Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಅಗ್ನಿ ಅವಘಡ; ತಪ್ಪಿದ ಭಾರಿ ದುರಂತ

ಬೆಂಗಳೂರಿನ ಮೆಜೆಸ್ಟಿಕ್​​ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿಯ ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನ ಒಳಗಡೆ ಅಗ್ನಿ ಅವಘಡ ಸಂಭವಿಸಿದೆ. ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಕಂಡು ಪ್ರಯಾಣಿಕರು ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Follow us
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ

Updated on:Aug 19, 2023 | 3:00 PM

ಬೆಂಗಳೂರು: ನಗರದ ಮೆಜೆಸ್ಟಿಕ್​​ (Mejestic) ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ (KSR) ನಿಂತಿದ್ದ ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ (Udyan Express Train) ಅಗ್ನಿ ಅವಘಡ ಸಂಭವಿಸಿದೆ. ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ರೈಲಿನ ಎರಡು ಕೋಚ್​​​ಗಳಿಗೆ ಆವರಿಸಿದೆ. ಇದನ್ನು ಕಂಡು ಪ್ರಯಾಣಿಕರು ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಿಡೀರ್​​ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ. ರೈಲ್ವೆ ನಿಲ್ದಾಣ , ಮೆಜೆಸ್ಟಿಕ್ ಬಸ್ ನಿಲ್ದಾಣದವರೆಗೆ ಹೊಗೆ ಆವರಿಸಿದೆ. ರೈಲು ಬೆಳಗ್ಗೆ 6 ಗಂಟೆಗೆ ಕೆಎಸ್​ಆರ್​​ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಬೆಳಗ್ಗೆ 7.30 ಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸದ್ಯ ಬೆಂಕಿ ತಗುಲಿದ ಬೋಗಿಯಿಂದ ಉಳಿದ ಬೋಗಿಗಳನ್ನು ಬೇರ್ಪಡಿಸಲಾಗಿದೆ. ಅದೃಷ್ಟವಶಾವತ್​ ಯಾವುದೆ ಪ್ರಯಾಣಿಕರು ರೈಲಿನಲ್ಲಿ ಇರಲಿಲ್ಲ.

ಇದನ್ನೂ ಓದಿ: ಬೆಂಗಳೂರು: 37 ಸಾವಿರ ರೂ. ಮೌಲ್ಯದ 550 ಕೆಜಿ ಟೊಮೆಟೋ ಕಳುವು

ನಿನ್ನೆ (ಆ.18) ರಂದು ರಾತ್ರಿ 8:10 ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಲ್​​ನಿಂದ  ಹೊರಟಿದ್ದ ಉದ್ಯಾನ್ ಎಕ್ಸ್ಪ್ರೆಸ್ ರೈಲು ಬೆಳಿಗ್ಗೆ 5:40ರಿಂದ 6ಗಂಟೆ ಒಳಗಡೆ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ಬಂದು ತಲುಪಿದೆ. ರೈಲಿನ ಎಂಜಿನ್​ನಿಂದ ಐದನೇ ಬೋಗಿಯಾಗಿರುವ ಬಿ2 ಎಸಿ ಕೋಚ್​​ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್​​​​ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಂತರ ಬಿ1 ಬೀಗಿಗು ಬೆಂಕಿ ಆವರಿಸಿದೆ.  ಬಿ2 ಬೋಗಿ ಸಂಪೂರ್ಣ ಸುಟ್ಟು ಕರಕಲಾಗಿದೆ.

ಈ ಬಗ್ಗೆ ಟವಿ9 ಜೊತೆ ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ ಸೌಮ್ಯಲತಾ ಅವರು ಮಾತನಾಡಿ ಬೆಳಗ್ಗೆ ಮುಂಬೈನಿಂದ 6 ಗಂಟೆಗೆ ರೈಲು ಕೆಎಸ್​ಆರ್​ಗೆ ಬಂದು ನಿಂತಿದೆ.  7.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ರೈಲಿನಲ್ಲಿ ಪ್ರಯಾಣಿಕರು ಇರಲಿಲ್ಲ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುತ್ತಿದ್ದಾರೆ. ತನಿಖೆ ಬಳಿಕ ಘಟನೆಗೆ ಕಾರಣ ಏನು ಎಂಬುವುದು ಗೊತ್ತಾಗಲಿದೆ ಎಂದು ಹೇಳಿದರು.

ಇದೀಗ ರೈಲ್ವೆ ಇಲಾಖೆ ಪೊಲೀಸರು ತನಿಖೆ ಆರಂಭಿಸಿದ್ದು, ಶ್ವಾನದಳದೊಂದಿಗೆ ಘಟನಾ ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:26 am, Sat, 19 August 23