ಬೆಂಗಳೂರು: ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರಿನ ಪುಲಿಕೇಶಿನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕಿರಣ್ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು: ಪುಲಿಕೇಶಿನಗರ ಪೊಲೀಸ್ ಠಾಣೆಯ (Pulikeshi Nagar Police Station) ಇನ್ಸ್ಪೆಕ್ಟರ್ ಕಿರಣ್ ಅವರ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ. ಹರೀಶ್ ಫರ್ನಾಂಡೀಸ್ ಎಂಬುವರು ಇನ್ಸ್ಪೆಕ್ಟರ್ ಕಿರಣ್ ಅವರು ವಾರೆಂಟ್ ಇಲ್ಲದೆ ಮನೆಗೆ ಪ್ರವೇಶಿಸಿ ಗಲಾಟೆ ಮಾಡಿದ್ದಾರೆ ಎಂದು 2016ರಲ್ಲಿ ನ್ಯಾಯಾಲಯಕ್ಕೆ ಪಿಸಿಆರ್ ಸಲ್ಲಿದ್ದರು. ಈ ಹಿನ್ನೆಲೆ ಕೋರ್ಟ್ ಸೂಚನೆ ಮೇರೆಗೆ ಇದೀಗ ಅಶೋಕನಗರ ಠಾಣೆಯಲ್ಲಿ ದೂರು ದಾಖಲಾಗಿದೆ. 2016ರಲ್ಲಿ ಮನೆ ಖಾಲಿ ಮಾಡುವ ವಿಚಾರಕ್ಕೆ ಸಹೋದರರಾದ ಹರೀಶ್ ಫರ್ನಾಂಡೀಸ್ ಮತ್ತು ವಸಂತ್ ಫರ್ನಾಂಡೀಸ್ ಎಂಬವರ ನಡುವೆ ಜಗಳ ನಡೆದಿತ್ತು. ಈ ಗಲಾಟೆಯಲ್ಲಿ ಇನ್ಸ್ಪೆಕ್ಟರ್ ಕಿರಣ್ ಮಧ್ಯಪ್ರವೇಶಿಸಿದ್ದಾರೆ ಎಂದು ನ್ಯಾಯಾಲಯದಲ್ಲಿ ಪಿಸಿಆರ್ ಸಲ್ಲಿಸಿದ್ದರು.
ಇದೀಗ ನ್ಯಾಯಾಲಯದ ಸೂಚನೆ ಮೇರೆಗೆ 2023ರ ಮೇ 19ರಂದು ಆಶೋಕ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಲ್ಲದೇ ಹರೀಶ್ ಫರ್ನಾಂಡೀಸ್ ಸಹೋದರ ವಸಂತ್ ಫರ್ನಾಂಡೀಸ್ ಹಾಗೂ ಪತ್ನಿ ಮೆರಿಟೋ ವಿರುದ್ಧವೂ ದೂರ ದಾಖಲಾಗಿದೆ.
ಇದನ್ನೂ ಓದಿ: Kidwai Hospital: ಬೆಂಗಳೂರು ಕಿದ್ವಾಯಿ ಅಸ್ಪತ್ರೆಯಲ್ಲಿ ಹಲವಾರು ಸಮಸ್ಯೆಗಳು, ಆರೋಗ್ಯ ಸಚಿವರು ಬಿಡುವಿಲ್ಲದೆ ಕೆಲಸ ಮಾಡಬೇಕಿದೆ!
ಪೊಲೀಸ್ ಠಾಣೆ ಆವರಣದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ
ರಾಯಚೂರು: ಪೊಲೀಸ್ ಠಾಣೆ ಆವರಣದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ನರಸಿಂಹಲು ಹಲ್ಲೆಗೊಳಗಾದ ಪೊಲೀಸ್ ಕಾನ್ಸಟೇಬಲ್. ಘಟನೆ ಸಂಬಂಧ ಗಬ್ಬೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಸಿದ್ದಾರೆ. ಸೈಯದ್ ಫರೀದ್, ಸೈಯದ್ ವಹೀದ್, ಸೈಯದ್ ದಸ್ತಗಿರಿ ಬಂಧಿತ ಆರೋಪಿಗಳು.
ಲಾರಿ ಹಾಗೂ ಟಾಟಾ ಏಸ್ ನಡುವೆ ನಡೆದಿದ್ದ ಅಪಘಾತ ನಡೆದಿತ್ತು. ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ಮಾತುಕತೆ ನಡೆಯುವಾಗ ಪೊಲೀಸ್ ಕಾನ್ಸಟೇಬಲ್ ಲಾರಿ ಚಾಲಕ ಪರ ಮಾತನಾಡುತ್ತಿದ್ದರು ಅಂತ ಹಲ್ಲೆ ಮಾಡಿದ್ದಾರೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:20 am, Tue, 30 May 23