ಬೆಂಗಳೂರು: ಪ್ಲಾಸ್ಟಿಕ್ ಪ್ಯಾಕಿಂಗ್ ಕವರ್ ಗೋಡೌನ್​​​​​ಗೆ ಬೆಂಕಿ

ಪ್ಲಾಸ್ಟಿಕ್ ಪ್ಯಾಕಿಂಗ್ ಕವರ್ ತಯಾರಿಕ ​ಗೋಡೌನ್​ಗೆ ಬೆಂಕಿ ತಗುಲಿ ಅಧಿಕ ಮೌಲ್ಯದ ಯಂತ್ರಗಳು ಸುಟ್ಟುಕರಕಲಾದ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ವೃಷಭಾವತಿ ನಗರದಲ್ಲಿ ನಡೆದಿದೆ.

ಬೆಂಗಳೂರು: ಪ್ಲಾಸ್ಟಿಕ್ ಪ್ಯಾಕಿಂಗ್ ಕವರ್ ಗೋಡೌನ್​​​​​ಗೆ ಬೆಂಕಿ
ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ದಳ ಸಿಬ್ಬಂದಿ
Follow us
|

Updated on: Apr 09, 2023 | 7:41 AM

ಬೆಂಗಳೂರು: ಪ್ಲಾಸ್ಟಿಕ್ ಪ್ಯಾಕಿಂಗ್ ಕವರ್ ತಯಾರಿಕ ಗೋಡೌನ್​​​​​ಗೆ ಬೆಂಕಿ ತಗುಲಿ ಅಧಿಕ ಮೌಲ್ಯದ ಯಂತ್ರಗಳು ಸುಟ್ಟುಕರಕಲಾದ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ವೃಷಭಾವತಿ ನಗರದಲ್ಲಿ ನಡೆದಿದೆ. ಯೋಗಿ ಪ್ಲೆಕ್ಸಿಬಲ್ ಪ್ಯಾಕೇಜಿಂಗ್ ಕಂಪನಿಯಲ್ಲಿ ಈ ಅವಘಡ ನಡೆದಿದ್ದು, ಎರಡು ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿಯಾಗಿಲ್ಲ. ಸ್ಥಳಕ್ಕೆ ಮೂರು ಅಗ್ನಿಶಾಮಕ ದಳ ವಾಹನ ಬಂದಿದ್ದು, ಗೋಡೋನ್ ಕ್ಲೋಸ್ ಆದ ಹಿನ್ನಲೆ ಕಿಟಕಿ ಮೂಲಕ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಸ್ಥಳಕ್ಕಾಗಮಿಸಿದ ಕಾಮಾಕ್ಷಿ ಪ‍ಾಳ್ಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಪಬ್ಲಿಕ್​ನಲ್ಲಿ ಡ್ರ್ಯಾಗರ್ ತೋರಿಸಿ ಬೈಕ್ ಸವಾರನಿಗೆ ಬೆದರಿಕೆ ಹಾಕಿದ್ದ ಕಾರು ಚಾಲಕ ಅರೆಸ್ಟ್

ಬೆಂಗಳೂರು: ಡ್ರ್ಯಾಗರ್ ಹಿಡಿದು ಬೈಕ್ ಸವಾರನಿಗೆ ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ರಾಮಮೂರ್ತಿ ನಗರ ಠಾಣಾ ಪೊಲೀಸರು, ಆರೋಪಿ ಕಾರು ಚಾಲಕನನ್ನು ಬಂಧಿಸಿದ್ದಾರೆ. ಕೆಆರ್ ಪುರಂ ಬಳಿಯ ಸಿಗೇಹಳ್ಳಿ ನಿವಾಸಿ ಅರುಣ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ಮೊಬೈಲ್​ನಲ್ಲಿ ಮಾತಾಡುತ್ತಾ ಟಾಟಾ ಏಸ್​ನಲ್ಲಿ ಬರುತ್ತಿದ್ದ ಅರುಣ್ ಕುಮಾರ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದನು. ಇದನ್ನು ಪ್ರಶ್ನೆ ಮಾಡಿದ್ದ ಸವಾರ ಪ್ರಕಾಶ್ ಎಂಬುವರಿಗೆ ಅರುಣ್ ಕುಮಾರ್ ಡ್ರ್ಯಾಗರ್ ತೋರಿಸಿ ಜೀವ ಬೆದರಿಕೆ ಹಾಕಿ ಸ್ಥಳದಿಂದ ತೆರಳಿದ್ದನು.

ಇದನ್ನೂ ಓದಿ:Bengaluru Karaga Mahotsava: ಬೆಂಗಳೂರಿನ ಐತಿಹಾತಿಕ ಕರಗ ಮಹೋತ್ಸವದ ವೇಳೆ ಅಗ್ನಿ ಅವಘಡ, ಬೈಕ್​ಗಳು ಭಸ್ಮ

ಅರುಣ್ ಕುಮಾರ್ ಡ್ರ್ಯಾಗರ್ ತೋರಿಸಿ ಬೆದರಿಕೆ ಹಾಕುತ್ತಿದ್ದಾಗ ತನ್ನ ಮೊಬೈಲ್​ನಲ್ಲಿ ವಿಡಿಯೋ ಮಾಡಿಕೊಂಡ ಪ್ರಕಾಶ್, ತನ್ನ ಟ್ವಿಟರ್​ ಖಾತೆ ಮೂಲಕ ವಿಡಿಯೋ ಹಂಚಿಕೊಂಡು ಅಸಮಾಧಾನ ಹೊರಹಾಕಿದ್ದರು. ಅಲ್ಲದೆ, ಬೆಂಗಳೂರು ಪೊಲೀಸ್ ಖಾತೆಯನ್ನು ಟ್ಯಾಗ್ ಮಾಡಿದ್ದರು. ಇತ್ತ ವಿಡಿಯೋ ನೋಡಿದ ರಾಮಮೂರ್ತಿ ನಗರ ಪೊಲೀಸರು, ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಈ ವೇಳೆ ಬೆದರಿಕೆ ಹಾಕಿದ ವ್ಯಕ್ತಿ ಕೆಆರ್​ ಪುರಂ ಬಳಿಯ ಸಿಗೇಹಳ್ಳಿ ನಿವಾಸಿ ಅರುಣ್ ಕುಮಾರ್​ ಎಂದು ತಿಳಿದುಬಂದಿದೆ. ಅದರಂತೆ ಅರುಣ್​ನನ್ನು ಪತ್ತೆಹಚ್ಚಿದ ಪೊಲೀಸರು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್