AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ ಆರೋಪ; ಬೆಂಗಳೂರಿನಲ್ಲಿ ಆಂಧ್ರದ ಮೂವರ ವಿರುದ್ಧ ಎಫ್​ಐಆರ್ ದಾಖಲು

ವಿ.ಎಸ್​. ಗಾರ್ಡನ್​ನಲ್ಲಿ ಹಿಂದೂಗಳಿಗೆ ತೆಲುಗು ಭಾಷೆಯಲ್ಲಿದ್ದ ಏಸುಕ್ರಿಸ್ತನ ಕರಪತ್ರ ಹಂಚಿ ಹಣದ ಆಮಿಷವೊಡ್ಡಿ ಹಿಂದೂ ಧರ್ಮದ ಬಗ್ಗೆ ಅಪಪ್ರಚಾರ ಮಾಡಿ ಮತಾಂತರ ಮಾಡಲು ಯತ್ನ ನಡೆದಿದೆ.

ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ ಆರೋಪ; ಬೆಂಗಳೂರಿನಲ್ಲಿ ಆಂಧ್ರದ ಮೂವರ ವಿರುದ್ಧ ಎಫ್​ಐಆರ್ ದಾಖಲು
ಜೆ.ಜೆ.ನಗರ ಪೊಲೀಸ್ ಠಾಣೆ
TV9 Web
| Edited By: ಆಯೇಷಾ ಬಾನು|

Updated on: Dec 29, 2022 | 11:20 AM

Share

ಬೆಂಗಳೂರು: ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ ಆರೋಪ ಹಿನ್ನೆಲೆ ಬೆಂಗಳೂರಿನಲ್ಲಿ ಆಂಧ್ರದ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಆಂಧ್ರ ಮೂಲದ ವಿಜಯ್​​, ಶೃತಿ, ನೆಲ್ಸನ್ ವಿರುದ್ಧ ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ವಿ.ಎಸ್​. ಗಾರ್ಡನ್​ನಲ್ಲಿ ಹಿಂದೂಗಳಿಗೆ ತೆಲುಗು ಭಾಷೆಯಲ್ಲಿದ್ದ ಏಸುಕ್ರಿಸ್ತನ ಕರಪತ್ರ ಹಂಚಿ ಹಣದ ಆಮಿಷವೊಡ್ಡಿ ಹಿಂದೂ ಧರ್ಮದ ಬಗ್ಗೆ ಅಪಪ್ರಚಾರ ಮಾಡಿ ಮತಾಂತರ ಮಾಡಲು ಯತ್ನ ನಡೆದಿದೆ. ಈ ಬಗ್ಗೆ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಮುಖಂಡರಾದ ಎಮ್​ಎಲ್ ಶಿವ ಕುಮಾರ್, ಪವನ್ ಮತ್ತು ಹರ್ಷ ಮುತಾಲಿಕ್ ಮುಂತದಾವರು ದೂರು ನೀಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಮತಾಂತರಗೊಂಡಿದ್ದ ಕುಟುಂಬ ಘರ್​ ವಾಪಸಿ; ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್‌

ತುಮಕೂರಿನಲ್ಲಿ ಕ್ರೈಸ್ತ ಮಿಷನರಿಗಳ ಮತಾಂತರ ಜಾಲ ಪತ್ತೆ: ಹಿಂದೂ ದೇವರುಗಳ ಬಗ್ಗೆ ಅವಮಾನ ಆರೋಪ

ತುಮಕೂರು: ಜಿಲ್ಲೆಯಲ್ಲಿ ವಿವಿಧ ಆಮಿಷಗಳನ್ನುವೊಡ್ಡಿ ಕ್ರೈಸ್ತ ಧರ್ಮ (Christianity)ಕ್ಕೆ ಮತಾಂತರ (Conversion) ಮಾಡಲು ಯತ್ನಿಸುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ನಿಮಗೆ ಪರಲೋಕ ಪ್ರಾಪ್ತಿಯಾಗುತ್ತದೆ, ಗಣೇಶ ಹಬ್ಬ ಸೇರಿದಂತೆ ಹಲವು ಹಿಂದೂ ಹಬ್ಬಗಳು (Hindu Festivals) ಮೂಡನಂಬಿಕೆಯಾಗಿದೆ ಎಂದು ಮತಾಂತರಿಗಳು ಹೇಳಿ ಹಿಂದೂ ದೇವಾನು ದೇವತೆಗಳನ್ನು ಅವಮಾನಿಸಿರುವುದಾಗಿ ಆರೋಪಿಸಿ ವ್ಯಕ್ತಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತುಮಕೂರಿನ ಮರಳೂರು ದಿಣ್ಣೆಯಲ್ಲಿ ಕ್ರೈಸ್ತ ಮಿಷನರಿಗಳ ಮತಾಂತರ ಜಾಲ ಪತ್ತೆಯಾಗಿದ್ದು, ಇಬ್ಬರು ಮಹಿಳೆಯರು ಹಾಗೂ ಓರ್ವ ವ್ಯಕ್ತಿಯಿಂದ ಮತಾಂತರ ಮಾಡಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ. ರವಿ ಎಂಬುವರ ಮನೆಗೆ ಬಂದ ಮತಾಂತರಿಗಳು ಹಿಂದೂ ದೇವರುಗಳ ಬಗ್ಗೆ ಅವಹೇಳನ ಮಾಡಿದ್ದು, ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ನಿಮಗೆ ಪರಲೋಕ ಪ್ರಾಪ್ತಿಯಾಗುತ್ತದೆ ಎಂದು ಆಮಿಷವೊಡ್ಡಿದ್ದಾರೆ.

ಅಷ್ಟೇ ಅಲ್ಲದೆ, ನಮ್ಮ ಧರ್ಮಕ್ಕೆ ಬಂದರೆ ಜೀವನದಲ್ಲಿ ಸದಾ ಆತ್ಮರಕ್ಷಣೆ‌ ಹೊಂದುವಿರಿ ಅಂತಾ ಹೇಳಿ ಮೂವರು ಮತಾಂತರಿಗಳು ಹಿಂದೂಗಳ ಮನಸ್ಸನ್ನು ಪರಿವರ್ತನೆ ಮಾಡಲು ಯತ್ನಿಸಿದ್ದಾರೆ. ಇಷ್ಟಕ್ಕೂ ಸುಮ್ಮನಾಗದ ಮತಾಂತರಿಗಳು ಇನ್ನೂ ಒಂದು ಹೆಜ್ಜೆ ಮುಂದಿಟ್ಟು ಗಣೇಶ ಹಬ್ಬ ಸೇರಿದಂತೆ ಹಲವು ಹಬ್ಬಗಳು ಮೂಡನಂಬಿಕೆಯಾಗಿದೆ. ದೇವರು ಒಬ್ಬನೇ 36 ಕೋಟಿ ದೇವರುಗಳು ಇಲ್ಲ ಎಂದು ಹೇಳಿ ಮತಾಂತರಕ್ಕೆ ಯತ್ನಿಸಿದ್ದಾರೆ. ಘಟನೆ ಸಂಬಂಧ ರವಿ ಎಂಬವರು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ