ಬೆಂಗಳೂರಿನ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಅಗ್ನಿ ಅವಘಡ

| Updated By: ವಿವೇಕ ಬಿರಾದಾರ

Updated on: Mar 18, 2024 | 2:27 PM

ಬೆಂಗಳೂರಿನ ಭೈರತಿ ಬಳಿ ಇರುವ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರಿನ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಅಗ್ನಿ ಅವಘಡ
ಅಗ್ನಿ ಅವಘಡ
Follow us on

ಬೆಂಗಳೂರು, ಮಾರ್ಚ್​ 18: ಬೆಂಗಳೂರಿನ (Bengaluru) ಭೈರತಿ ಬಳಿ ಇರುವ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಅಗ್ನಿ ಅವಘಡ (Fire accident) ಸಂಭವಿಸಿದ್ದು, ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ. 8ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಮತ್ತು 20ಕ್ಕೂ ಹೆಚ್ಚು ಸಿಬ್ಬಂದಿಯಿಂದ ಬೆಂಕಿ ನಂದಿಸಲಾಗಿದೆ. ಕೊತ್ತನೂರು ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗೋದಾಮಿನಲ್ಲಿ ಡಿ ಮಾರ್ಟ್ ಸೇರಿದಂತೆ ಪ್ರತಿಷ್ಠಿತ ಸೂಪರ್ ಮಾರ್ಕೆಟ್​ಗಳಿಗೆ ಸಾಗಿಸುವ ಸಾಮಗ್ರಿಗಳನ್ನು ಸಂಗ್ರಹಿಸಲಾಗಿದ್ದತ್ತು.

ಟಿಂಬರ್ ಮಳಿಗೆಗೆ ಬೆಂಕಿ, ಲಕ್ಷಾಂತರ ಮೌಲ್ಯದ ಪದಾರ್ಥಗಳು ನಾಶ

ಮೈಸೂರು: ಆಂದೋಲನ ವೃತ್ತ ಬಳಿ ಇರುವ ಯೂಸ್ರಾ ಎಂಟರ್​ಪ್ರೈಸಸ್ ಅಂಗಡಿಗೆ ಬೆಂಕಿ ತಗುಲಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಪದಾರ್ಥಗಳು ನಾಶವಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಕುವೆಂಪುನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಉಡುಪಿಯಲ್ಲಿ ರಣ ಬಿಸಿಲು: ಅಗ್ನಿಶಾಮಕ ವಾಹನಗಳು ಗುಜರಿ ಸೇರಿವೆ, ಅಗ್ನಿ ಅವಘಡಕ್ಕೆ ಮುಂಚೆ ಎಚ್ಚೆತ್ತುಕೊಳ್ಳಬೇಕಿದೆ!

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ

ಬೆಂಗಳೂರಿನ ನಾಯಂಡನಹಳ್ಳಿ ಮೆಟ್ರೋ ನಿಲ್ದಾಣ ಬಳಿ ಮಾರ್ಚ್​ 2ರ ತಡರಾತ್ರಿ ಚಲಿಸುತ್ತಿದ್ದ ಸೆಂಟ್ರೋ ಕಾರಿಗೆ ಬೆಂಕಿ ಹೊತ್ತಿ ಕೊಂಡಿತ್ತು.  ಟ್ಯಾನರಿ ರಸ್ತೆಯಿಂದ ಚನ್ನಪಟ್ಟಣಕ್ಕೆ ಕಾರಿನಲ್ಲಿ ಕುಟುಂಬವೊಂದು ಪ್ರಯಾಣಿಸುತ್ತಿತ್ತು. ಈ ವೇಳೆ ಕಾರಿನ ಹಿಂಬದಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ರಸ್ತೆಯಲ್ಲೆ ಕಾರು ನಿಲ್ಲಿಸಿ ಇಡೀ ಕುಟುಂಬ ಕಾರಿನಿಂದ ಕೆಳಗೆ ಇಳಿದಿದೆ. ನೋಡು ನೋಡುತಿದ್ದಂತೆ ಇಡೀ ಕಾರಿಗೆ ಬೆಂಕಿ ಆವರಿಸಿ ಆಹುತಿಯಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದರು. ಘಟನೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:50 am, Mon, 18 March 24