ಬೆಂಗಳೂರು: ಶೂ, ಚಪ್ಪಲಿ ಗೋಡೌನ್​ನಲ್ಲಿ ಅಗ್ನಿ ಅವಘಡ, ಐದು ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಭಸ್ಮ

ಬೆಂಗಳೂರು ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ಶೂ, ಚಪ್ಪಲಿ ಗೋಡೌನ್​ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಐದು ಕೋಟಿಗೂ ಅಧಿಕ ಮೌಲ್ಯದ ಶೂಗಳು ಹಾಗೂ ಚಪ್ಪಲಿಗಳು ಸುಟ್ಟು ಭಸ್ಮವಾಗಿವೆ. ಗೋಡೌನ್​ ಬಳಿಯ ವಿದ್ಯುತ್ ಕಂಬಕ್ಕೆ ಕ್ಯಾಂಟರ್​ ಡಿಕ್ಕಿ ಹೊಡೆದಿದೆ. ಈ ವೇಳೆ ಗೋಡೌನ್​​ಗೆ ಸಂಪರ್ಕಿಸಿದ್ದ ವಿದ್ಯುತ್ ​​​ತಂತಿಯಿಂದ ಶಾರ್ಟ್​ಸರ್ಕ್ಯೂಟ್ ಉಂಟಾಗಿ ಬೆಂಕಿ ಹತ್ತಿಕೊಂಡಿದೆ.

ಬೆಂಗಳೂರು: ಶೂ, ಚಪ್ಪಲಿ ಗೋಡೌನ್​ನಲ್ಲಿ ಅಗ್ನಿ ಅವಘಡ, ಐದು ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಭಸ್ಮ
ಸಾಂದರ್ಭಿಕ ಚಿತ್ರ
Edited By: Rakesh Nayak Manchi

Updated on: Sep 15, 2023 | 6:40 AM

ಬೆಂಗಳೂರು, ಸೆ.15: ಹೊರ ವಲಯದಲ್ಲಿರುವ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ಶೂ, ಚಪ್ಪಲಿ ಗೋಡೌನ್​ನಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದ ಘಟನೆ ನಡೆದಿದೆ. ಘಟನೆಯಲ್ಲಿ ಐದು ಕೋಟಿಗೂ ಅಧಿಕ ಮೌಲ್ಯದ ಶೂಗಳು ಹಾಗೂ ಚಪ್ಪಲಿಗಳು ಸುಟ್ಟು ಭಸ್ಮವಾಗಿವೆ.

ಗೋಡೌನ್​ ಬಳಿಯ ವಿದ್ಯುತ್ ಕಂಬಕ್ಕೆ ಕ್ಯಾಂಟರ್​ ಡಿಕ್ಕಿ ಹೊಡೆದಿದೆ. ಈ ವೇಳೆ ಉತ್ತರಹಳ್ಳಿ ನಿವಾಸಿ ಶ್ರೀನಿವಾಸ್ ಎಂಬುವವರಿಗೆ ಸೇರಿದ ASR MARKETING ಮತ್ತು UNICORN MARKETING ಎಂಬ ಹೆಸರಿನ ಗೋಡೌನ್​​ಗೆ ಸಂಪರ್ಕಿಸಿದ್ದ ವಿದ್ಯುತ್ ​​​ತಂತಿಯಿಂದ ಶಾರ್ಟ್​ಸರ್ಕ್ಯೂಟ್ ಉಂಟಾಗಿ ಈ ಅವಘಡ ಸಂಭವಿಸಿದೆ.

ಇದನ್ನೂ ಓದಿ: ವಿಯೆಟ್ನಾಂ: 9 ಅಂತಸ್ತಿನ ಅಪಾರ್ಟ್​ಮೆಂಟ್​​ನಲ್ಲಿ ಅಗ್ನಿ ದುರಂತ, 56 ಮಂದಿ ಸಾವು

ಅಗ್ನಿ ಅವಘಡದಿಂದ ಗೋಡೌನ್​​​​​ನಲ್ಲಿದ್ದ ಅಪಾರ ಮೌಲ್ಯ ಶೂ, ಚಪ್ಪಲಿ ನಾಶಗೊಂಡವೆ. ಪ್ರತಿಷ್ಠಿತ ಕಂಪನಿಗಳ ಶೂ, ಚಪ್ಪಲಿಗಳನ್ನು ಶ್ರೀನಿವಾಸ್ ಅವರು ವಿತರಣೆ ಮಾಡುತ್ತಿದ್ದರು. ಬೆಂಗಳೂರಿನ ಬಹುತೇಕ ಅಂಗಡಿಗಳಿಗೆ ಶೂ, ಚಪ್ಪಲಿಗಳು ಈ ಗೋಡೌನ್​ನಿಂದಲೇ ಪೂರೈಕೆ ಆಗುತ್ತಿದ್ದವು. ಹೀಗಾಗಿ ಕೋಟ್ಯಾಂತರ ರೂಪಾಯಿ ಮೌಲ್ಯದ ಚಪ್ಪಳಿ ಶೂಗಳನ್ನು ಇಲ್ಲಿ ಶೇಕರಿಸಿ ಇಡಲಾಗಿತ್ತು.

ಗೋಡೌನ್​ನಲ್ಲಿ 100ಕ್ಕೂ ಹೆಚ್ಚು ಜನ ಕೆಲಸ ಮಾಡುತ್ತಿದ್ದರು. ಆದರೆ ಅಗ್ನಿ ಅವಘಡದಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಏಳಕ್ಕೂ ಹೆಚ್ಚು ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

ಗೋಡೌನ್ ಸ್ಥಿತಿ ಕಂಡು ಮಾಲೀಕ ಶ್ರೀನಿವಾಸ್ ಕಣ್ಣೀರು ಹಾಕಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಕೆಂಗೇರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Loading...
Unable to load recommendations.
Follow Us