ಬೆಂಗಳೂರಿನ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ, ಹಲವರು ಸಿಲುಕಿರುವ ಶಂಕೆ

| Updated By: ರಮೇಶ್ ಬಿ. ಜವಳಗೇರಾ

Updated on: Apr 05, 2024 | 4:07 PM

ಬೆಂಗಳೂರು ನಗರದ ಆರ್.ಟಿ.ನಗರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಆರ್.ಟಿ.ನಗರ ಪೊಲೀಸರ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ, ಹಲವರು ಸಿಲುಕಿರುವ ಶಂಕೆ
ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ
Follow us on

ಬೆಂಗಳೂರು, (ಏಪ್ರಿಲ್ 05): ನಗರದ ಆರ್.ಟಿ.ನಗರದಲ್ಲಿ (RT Nagar)  ಅಗ್ನಿ ಅವಘಡ ಸಂಭವಿಸಿದೆ. ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ (Miracle Drinks Building) ಆಕಸ್ಮಿಕ ಅಗ್ನಿ (fire ) ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಆರ್.ಟಿ.ನಗರ ಪೊಲೀಸರ ದೌಡಾಯಿಸಿದ್ದು, ಪಕ್ಕದ ಕಟ್ಟಡಕ್ಕೆ ಏಣಿ ಇಟ್ಟು ಕಟ್ಟಡದಲ್ಲಿದ್ದವರ ರಕ್ಷಣಾ ಕಾರ್ಯಚರಣೆ ನಡೆಸಿದ್ದಾರೆ.

ಕಟ್ಟಡದ ನೆಲಮಹಡಿಯಲ್ಲಿದ್ದ ಡಿಜಿ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ಅಗ್ನಿ ಶಾಮಕ ದಳ, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದ ಜೊತೆ ಕಟ್ಟದಲ್ಲಿ ಸಿಲುಕಿಕೊಂಡವರ ರಕ್ಷಣಾ ಕಾರ್ಯಚರಣೆ ನಡೆಸಿದ್ದಾರೆ.

ಮೊದಲಿಗೆ ಡಿಜೆ ಸ್ಫೋಟಗೊಂಡು ಮಿರಾಕಲ್ ಡ್ರಿಂಕ್ಸ್ ನ ಗ್ರೌಂಡ್ ಫ್ಲೋರ್ ಕಚೇರಿಯಲ್ಲಿ ಬೆಂಕಿ ಉಂಟಾಗಿತ್ತು. ತದನಂತರ ಬೆಂಕಿಯ ಕೆನ್ನಾಲಿಗೆ ಎರಡೂ ಫ್ಲೋರ್​ಗೂ ವ್ಯಾಪಿಸಿದೆ. ಬೆಂಕಿ, ಹೊಗೆಯಿಂದ ಕಟ್ಟಡದಿಂದ ಹೊರಬರಲು ಸಿಬ್ಬಂದಿ ಪರದಾಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಏಣಿ ಮೂಲಕ ಪಕ್ಕದ ಕಟ್ಟಡಕ್ಕೆ ಸಿಬ್ಬಂದಿಯನ್ನು ಸ್ಥಳಾಂತರಿಸಿದ್ದಾರೆ. ಸದ್ಯ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ. ಕೆಲವರಿಗೆ ಬೆಂಕಿಯ ಹೊಗೆಯಿಂದ ಉಸಿರಾಟದ ಸಮಸ್ಯೆಯಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ಸಚಿವ ಬೈರತಿ ಸುರೇಶ್ ಭೇಟಿ

ವಿಷಯ ಗೊತ್ತಾಗುತ್ತಿದ್ದಂತೆಯೇ ಸಚಿವ ಬೈರತಿ ಸುರೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರಿಂದ ಯಿಂದ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಇಂದು (ಏಪ್ರಿಲ್ 05) ಮಧ್ಯಾಹ್ನ 12.45ರ ಸಮಯದಲ್ಲಿ ಈ ಅಗ್ನಿ ದುರಂತ ಆಗಿದೆ. ಪೊಲೀಸರಿಂದ ಮಾಹಿತಿ ಕೇಳಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಆಗಿದೆ ಅಂದ್ರು. ಎಲೆಕ್ಟ್ರಿಕ್ ತಜ್ಞರಿಂದ ವರದಿ ಕೇಳಿದ್ದೇವೆ ಎಂದು ಹೇಳಿದರು.

ಇದರಲ್ಲಿ ಹನ್ನೊಂದು ಜನರು ಒಳಗಡೆ ಸಿಕ್ಕಾಕೊಂಡಿದ್ರು. ಎಲ್ಲರನ್ನೂ ರಕ್ಷಣೆ ಮಾಡಿದ್ದು, ಎಂಟು ಜನರನ್ನ ಆಸ್ಪತ್ರೆಗೆ ಸೇರಿಸಲಾಗಿದೆ. ಅದರಲ್ಲಿ ಒಬ್ಬರಿಗೆ ಸ್ವಲ್ಪ ಜಾಸ್ತಿ ತೊಂದರೆ ಆಗಿದೆ. ಉಳಿದವರು ಔಟ್ ಆಪ್ ಡೇಂಜರ್ ಇದಾರೆ. ಇದು ಖಾಸಗಿ ಬಿಲ್ಡಿಂಗ್ ಆಗಿದ್ದು, ಬಾಡಿಗೆ ನೀಡಲಾಗಿದೆ. ಜನ ಸುರಕ್ಷಿತವಾಗಿದ್ದಾರೆ. ಯಾರಿಗೂ ಏನೂ ಆಗಿಲ್ಲ ಘಟನೆಗೆ ಅಸಲಿ ಕಾರಣ ಗೊತ್ತಾಗಿಲ್ಲ. ಅದ್ರ ಬಗ್ಗೆ ತನಿಖೆ ನಡೆಯುತ್ತಿದೆ. ಏನಾದ್ರು ಲಾಸ್ ಆಗಿದ್ರೆ ಇನ್ಸುರೆನ್ಸ್ ನಿಂದ ಕ್ಲೈಮ್ ಮಾಡಿಕೊಳ್ಳುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Fri, 5 April 24