AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಕೋಟಿ ಹಣ ಅಕ್ರಮ: ಬಿಎಂಟಿಸಿಯ 7 ಅಧಿಕಾರಿಗಳ ವಿರುದ್ಧ ಎಫ್ಐಆರ್, ಓರ್ವ ಆಫೀಸರ್ ಅರೆಸ್ಟ್

ಬಿಎಂಟಿಸಿಯ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ನಕಲು ಸಹಿ ಮಾಡಿ ಸಂಸ್ಥೆಗೆ ಕೋಟ್ಯಂತರ ರೂಪಾಯಿ ವಂಚಿಸಿದ ಸಂಬಂಧ ಸಂಸ್ಥೆಯ ಅಧಿಕಾರಿ, ಸಿಬ್ಬಂದಿ ವಿರುದ್ಧ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೀಗ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇನ್ನುಳಿದವರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಕೋಟಿ ಕೋಟಿ ಹಣ ಅಕ್ರಮ: ಬಿಎಂಟಿಸಿಯ 7 ಅಧಿಕಾರಿಗಳ ವಿರುದ್ಧ ಎಫ್ಐಆರ್, ಓರ್ವ ಆಫೀಸರ್ ಅರೆಸ್ಟ್
Kiran Surya
| Edited By: |

Updated on:Oct 04, 2023 | 9:36 AM

Share

ಬೆಂಗಳೂರು, (ಅಕ್ಟೋಬರ್ 04): ಬಿಎಂಟಿಸಿಯ(BMTC) ಕಮರ್ಷಿಯಲ್ ವಿಭಾಗದಲ್ಲಿ ಕೋಟಿ ಕೋಟಿ ಹಣ ಅಕ್ರಮ ನಡೆದಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿಯ ಹಿರಿಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅಸಿಸ್ಟೆಂಟ್ ಸೆಕ್ಯುರಿಟಿ ಅಂಡ್ ವಿಜಿಲೆನ್ಸ್ ಅಧಿಕಾರಿ ಸಿ.ಕೆ ರಮ್ಯ ನೀಡಿದ ದೂರಿನ ಅನ್ವಯ ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೋಲಿಸ್ ಠಾಣೆಯಲ್ಲಿ ಏಳು ಜನ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಎ1 ಆರೋಪಿ ಶ್ರೀರಾಮ್ ಮುಲ್ಕಾವನ್ ಎನ್ನುವರನ್ನು ಪೊಲೀಸರು ಬಂಧಿಸಿದ್ದು, ಇನ್ನುಳಿದ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಬಿಎಂಟಿಸಿಯ ಹಿಂದಿನ ಎಂಡಿ ಶಿಖಾ ಮತ್ತು ಹಿಂದಿನ ಬಿಎಂಟಿಸಿಯ ಭದ್ರತಾ ಮತ್ತು ಜಾಗೃತ ದಳದ ನಿರ್ದೇಶಕ ಅರುಣ್. ಕೆ ಸಹಿಗಳನ್ನು ಕಲರ್ ಜೆರಾಕ್ಸ್ ಮಾಡುವ ಮೂಲಕ ನಕಲಿ ದಾಖಲೆಗಳನ್ನು ಸೃಷ್ಟಿ ಕೋಟಿ ಕೋಟಿ ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದೀಗ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಏಳು ಜನರನ್ನು ಕಮರ್ಷಿಯಲ್ ವಿಭಾಗದಿಂದ ಬೇರೆಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿದೆ.

ಆರೋಪಿಗಳ ಪಟ್ಟಿ

  • A1 ಶ್ರೀ‌ ರಾಮ್ ಮುಲ್ಕಾವನ್ ( ಅಂದಿನ ) ಮುಖ್ಯ ಸಂಚಾರ ವ್ಯವಸ್ಥಾಪಕರು)
  • A2ಶ್ಯಾಮಲಾ. ಎಸ್. ಮದ್ದೋಡಿ, (ವಿಭಾಗೀಯ ಸಂಚಾರ ಅಧಿಕಾರಿ)
  • A3 ಮಮತಾ. ಬಿ.ಕೆ, ಸಹಾಯಕ( ಸಹಾಯಕ ಸಂಚಾರ ವ್ಯವಸ್ಥಾಪಕರು)
  • A4 ಅನಿತಾ.ಟಿ , (ಸಹಾಯಕ ಸಂಚಾರ ಅಧೀಕ್ಷಕಿ)
  • A5 ಗುಣಶೀಲ, (ಸಹಾಯಕ ಸಂಚಾರ ನಿರೀಕ್ಷಕಿ) A6 ವೆಂಕಟೇಶ್. ಆರ್, (ಕಿರಿಯ ಸಹಾಯಕ)
  • A7 ಪ್ರಕಾಶ್ ಕೊಪ್ಪಳ, (ಕಿರಿಯ ಸಹಾಯಕ)

ಹಿಂದೆ ಬಿಎಂಟಿಸಿಯಲ್ಲಿ ಎಂಡಿಗಳಾಗಿದ್ದ ಶಿಖಾ, ರೇಜು ಮತ್ತು ಭದ್ರತಾ ಮತ್ತು ‌ಜಾಗೃತದಳದ ನಿರ್ದೇಶಕ ಅರುಣ್. ಕೆ ಸಹಿಯನ್ನು ಪೋರ್ಜರಿ ಮಾಡಿದ್ದಾರೆ. ಒಂದು ಕಡತದಲ್ಲಿ 10 ಕೋಟಿ 50 ಲಕ್ಷ ಹಾಗೂ ಮತ್ತೊಂದು ಕಡತದಲ್ಲಿ 6 ಕೋಟಿ 91 ಲಕ್ಷ ಹಾಗೂ 21 ಲಕ್ಷದ 64 ಸಾವಿರ, 1 ಲಕ್ಷದ 5 ಸಾವಿರ ಹೀಗೆ ಒಟ್ಟು ಸುಮಾರು 17 ಕೋಟಿ 64 ಲಕ್ಷ ರುಪಾಯಿ ಸಂಸ್ಥೆಗೆ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಟಿವಿ‌9 ರಹಸ್ಯ ಕಾರ್ಯಾಚರಣೆ ಬಳಿಕ BMTC ಎಂಡಿ ತನಿಖೆಗೆ ಆದೇಶಿಸಿದ್ದರು. ಸಾಕಷ್ಟು ಬಾರಿ ವಾರ್ನಿಂಗ್ ನೀಡಿದರೂ ಅಲ್ಲಲ್ಲಿ ಅಕ್ರಮ ನಡೆಯುತ್ತಲೆ ಇತ್ತು. ಅಧಿಕಾರಿಗಳು ಗೂಗಲ್​ಪೇ, ಫೋನ್​ಪೇ ಮೂಲಕ 4-5 ಲಕ್ಷ ರೂ. ಲಂಚ ತೆಗೆದುಕೊಂಡಿರುವುದು ಸಾಬೀತಾಗಿದೆ. ಈ ಪ್ರಕರಣ ಸಂಬಂಧ 7 ಅಧಿಕಾರಿಗಳು, ಸಿಬ್ಬಂದಿ ಅಮಾನತು ಮಾಡಿದ್ದಾರೆ. ಅಮಾನತು ಮಾಡಿದ್ರೆ ಸಾಕಾಗಲ್ಲ, ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಚಾಲಕರು, ನಿರ್ವಾಹಕರಿಗೆ ಅಧಿಕಾರಿಗಳು ಕಿರುಕುಳ ನೀಡುವುದು ಸರಿಯಲ್ಲ. ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮಕ್ಕೆ ಸೂಚಿಸಿದ್ದೇನೆ ಎಂದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:08 am, Wed, 4 October 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!