Fire Accident: ಬೆಂಗಳೂರಿನ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಅತ್ತಿಬೆಲೆಯಲ್ಲಿ ಪಾಟಕಿ ಗೋಡೌನ್​ನಲ್ಲಿ ನಡೆದ ಅಗ್ನಿ ದುರಂತದ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಪೈಪ್​ಲೈನ್ ರಸ್ತೆಯ ಚೋಳರಪಾಳ್ಯದಲ್ಲಿ ಇರುವ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿ ಶಾಮಕದಳದ ವಾಹನಗಳು ಸ್ಥಳಕ್ಕೆ ಆಗಮಿಸಿವೆ.

Follow us
Shivaprasad
| Updated By: Rakesh Nayak Manchi

Updated on:Oct 14, 2023 | 11:54 AM

ಬೆಂಗಳೂರು, ಅ.14: ಅತ್ತಿಬೆಲೆಯಲ್ಲಿ ಪಾಟಕಿ ಗೋಡೌನ್​ನಲ್ಲಿ ನಡೆದ ಅಗ್ನಿ ದುರಂತದ ಬೆನ್ನಲ್ಲೇ ಬೆಂಗಳೂರಿನಲ್ಲಿ (Bengaluru) ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಪೈಪ್​ಲೈನ್ ರಸ್ತೆಯ ಚೋಳರಪಾಳ್ಯದಲ್ಲಿ ಇರುವ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ರವಿಕುಮಾರ್​ ಎಂಬುವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಚೋಳರಪಾಳ್ಯದ ಮನೆಗಳಿರುವ ಪ್ರದೇಶದಲ್ಲಿ ಗುಡಿಕೈಗಾರಿಕೆ ರೀತಿ ಕಳೆದ ಐದು ವರ್ಷಗಳಿಂದ ಮನೆಯಲ್ಲೇ ಅಗರಬತ್ತಿ ಕಾರ್ಖಾನೆ ನಡೆಲಾಗುತ್ತಿದೆ. ಮನೆಯಲ್ಲಿ ಕಾರ್ಖಾನೆ ನಡೆಸುತ್ತಿರುವುದರಿಂದಾಗಿ ಗ್ರೌಂಡ್​ ಫ್ಲೋರ್​ನಲ್ಲಿ ಅಗರಬತ್ತಿ ತಯಾರಿಕೆಗೆ ಬೇಕಾಗಿದ್ದ ಲಿಕ್ವಿಡ್ ರಾಸಾಯನಿಕಗಳನ್ನು ಶೇಕರಿಸಿಡಲಾಗಿತ್ತು.

ಆದರೆ, ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿಯಿಂದಾಗಿ ಲಿಕ್ವಿಡ್ ರಾಸಾಯನಿಕಗಳಿದ್ದ ಕ್ಯಾನ್​ಗಳು ಬ್ಲಾಸ್ಟ್​​ ಆಗಿ ರಾಸಾಯನಿಕ ರಸ್ತೆಗೆ ಹರಿದಿದೆ. ಪರಿಣಾಮ ರಸ್ತೆಗೂ ಬೆಂಕಿ ಆವರಿಸಿದ್ದು, ಮನೆ ಮುಂದೆ ನಿಲ್ಲಿಸಿದ್ದ ಎಂಟು ಬೈಕ್​ಗಳು ಸುಟ್ಟು ಭಸ್ಮವಾಗಿವೆ.

ಇದನ್ನೂ ಓದಿ: ಅತ್ತಿಬೆಲೆ ಅಗ್ನಿ ದುರಂತ: ಸಾವಿನ ಸಂಖ್ಯೆ 16ಕ್ಕೆ ಏರಿಕೆ, ಪಟಾಕಿ ಖರೀದಿಸಲು ಹೋಗಿ ದುರಂತ ಅಂತ್ಯಕಂಡ

ಘಟನೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಮೂರು ವಾಹನಗಳೊಂದಿಗೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಸಂಭವಿಸುತ್ತಿದ್ದ ಹೆಚ್ಚಿನದ ಅನಾಹುತವನ್ನು ತಪ್ಪಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಜಯನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಸದ್ಯ, ವಿದ್ಯುತ್ ಶಾಕ್ ಸರ್ಕ್ಯೂಟ್​ ಆಗಿ ಬೆಂಕಿ ಹತ್ತಿಕೊಂಡಿರವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಈ ಕಾರ್ಖಾನೆ ಯಾರಿಗೆ ಸಂಬಂಧಿಸಿದ್ದು, ಲೈಸೆನ್ಸ್ ಪಡೆದಿದ್ದಾರಾ? ಎಂಬಿತ್ಯಾದಿ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:27 am, Sat, 14 October 23