಕುಮಾರ್ ಹೇಳಿಕೆ
ಇದನ್ನೂ ಓದಿ: ಪ್ರಶಾಂತ್ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಚಕ್ರವರ್ತಿ ಚಂದ್ರಚೂಡ್; ಸಂಬರಗಿಗೆ ಆರಂಭವಾಯ್ತು ಕಷ್ಟ ಕಾಲ?