ಶಾರ್ಟ್ ಸರ್ಕ್ಯೂಟ್​ನಿಂದ 3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ: ಸುಟ್ಟು ಕರಕಲಾಗಿದ ಶಾಮಿಯಾನ

3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ನಗರದ ಸುಬ್ರಹ್ಮಣ್ಯನಗರ ಪಾರ್ಕ್​ ಬಳಿಯ ಕಟ್ಟಡದಲ್ಲಿ ನಡೆದಿದೆ. ಕಟ್ಟಡದಲ್ಲಿದ್ದ ಜನರನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ತೆರವುಗೊಳಿಸಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶಾರ್ಟ್ ಸರ್ಕ್ಯೂಟ್​ನಿಂದ 3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಬೆಂಕಿ: ಸುಟ್ಟು ಕರಕಲಾಗಿದ ಶಾಮಿಯಾನ
ಅಗ್ನಿ ಅವಘಡ
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on: Jul 09, 2023 | 2:59 PM

ಬೆಂಗಳೂರು: 3 ಅಂತಸ್ತಿನ ಕಟ್ಟಡದ ನೆಲಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ (Fire breaks out) ಕಾಣಿಸಿಕೊಂಡಿರುವಂತಹ ಘಟನೆ ನಗರದ ಸುಬ್ರಹ್ಮಣ್ಯನಗರ ಪಾರ್ಕ್​ ಬಳಿಯ ಕಟ್ಟಡದಲ್ಲಿ ನಡೆದಿದೆ. ಕಟ್ಟಡದಲ್ಲಿದ್ದ ಜನರನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ತೆರವುಗೊಳಿಸಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಯ ತೀವ್ರತೆಗೆ ಶಾಮಿಯಾನ, ವಸ್ತುಗಳು ಸುಟ್ಟು ಕರಕಲಾಗಿವೆ. ಬೆಂಕಿಯ ತೀವ್ರತೆಗೆ ಇಡೀ ಕಟ್ಟಡ ತುಂಬಾ ದಟ್ಟ ಹೊಗೆ ವ್ಯಾಪಿಸಿದೆ. 2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲಾಗಿದೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬಾಬು ಎಂಬುವವರಿಗೆ ಶಾಮಿಯಾನ ಸೇರಿದ್ದು, ಪೈಬರ್ ಗೋಡೌನ್​ ಆಗಿದ್ದರಿಂದ ಬೆಂಕಿ ವ್ಯಾಪಿಸಿದೆ. ಸುಮಾರು 25 ಲಕ್ಷ ರೂ. ಅಧಿಕ ವಸ್ತುಗಳು ಸಂಪೂರ್ಣ ಬೆಂಕಿಗೆ ಆಹುತಿ ಆಗಿವೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್, ತಪ್ಪಿದ ಭಾರಿ ಅನಾಹುತ: 24 ನವಜಾತ ಶಿಶುಗಳು ಬೇರೆಡೆಗೆ ಶಿಫ್ಟ್

ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಆನೇಕಲ್​​: ದುಷ್ಕರ್ಮಿಗಳಿಂದ ತಡರಾತ್ರಿ ಕಾರಿಗೆ ಬೆಂಕಿ ಹಚ್ಚಿರುವಂತಹ ಘಟನೆ ಬೆಂಗಳೂರು ಹೊರವಲಯ ಬನ್ನೇರುಘಟ್ಟದ ಪೋಲೀಸ್ ಠಾಣಾ ವ್ಯಾಪ್ತಿಯ ಸಿಕೆ ಪಾಳ್ಯದಲ್ಲಿ ನಡೆದಿದೆ. ನಿನ್ನೆ ತಡ ರಾತ್ರಿ 12.40 ಗಂಟೆಗೆ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳಿಂದ ಮುನಿರಾಜು ಎಂಬುವವರಿಗೆ ಸೇರಿದ ಇನ್ನೋವಾ ಕಾರುಗೆ ಬೆಂಕಿ ಹಚ್ಚಿದ್ದಾರೆ.

ಯಾವ ಉದ್ದೇಶದಿಂದ ಕೃತ್ಯವೆಸಗಿದ್ದಾರೆ ಎಂಬುವುದು ಪೊಲೀಸ್​ ತನಿಖೆಯಿಂದ ಹೊರಬಿಳ್ಳಬೇಕಿದೆ. ಬೆಂಕಿ ಹಚ್ಚುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: Belagavi News: ಜೈನ ಸಾಧು-ಸಂತ, ಮಠಾಧೀಶರಿಗೆ ಸರ್ಕಾರ ರಕ್ಷಣೆ ಕೊಡಬೇಕು; 108ನೇ ಸಿದ್ದಸೇನ ಮಹಾರಾಜ

ವಿದ್ಯುತ್ ತಂತಿ ತುಂಡಾಗಿ ರಸ್ತೆ ಮೇಲೆ ಬಿದ್ದು ಕಾಣಿಸಿಕೊಂಡ ಬೆಂಕಿ

ಯಾದಗಿರಿ: ತುಂಡಾದ ವಿದ್ಯುತ್ ತಂತಿ ನೆಲಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡಿದ್ದು, ಭಾರಿ ಅನಾಹುತ ತಪ್ಪಿರುವಂತಹ ಘಟನೆ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿ ನಡೆದಿದೆ. ವಿದ್ಯುತ್​​ ತಂತಿ ತುಂಡಾಗಿ ಬಿದ್ದ ಮಾರ್ಗದಲ್ಲೇ ಸಾರಿಗೆ ಬಸ್​ ಬರುತ್ತಿದ್ದು, ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದೆ.

ಎರಡು ತಂತಿಗಳು ತುಂಡಾಗಿ ಬಿದ್ದಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಂಡ ಕೂಡಲೇ ಸ್ಥಳದಿಂದ ಜನರು ಓಡಿ ಹೋಗಿದ್ದಾರೆ. ಜೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?