AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯರಾತ್ರಿ 3 ಗಂಟೆಯಲ್ಲಿ ಬೆಂಗಳೂರಿನ ಸೌಥ್ ಇಂಡಿಯನ್ ಮಾಲ್‌ನಲ್ಲಿ ಅಗ್ನಿ ಅವಘಡ

ಮಾಲ್‌ನ ಸೂಪರ್ ಮಾರ್ಕೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಮಾಲ್‌ನಲ್ಲಿ ಯಾರೂ ಇರಲಿಲ್ಲ.

ಮಧ್ಯರಾತ್ರಿ 3 ಗಂಟೆಯಲ್ಲಿ ಬೆಂಗಳೂರಿನ ಸೌಥ್ ಇಂಡಿಯನ್ ಮಾಲ್‌ನಲ್ಲಿ ಅಗ್ನಿ ಅವಘಡ
ಮಧ್ಯರಾತ್ರಿ 3 ಗಂಟೆಯಲ್ಲಿ ಬೆಂಗಳೂರಿನ ಸೌಥ್ ಇಂಡಿಯನ್ ಮಾಲ್‌ನಲ್ಲಿ ಅಗ್ನಿ ಅವಘಡ
TV9 Web
| Updated By: ಸಾಧು ಶ್ರೀನಾಥ್​|

Updated on:Jan 15, 2022 | 8:54 AM

Share

ಬೆಂಗಳೂರು: ಬೆಂಗಳೂರಿನ ಅರಕೆರೆ ಗೇಟ್ ಬಳಿಯಿರುವ ಬೃಹತ್​ ಶಾಪಿಂಗ್‌ ಸಂಕೀರ್ಣವಾದ ಸೌಥ್ ಇಂಡಿಯನ್ ಮಾಲ್‌ನಲ್ಲಿ ಮಧ್ಯರಾತ್ರಿ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ 6 ಅಗ್ನಿಶಾಮಕ ವಾಹನಗಳಿಂದ ಬೆಂಕಿಯನ್ನು ನಂದಿಸಿದ್ದಾರೆ. ಮಾಲ್‌ನ ಸೂಪರ್ ಮಾರ್ಕೆಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಮಾಲ್‌ನಲ್ಲಿ ಯಾರೂ ಇರಲಿಲ್ಲ. ಅದೃಷ್ಟವಶಾತ್‌ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸತತವಾಗಿ ಎರಡು ಗಂಟೆಗೂ ಹೆಚ್ಚು ಸಮಯದ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಮಾಲ್ ನ ಗ್ರೌಂಡ್ ಫ್ಲೋರ್​ ನಲ್ಲಿರೋ ಸೂಪರ್ ಮಾರ್ಕೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸೌಥ್ ಇಂಡಿಯಾ ಮಾಲ್ ( south indian mall) ಬೇಸ್ಮೆಂಟ್ ನಲ್ಲಿರೊ ಸ್ಟೋರೇಜ್ ನಲ್ಲಿ ಬೆಂಕಿ ಹೊತ್ತಿಕೊಂಡಿತ್ತು.

ಟವರ್​ಗಳಲ್ಲಿ ಕಾಪರ್ ವೈರ್ ಕದಿಯುತ್ತಿದ್ದ ಯುವಕ ಪೊಲೀಸ್ ವಶಕ್ಕೆ ನೆಲಮಂಗಲ: ಟವರ್ ಗಳಲ್ಲಿ ಅಳವಡಿಸಿದ್ದ ಕಾಪರ್ ವೈರ್ ಕದಿಯುತ್ತಿದ್ದವನನ್ನು ಸ್ಥಳೀಯರು ಪೊಲೀಸ್ ವಶಕ್ಕೆ ಒಪ್ಪಿಸಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ದಾಬಸ್ ಪೇಟೆ ಬಳಿಯ ನಾರಯಣಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ. ನೆಲಮಂಗಲ ಟೌನ್ ನಿವಾಸಿ ರವಿಕುಮಾರ್(24) ಎಂಬ ಯುವಕನನ್ನು ಪೊಲೀಸ್ ವಶಕ್ಕೆ ಪಡೆದಿ, 10 ಸಾವಿರ ರೂಪಾಯಿಗೂ ಹೆಚ್ಚು ಬೆಲೆಬಾಳುವ ಕಾಪರ್ ವೈರ್ ಅನ್ನು ಜಫ್ತಿ ಮಾಡಿದ್ದಾರೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

MSIL ಮದ್ಯದಂಗಡಿ ಷಟರ್ ಮೀಟಿ ಕಳ್ಳತನ ತ್ಯಾಮಗೊಂಡ್ಲು ಕಾರೇಹಳ್ಳಿ ಕ್ರಾಸ್ ನಲ್ಲಿ MSIL ಮದ್ಯದಂಗಡಿ ಷಟರ್ ಮೀಟಿ ಲಾಕರ್ ನಲ್ಲಿದ್ದ 2 ಲಕ್ಷ ನಗದು, 50 ಸಾವಿರ ಬೆಲೆಬಾಳುವ ಮದ್ಯದ ಬಾಟಲಿ ಕಳವು ಮಾಡಲಾಗಿದೆ. ದೈನಂದಿನ ವ್ಯಾಪಾರದ ಹಣ ಬ್ಯಾಂಕ್ ಗೆ ಕಟ್ಟಲು ಮಳಿಗೆಯಲ್ಲಿ ಇಡಲಾಗಿತ್ತು. ಸ್ಥಳೀಯರ ಮಾಹಿತಿ ಅಧರಿಸಿ ಮಳಿಗೆ ಬಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. MSIL ಅಂಗಡಿ ಕ್ಯಾಷಿಯರ್ ರಘುನಾಥ್ ತ್ಯಾಮಗೊಂಡ್ಲು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಇದನ್ನು ಓದಿ: ಆರೋಪಿಯ ಅರೆಸ್ಟ್ ಮಾಡಲು ತಮ್ಮದೇ ಕಾರು ಕೊಟ್ಟ ತುಮಕೂರು ಜಿಲ್ಲಾ ಎಸ್​ಪಿ, ಬೆಳಗಿನ ಜಾವಕ್ಕೆ ಆರೋಪಿ ಕೊನೆಗೂ ಅಂದರ್!

Published On - 7:07 am, Sat, 15 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ