ಬೆಂಗಳೂರಿನ ಬಾಗಮನೆ ಟೆಕ್​ಪಾರ್ಕ್​ನಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಸಾಫ್ಟ್​ವೇರ್ ಕಂಪನಿ ಕಚೇರಿ

ಶಾರ್ಟ್​ ಸರ್ಕೀಟ್​ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿ ನಂದಿಸಲು ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಯ ಪೈಕಿ ಒಬ್ಬರಿಗೆ ತೀವ್ರ ಗಾಯಗಳಾಗಿವೆ.

ಬೆಂಗಳೂರಿನ ಬಾಗಮನೆ ಟೆಕ್​ಪಾರ್ಕ್​ನಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಸಾಫ್ಟ್​ವೇರ್ ಕಂಪನಿ ಕಚೇರಿ
ಬಾಗಮನೆ ಟೆಕ್​ಪಾರ್ಕ್​ನಲ್ಲಿ ಹೊತ್ತಿ ಉರಿಯುತ್ತಿರುವ ಕಟ್ಟಡ (ಎಡಚಿತ್ರ). ಗಾಯಗೊಂಡ ಅಗ್ನಿಶಾಮಕ ಸಿಬ್ಬಂದಿ ವಿನಯ್
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 06, 2022 | 6:42 AM

ಬೆಂಗಳೂರು: ಹಲವು ಸಾಫ್ಟ್​ವೇರ್ ಕಂಪನಿಗಳ ಕಚೇರಿ ಇರುವ ನಗರದ ಬಾಗಮನೆ ಟೆಕ್​ಪಾರ್ಕ್​ನಲ್ಲಿ (Bagmane Tech Park) ಶನಿವಾರ ರಾತ್ರಿ 10 ಗಂಟೆ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಶಾರ್ಟ್​ ಸರ್ಕೀಟ್​ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬೆಂಕಿ ನಂದಿಸಲು ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಯ ಪೈಕಿ ಒಬ್ಬರಿಗೆ ತೀವ್ರ ಗಾಯಗಳಾಗಿವೆ. ಬೆಂಕಿ ನಂದಿಸುವ ವೇಳೆ ಆಯತಪ್ಪಿ 4ನೇ ಅಂತಸ್ತಿನಿಂದ ಕೆಳಗೆಬಿದ್ದ ಮಹದೇವಪುರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ವಿನಯ್ ಕುಮಾರ್ ಅವರ ಕೈಕಾಲು ಮತ್ತು ತಲೆಯ ಭಾಗಕ್ಕೆ ಗಾಯವಾಗಿದೆ. ಅವರನ್ನು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. 4ನೇ ಮಹಡಿಯಿಂದ ಕೆಳಗೆ ಬಿದ್ದ ರಭಸಕ್ಕೆ ವಿನಯ್ ಕುಮಾರ್ ಅವರ ಕೈ, ಕಾಲು ಹಾಗೂ ತಲೆಗೆ ಪೆಟ್ಟು ಬಿದ್ದಿದೆ. ಪ್ರಸ್ತುತ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಂಗಳೂರಿನ ಮಾರತ್ತಹಳ್ಳಿಯಲ್ಲಿರುವ ಸಾಫ್ಟ್‌ವೇರ್ ಕಂಪನಿ ‘ಲೊಗ್ಯಾಟೋ’ದ 5 ಮತ್ತು 6 ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ರಾತ್ರಿಯೇ ಸ್ಥಳಕ್ಕೆ ಧಾವಿಸಿದ 12 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಚರಣೆ ಆರಂಭಿಸಿದವು. ಬೆಂಕಿಯಿಂದ ಆಗಿರುವ ನಷ್ಟದ ಅಂದಾಜಿನ ನಿಖರ ಮಾಹಿತಿ ಲಭ್ಯವಾಗಿಲ್ಲ. 11 ಅಗ್ನಿಶಾಮಕ ವಾಹನಗಳು ಮತ್ತು 30 ಸಿಬ್ಬಂದಿ ಸತತ 3 ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. 7 ಅಂತಸ್ತಿನ ಸಾಫ್ಟ್‌ವೇರ್ ಕಂಪನಿಯ ಕಟ್ಟಡ ದುರಸ್ತಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ 5, 6ನೇ ಅಂತಸ್ತಿನಲ್ಲಿ ದುರಸ್ತಿಗೆ ಬೇಕಾದ ವಸ್ತುಗಳನ್ನು ಇರಿಸಲಾಗಿತ್ತು. ಶಾರ್ಟ್‌ಸರ್ಕೀಟ್​ನಿಂದಾಗಿ ಕಿಡಿಬಿದ್ದು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಐದು ಮತ್ತು ಆರನೇ ಅಂತಸ್ತಿನಲ್ಲಿ ಥರ್ಮಾಕೋಲ್ ಸೇರಿದಂತೆ ಒಳಾಂಗಣ ವಿನ್ಯಾಸಕ್ಕೆ ಬಳಸುವ ವಸ್ತುಗಳು ಇದ್ದವು. ರಾತ್ರಿ 10 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದರು. ಅಗ್ನಿ ನಂದಿಸುವ ಕಾರ್ಯಾಚರಣೆ ಸತತ ಮೂರು ಗಂಟೆಗಳ ಕಾಲ ನಿರಂತರವಾಗಿ ನಡೆಯಿತು. ಏರಿಯಲ್ ಲ್ಯಾಡರ್ ಮುಖಾಂತರ ಐದು ಮತ್ತು ಆರನೇ ಅಂತಸ್ಥಿನಲ್ಲಿ ಬೆಂಕಿ‌ ನಂದಿಸುವ ಕಾರ್ಯ ಆರಂಭವಾಯಿತು. ಮಾರತ್​ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಗ್ನಿ ಅನಾಹುತ ಸಂಭವಿಸಿದ ಕಟ್ಟದ ವಿಡಿಯೊ ಇಲ್ಲಿದೆ.

ಇದನ್ನೂ ಓದಿ: Crime News: ಬೈಕ್ ಕಳ್ಳರ ಬಂಧನ, ಪತ್ರಕರ್ತನ ವಿರುದ್ಧ ಎಫ್​ಐಆರ್ ದಾಖಲು, ನಕಲಿ ಸಿಮೆಂಟ್ ಘಟಕದ ಮೇಲೆ ಪೊಲೀಸರ ದಾಳಿ

ಇದನ್ನು ಓದಿ: Crime News: ಅಳಂದದಲ್ಲಿ ನಿಷೇಧಾಜ್ಞೆ ವಿಸ್ತರಣೆ, ಬೆಂಗಳೂರಿನಲ್ಲಿ ಕಳ್ಳರ ಬಂಧನ, ಹೊಸನಗರದ ಬಟ್ಟೆಮಲ್ಲಪ್ಪ ಬಳಿ ವ್ಯಕ್ತಿ ಮೇಲೆ ಪೊಲೀಸರ ಹಲ್ಲೆ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!