ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಅವಘಡ; ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮ

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 02, 2024 | 5:50 PM

ಬಿಬಿಎಂಪಿ (BBMP) ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕಾಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಅವಘಡ; ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮ
ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಅವಘಡ
Follow us on

ಬೆಂಗಳೂರು, ಆ.02: ಬ್ಯಾಟರಾಯನಪುರ ಬಳಿಯ ಬಿಬಿಎಂಪಿ (BBMP) ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕಾಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶಾರ್ಟ್​ ಸರ್ಕ್ಯೂಟ್​ನಿಂದ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಇಂದು (ಶುಕ್ರವಾರ) ಬೆಳಗ್ಗೆ 9 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನು ಕಳೆದ ವರ್ಷ 2023 ಆಗಸ್ಟ್​ 11 ರಂದು ಬಿಬಿಎಂಪಿ ಮುಖ್ಯ ಕಚೇರಿಯ ಬಿಬಿಎಂಪಿ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ, ಬರೋಬ್ಬರಿ 9 ಮಂದಿ ಗಾಯಗೊಂಡಿದ್ದರು.   ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ 9 ಮಂದಿಯನ್ನು ಪೊಲೀಸ್ ವಾಹನದಲ್ಲಿಯೇ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಇದೀಗ ಮತ್ತೊಂದು ಬೆಂಕಿ ಅನಾಹುತ ನಡೆದಿದೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ: 30 ರಿಂದ 40 ವಾಹನಗಳು ಬೆಂಕಿಗಾಹುತಿ

ಅಂದು ಘಟನೆ ನಡೆದ ಕಟ್ಟಡದಲ್ಲಿಯೇ ಬಿಬಿಎಂಪಿಯ ಮಹತ್ವದ ದಾಖಲೆಗಳಿದ್ದ ರೆಕಾರ್ಡ್ಸ್ ರೂಮ್ ಇತ್ತು. ಅದೃಷ್ಟವಶಾತ್ ಆ ರೂಮ್‌ಗೆ ಯಾವುದೇ ಹಾನಿ ಆಗಿರಲಿಲ್ಲ. ಈ ಕುರಿತು ಅಧಿಕಾರಿಯೊಬ್ಬರು ಮಾತನಾಡಿ, ‘ಬೆಂಜೀನ್ ಎನ್ನುವ ಕೆಮಿಕಲ್ ಸ್ಫೋಟವಾಗಿರುವುದು ಬೆಂಕಿ ಅವಘಡಕ್ಕೆ ಕಾರಣವಾಗಿದೆ. ಈ ಕೆಮಿನಲ್​ನ್ನು ಬಿಟುಮಿನ್ ಟೆಸ್ಟ್‌ಗೆ ಬಳಸಲಾಗುತ್ತದೆ ಎಂದು  ಹೇಳಿದ್ದರು. ಈ ಘಟನೆ ನಡೆದರೂ ಎಚ್ಚೆತ್ತುಕೊಳ್ಳದ ಬಿಬಿಎಂಪಿ ಕಛೇರಿಯಲ್ಲಿ ಇದೀಗ ಮತ್ತೊಂದು ಅವಘಡ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:26 pm, Fri, 2 August 24