Bengaluru: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ

Bengaluru Fire Accident: ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯ ನಡುವೆಯೂ ಬೆಂಕಿ ಆರಿಲ್ಲ. ಎರಡು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಜಮಾವಣೆ ಆಗಿವೆ. ಬೆಂಕಿ ನಂದಿಸಲು ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

Bengaluru: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ; ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ
ಬೆಂಗಳೂರಿನಲ್ಲಿ ಅಗ್ನಿ ಅವಘಡ


ಬೆಂಗಳೂರು: ನಗರದ ಶಾಂತಿನಗರ ನಂಜಪ್ಪ ಸರ್ಕಲ್ ಬಳಿ ಮನೆಯೊಂದರಲ್ಲಿ ಅಗ್ನಿ ಆಕಸ್ಮಿಕ ಉಂಟಾದ ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ಕೈಗೊಳ್ಳಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಇಲ್ಲ ಎಂದು ತಿಳಿದುಬಂದಿದೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯ ನಡುವೆಯೂ ಬೆಂಕಿ ಆರಿರಲಿಲ್ಲ. ಮೂರು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಜಮಾವಣೆ ಆಗಿ, ಬೆಂಕಿ ನಂದಿಸಲು ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.

ಮಹಾರಾಷ್ಟ್ರದ ಸಾಂಗ್ಲಿ ಮೂಲದವರು ಮನೆಯಲ್ಲಿ ವಾಸವಿದ್ದರು. ಮನೆಯಲ್ಲಿ ದೇವರಿಗೆ ಹಚ್ಚಿದ್ದ ದೀಪ ಬಿದ್ದು ಘಟನೆ ಸಾಧ್ಯತೆ ಅಂದಾಜಿಸಲಾಗಿದೆ. ಒಟ್ಟು ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿ ಸಂಪೂರ್ಣವಾಗಿ ವುಡ್​ವರ್ಕ್ ಮಾಡಿಸಲಾಗಿತ್ತು. ವುಡ್​ವರ್ಕ್ ಮಾಡಿಸಿದ್ದ ಹಿನ್ನೆಲೆ ಮನೆಗೆ ವ್ಯಾಪಿಸಿದ ಬೆಂಕಿ ವ್ಯಾಪಿಸಿದೆ ಎಂದು ಮಾಹಿತಿ ತಿಳಿದುಬಂದಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯ ಬಳಿಕೆ ಬೆಂಕಿ ನಂದಿಸಿದ್ದಾರೆ. ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಸಂಜೆ 5:30 ರ ಸುಮಾರಿಗೆ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿರುವುದಾಗಿ ಮಾಹಿತಿ ಬಂದಿತ್ತು. ಕೂಡಲೇ ಸ್ಥಳಕ್ಕೆ ಬಂದು ಮೂರು ಅಗ್ನಿಶಾಮಕ ವಾಹನಗಳಿಂದ, 30 ಜನ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದಾರೆ. ಮನೆಯ ಮೊದಲ ಹಾಗೂ ಎರಡನೇ ಮಹಡಿ ಸಂಪೂರ್ಣ ಬೆಂಕಿಯಿಂದ ಹಾನಿಯಾಗಿದೆ. ಅಕ್ಕ- ಪಕ್ಕದ ಮನೆಗಳಿಗೆ ಅಗ್ನಿ ವ್ಯಾಪಿಸದಂತೆ ಮೊದಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಯ್ತು. ಆ ಬಳಿಕ ಮನೆಯ ಒಳಭಾಗಕ್ಕೆ ತೆರಳಿ ಎರಡು ಮಹಡಿಯ ಬೆಂಕಿಯನ್ನ ನಂದಿಸಿದ್ದೇವೆ. ಇದುವರೆಗೂ ಅಗ್ನಿ ಅವಘಡಕ್ಕೆ ಸರಿಯಾದ ಕಾರಣ ತಿಳಿದು ಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆಯೋ, ದೀಪದಿಂದ ಅಗ್ನಿ ಹೊತ್ತಿದೆಯಾ ತನಿಖೆ ಬಳಿಕ ಗೊತ್ತಾಗಬೇಕಿದೆ ಎಂದು ಡಿಎಫ್​ಓ ಹೇಮಂತ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Bengaluru: ಬೆಂಗಳೂರಿನ ಯಾವ ಪ್ರದೇಶದಲ್ಲಿ ಎಷ್ಟು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದೆ? ಇಲ್ಲಿದೆ ವಿವರ

ಇದನ್ನೂ ಓದಿ: ಮುಂಬೈನ ಕುರ್ಲಾದಲ್ಲಿ ಅಗ್ನಿ ಅವಘಡ: 20 ದ್ವಿಚಕ್ರವಾಹನಗಳು ಸುಟ್ಟು ಭಸ್ಮ

Click on your DTH Provider to Add TV9 Kannada