AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಒಕಿನೊವಾ ಶೋರೂಮ್​

ಕಳೆದ ವರ್ಷ ನವೆಂಬರ್​ನಲ್ಲಿ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್​ನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಈ ಘಟನೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಜೀವ ದಹನವಾಗಿದ್ದರು. ಈ ಕರಾಳ ಸುದ್ದಿ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಎಲೆಕ್ಟ್ರಿಕ್ ಬೈಕ್​ ಶೋರೂಮ್​ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೈಕ್​ಗಳು ಸುಟ್ಟು ಭಸ್ಮವಾಗಿವೆ.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಒಕಿನೊವಾ ಶೋರೂಮ್​
ಎಲೆಕ್ಟ್ರಿಕ್​​​ ಬೈಕ್​​ ಶೋ ರೂಮ್​ನಲ್ಲಿ ಅಗ್ನಿ ಅವಘಡ
Follow us
Prajwal Kumar NY
| Updated By: ರಮೇಶ್ ಬಿ. ಜವಳಗೇರಾ

Updated on: Jan 27, 2025 | 4:00 PM

ಬೆಂಗಳೂರು, (ಜನವರಿ 27): ರಾಜಾಜಿನಗರದ ರಾಜ್‌ಕುಮಾರ್‌ ರಸ್ತೆಯಲ್ಲಿನ ಮತ್ತೊಂದು ಎಲೆಕ್ಟ್ರಿಕ್‌ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೈಕ್‌ಗಳು ಬೆಂಕಿಗಾಹುತಿಯಾಗಿವೆ. ಇಂದು (ಜನವರಿ 27) ಒಕಿನೊವಾ ಎಲೆಕ್ಟ್ರಿಕ್‌ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬ್ಯಾಟರಿ ಓವರ್‌ ಚಾರ್ಜ್‌ ಆಗಿ ಸ್ಫೋಟಿಸಿದ ಹಿನ್ನೆಲೆ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಶೋರೂಮ್​ನಲ್ಲಿದ್ದ ಸಿಬ್ಬಂದಿ ಹೊರಗೆ ಓಡಿ ಬಂದಿದ್ದಾರೆ. ಇದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದ್ರೆ, ಕಟ್ಟಡ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜಾಜಿನಗರದ ರಾಜ್​​ಕುಮಾರ್ ರಸ್ತೆಯಲ್ಲಿರುವ ಎಲೆಕ್ಟ್ರಿಕ್​ ಬೈಕ್​ ಶೋರೂಮ್​ನಲ್ಲಿ ಒಟ್ಟು 74 ಬೈಕ್​ಗಳು ಇದ್ದವು. ಈ ಪೈಕಿ 19 ಬೈಕ್​ಗಳು ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, 9 ಬೈಕ್​ಗಳಿಗೆ ಸ್ವಲ್ಪ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಬೆಂಗಳೂರು: ಮಹದೇವಪುರದಲ್ಲಿ ಬೈಕ್ ಶೋರೂಮಿಗೆ ಬೆಂಕಿ, ರೂ.1 ಕೋಟಿ ಮೌಲ್ಯದ ಬೈಕ್​ಗಳು ಅಗ್ನಿಗಾಹುತಿ

ಇನ್ನು ಲೈಸೆನ್ಸ್​ ಅವಧಿ ಮೀರಿದ ಬೈಕ್ ಮಾರಾಟ ಮಾಡುತ್ತಿದ್ದ ಆರೋಪದಡಿ ಶುಕ್ರವಾರವಷ್ಟೇ ಆರ್​​ಟಿಓ ಅಧಿಕಾರಿಗಳು ಈ ಶೋರೋಮ್​ ಮೇಲೆ ದಾಳಿ ಮಾಡಿದ್ದರು. ಕಡಿಮೆ ಸ್ಪೀಡ್ 25 ಕಿ.ಮೀ ಮತ್ತು ಕಡಿಮೆ ವ್ಯಾಟ್ ಬ್ಯಾಟರಿ ಬಳಕೆಗೆ ಅನುಮತಿ ನೀಡಲಾಗಿತ್ತು. ಆದ್ರೆ ಹೆಚ್ಚಿನ ಸ್ಪೀಡ್ ಹಾಗೂ ಒಂದು ಕಿಲೋ ವ್ಯಾಟ್ ಬ್ಯಾಟರಿ ಬಳಕೆ ಮಾಡಲಾಗಿದೆ. ಬ್ಯಾಟರಿ ಕ್ವಾಲಿಟಿ ಇಲ್ಲದಿದ್ದದ್ದೇ ಘಟನೆಗೆ ಕಾರಣ ಎಂದು ಮಾಹಿತಿ ಲಭ್ಯವಾಗಿದೆ.

ಅಗ್ನಿಶಾಮಕ ಅಧಿಕಾರಿ ಕಿಶೋರ್ ಹೇಳಿದ್ದೇನು?

ಇನ್ನು ಅಗ್ನಿ ಅವಘಡದ ಬಗ್ಗೆ ಅಗ್ನಿಶಾಮಕ ಅಧಿಕಾರಿ ಕಿಶೋರ್ ಪ್ರತಿಕ್ರಿಯಿಸಿದ್ದು, ಇಂದು ಮಧ್ಯಾಹ್ನ 2.06 ನಿಮಿಷಕ್ಕೆ ಅಗ್ನಿಶಾಮಕ ಕಂಟ್ರೋಲ್ ಗೆ ರೂಮ್ ಗೆ ಕಾಲ್ ಬಂದಿದೆ. ಬಳಿಕ ರಾಜಾಜಿನಗರ ಅಗ್ನಿಶಾಮಕ ಸೆಂಟರ್ ನಿಂದ ಎರಡು ವಾಹನ ಬಂದಿದೆ. ಬೆಂಕಿ ಸಂಪೂರ್ಣವಾಗಿ ನಂದಿಸಲಾಗಿದೆ. ಮೇಲ್ನೋಟಕ್ಕೆ ಶಾರ್ಟ್ ಸೆಕ್ಯೂರಿಟ್ ಅಥವಾ ಬ್ಯಾಟರಿ ಸ್ಪೋಟಗೊಂಡಿದೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ನಾಲ್ಕು ಮಂದಿ ಒಳಗೆ ಇದ್ರು. ಅವರು ಕೂಡಲೇ ಹೊರ ಬಂದಿದ್ದಾರೆ. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ಮಾಹಿತಿ ನೀಡಿದರು.

ಕಳೆದ ವರ್ಷ ಎಲೆಕ್ಟ್ರಿಕ್​ ಬೈಕ್​ ಶೋರೋಮ್​ನಲ್ಲಿ ಅಗ್ನಿ ದುರಂತದಲ್ಲಿ ಓರ್ವ ಯುವತಿ ಸಜೀವ ದಹನವಾಗಿದ್ದಳು. ಇದಾದ ಬಳಿಕ 2025ರ ಹೊಸ ವರ್ಷದ ಮೊದಲ ದಿನದಂದೇ ನಗರದ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬಿ ನಾರಾಯಣಪುರದಲ್ಲಿರುವ ಬೈಕ್ ಶೋರೂಮಿಗೆ ಬೆಂಕಿಬಿದ್ದು ಯಮಹಾ ಬ್ರ್ಯಾಂಡಿನ ಸುಮಾರು 60ಬೈಕ್ ಗಳು ಅಗ್ನಿಗಾಹುತಿಯಾಗಿದ್ದವು. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಶೋರೂಮ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ