ಬೆಂಗಳೂರಿನಲ್ಲಿ ಹೆಚ್ಚಾದ ಅಗ್ನಿ ದುರಂತ: ಅಪಾರ್ಟ್ಮೆಂಟ್, ಅಂಗಡಿ, ಹೋಟೆಲ್, ರೆಸ್ಟೋರೆಂಟ್ಗಳನ್ನು ಪರಿಶೀಲಿಸುವಂತೆ ಸೂಚನೆ
ಬೆಂಗಳೂರಿನಲ್ಲಿ ಪದೇ ಪದೇ ಅಗ್ನಿ ಅವಘಡಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಪಬ್, ಹೋಟೆಲ್, ರೆಸ್ಟೋರೆಂಟ್, ಬೃಹತ್ ಮಳಿಗೆಗಳನ್ನು ಪರಿಶೀಲನೆ ನಡೆಸುವಂತೆ ಇಲಾಖೆ ಅಧಿಕಾರಿಗಳಿಗೆ, ಅಗ್ನಿಶಾಮಕ ಇಲಾಖೆ ಡಿಜಿ ಕಮಲ್ ಪಂತ್ ಮೌಖಿಕ ಆದೇಶ ನೀಡಿದ್ದಾರೆ.
ಬೆಂಗಳೂರು ಅ.19: ನಗರದ ವಿವಿಧ ಪ್ರದೇಶಗಳಲ್ಲಿ ಕಳೆದ ಒಂದು ವರ್ಷದಲ್ಲಿ ಹಲವು ಅಗ್ನಿ ದುರಂತಗಳು (Fire Accident) ಸಂಭವಿಸಿವೆ. ಕಳೆದ ಒಂದು ತಿಂಗಳಲ್ಲಿ ವಿಜಯನಗರ, ಚಾಮರಾಜಪೇಟೆ, ಲಗ್ಗೆರೆ ಮತ್ತು ನಿನ್ನೆ (ಅ.19) ಕೋರಮಂಗಲದಲ್ಲಿ (Kormangala) ಅಗ್ನಿ ಅವಘಡ ಸಂಭವಿಸಿತ್ತು. ಈ ದುರಂತದಲ್ಲಿ ಅಪಾರ ಪ್ರಮಾಣದ ಆಸ್ತ-ಪಾಸ್ತಿ ಹಾನಿಯಾಗಿದೆ. ಬೆಂಗಳೂರಿನಲ್ಲಿ (Bengaluru) ಪದೇ ಪದೇ ಅಗ್ನಿ ಅವಘಡಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಪಬ್, ಹೋಟೆಲ್, ರೆಸ್ಟೋರೆಂಟ್, ಬೃಹತ್ ಮಳಿಗೆಗಳನ್ನು ಪರಿಶೀಲನೆ ನಡೆಸುವಂತೆ ಇಲಾಖೆ ಅಧಿಕಾರಿಗಳಿಗೆ, ಅಗ್ನಿಶಾಮಕ ಇಲಾಖೆ ಡಿಜಿ ಕಮಲ್ ಪಂತ್ ಮೌಖಿಕ ಆದೇಶ ನೀಡಿದ್ದಾರೆ.
ಇತ್ತಿಚೇಗಿನ ಅಗ್ನಿ ಅವಘಡಗಳಲ್ಲಿ ಸೂಕ್ತ ಮುಂಜಾಗ್ರತ ಕ್ರಮ ಅನುಸರಿಸುತ್ತಿಲ್ಲ. ತ್ವರಿತಗತಿಯಲ್ಲಿ ಬೆಂಕಿ ನಂದಿಸುವ ಸಲಕರಣೆ ವ್ಯವಸ್ಥಿತಗೊಳಿಸದಿರುವುದು ಕಂಡು ಬಂದಿದೆ. ಹೀಗಾಗಿ ಮಳಿಗೆಗಳು ಸೇರಿದಂತೆ ನಗರದ ಎಲ್ಲಾ ಬಹುಮಹಡಿ ಕಟ್ಟಡಗಳು, ಅಪಾರ್ಟ್ಮೆಂಟ್ಗಳ ಪರಿಶೀಲನೆಗೆ ಸೂಚನೆ ನೀಡಿದ್ದಾರೆ. ನಿಯಮ ಪಾಲಿಸದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಅಗ್ನಿಶಾಮಕ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ನಾಳೆ (ಅ.20) ರಿಂದ ಪರಿಶೀಲನೆ ನಡೆಸಲಿದ್ದಾರೆ.
ಇದನ್ನೂ ಓದಿ: ಅತ್ತಿಬೆಲೆ ಅಗ್ನಿ ದುರಂತ ಪ್ರಕರಣ: ಮ್ಯಾಜಿಸ್ಟೀರಿಯಲ್ ತನಿಖೆಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರಿನ ಫೋರಂ ಮಾಲ್ ಬಳಿ ಅಗ್ನಿ ಅವಘಡ
ಅಕ್ಟೋಬರ್ 18 ರಂದು ಕೊರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಮಾರುತಿ ಕಾರು ಷೋ ರೂಂನ ನಾಲ್ಕನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ನಾಲ್ಕನೇ ಮಹಡಿಯಲ್ಲಿದ್ದ ಮಡ್ ಪೈಪ್ ಹುಕ್ಕಾ ಕೆಫೆನಲ್ಲಿದ್ದ ಕಟ್ಟಡದಲ್ಲಿದ್ದ 8ರಿಂದ 10 ಸಿಲಿಂಡರ್ಗಳು ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿತ್ತು. ಪ್ರಾಣ ಉಳಿಸಿಕೊಳ್ಳಲು ಪ್ರೇಮ್ ಸಿಂಗ್ ಎಂಬುವರು ನಾಲ್ಕನೇ ಮಹಡಿಯಿಂದ ಗಿಡದ ಮೇಲೆ ಜಿಗಿದಿದ್ದರು. ಅವರಿಗೆ ಗಾಯಗಳಾಗಿದ್ದು, ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಕ್ಕದ ಕಟ್ಟಡಕ್ಕೂ ಬೆಂಕಿ ಹರಡಿತ್ತು.
ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದರು. ನಾಲ್ಕು ಮಹಡಿಯ ಕಟ್ಟಡದಲ್ಲಿ, ಗ್ರೌಂಡ್ ಮತ್ತು ಮೊದಲ ಮಹಡಿಯಲ್ಲಿ ಕಾರು ಷೋ ರೂಂ ಇದೆ. ಎರಡು ಮತ್ತು ಮೂರನೇ ಮೂರನೇ ಮಹಡಿಯಲ್ಲಿ ಹುಕ್ಕಾ ಬಾರ್ ನಡೆಸಲಾಗುತ್ತಿತ್ತು. ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:19 am, Thu, 19 October 23