AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಡ್ಗಿ ಆಯಸ್ಸು ಗಟ್ಟಿ: ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ರಕ್ಷಣೆ, ಪೊಲೀಸ್- ಅಗ್ನಿ ಶಾಮಕ ಸಿಬ್ಬಂದಿಗೆ ಸೆಲ್ಯೂಟ್

ಇನ್ನೇನು ಬಾಲಕಿಯೋರ್ವಳು ಕಟ್ಟಡದ ಮೇಲಿಂದ ಜಿಗಿದು ಜೀವ ಕಳೆದುಕೊಳ್ಳಬೇಕೆನ್ನುವಷ್ಟರಲ್ಲೇ ಹೊಯ್ಸಳ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೇವರಾಗಿ ಬಂದು ಕಾಪಾಡಿದ್ದಾರೆ. ಇದರೊಂದಿಗೆ ಅನಾಯಾಸವಾಗಿ ಹೋಗುತ್ತಿದ್ದ ಒಂದು ಜೀವವನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಬಾಳಿ ಬದುಕಬೇಕಿದ್ದ ಬಾಲಕಿ ಪ್ರಾಣ ಕಳೆದುಕೊಳ್ಳುವ ದುಡುಕಿನ ನಿರ್ಧಾರ ಕೈಗೊಂಡಿದ್ಯಾಕೆ? ಕೊನೆಗೆ ಆಕೆಯ ಪ್ರಾಣ ಉಳಿಸಿದ್ಹೇಗೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಹುಡ್ಗಿ ಆಯಸ್ಸು ಗಟ್ಟಿ: ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ರಕ್ಷಣೆ, ಪೊಲೀಸ್- ಅಗ್ನಿ ಶಾಮಕ ಸಿಬ್ಬಂದಿಗೆ ಸೆಲ್ಯೂಟ್
ಬಾಲಕಿಯ ರಕ್ಷಣೆ
ಪ್ರದೀಪ್​ ಚಿಕ್ಕಾಟಿ
| Edited By: |

Updated on:May 21, 2026 | 6:37 PM

Share

ಬೆಂಗಳೂರು, (ಮೇ 21): ಹೊಯ್ಸಳ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಮಯ ಪ್ರಜ್ಞೆ ಬಾಲಕಿ (Girl) ಜೀವ ಉಳಿದಿದೆ. ಇನ್ನೇನು ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು 16 ವರ್ಷದ ಬಾಲಕಿ ರಕ್ಷಣೆಯನ್ನು ರಕ್ಷಣೆ ಮಾಡಿಲಾಗಿದೆ. ಹೌದು…ಬೆಂಗಳೂರಿನ (Bengaluru) NRI ಲೇಔಟ್​ನ ಅಪಾರ್ಟ್​ಮೆಂಟ್​ನ 5ನೇ ಮಹಡಿ ಹತ್ತಿದ್ದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಸ್ಥಳಕ್ಕೆ ಹೊಯ್ಸಳ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಅನಾಯಸವಾಗಿ ಹೋಗುತ್ತಿದ್ದ ಒಂದು ಜೀವನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಐದನೇ ಮಹಡಿ ಮೇಲೆ ಬಾಲಕಿಯನ್ನು ರಕ್ಷಿಸುತ್ತಿದ್ದಂತಯೇ ಇತ್ತ ಕೆಳಗೆ ಏನಾಗುತ್ತೋ ಎಂದು ಆತಂಕದಲ್ಲಿದ್ದ ಸಾರ್ವಜನಿಕರು ಶಿಳ್ಳೆ, ಚಪ್ಪಾಳೆ ತಟ್ಟಿ ನಿಟ್ಟುಸಿರುಬಿಟ್ಟರು.

ಮಖ್ಯಾಂಶಗಳು

  • ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿ 16 ವರ್ಷದ ಬಾಲಕಿ ರಕ್ಷಣೆ
  • ಕಟ್ಟಡದ ಮೇಲಿಂದ ಜಂಪ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ
  • NRI ಲೇಔಟ್​ನ ಅಪಾರ್ಟ್​ಮೆಂಟ್​ನ 5ನೇ ಮಹಡಿ ಹತ್ತಿದ್ದ ಬಾಲಕಿ
  • ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಜೋರಾಗಿ ಕೂಗಿ ಹೇಳಿದ್ದ ಬಾಲಕಿ
  • ಕೂಡಲೇ 112ಗೆ ಕರೆ ಮಾಡಿದ್ದ ಮಾಹಿತಿ ನೀಡಿದ್ದ ಸಾರ್ವಜನಿಕರು
  • ಸ್ಥಳಕ್ಕೆ ಆಗಮಿಸಿದ ಹೊಯ್ಸಳ, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

16 ವರ್ಷದ ಬಾಲಕಿಯೋರ್ವಳು ಬೆಂಗಳೂರಿನ NRI ಲೇಔಟ್​ನ ಅಪಾರ್ಟ್​ಮೆಂಟ್​ನ 5ನೇ ಮಹಡಿ ಹತ್ತಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಜೋರಾಗಿ ಕೂಗಿ ಹೇಳಿದ್ದಾಳೆ. ಬಾಲಕಿಯ ಧ್ವನಿ ಕೇಳುತ್ತಿದ್ದಂತೆಯೇ ಸ್ಥಳೀಯರು ಕೂಡಲೇ ಕೂಡಲೇ 112ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆಯೇ ಹೊಯ್ಸಳ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದೌಡಾಯಿಸಿ ಹರಸಹಾಸೊಟ್ಟು ಬಾಲಕಿಯನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: Tv9 Kannada News Live: ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ; ರಾಜ್ಯದಲ್ಲಿ ಭಾರಿ ಮಳೆ; ಈ ಹೊತ್ತಿನ ಪ್ರಮುಖ ಸುದ್ದಿಗಳು

ರಕ್ಷಣೆಯ ರೋಚಕ ವಿಡಿಯೋ ಹಂಚಿಕೊಂಡ ಪೂರ್ವ ಡಿಸಿಪಿ

ಇನ್ನು ಈ ಬಗ್ಗೆ ಬೆಂಗಳೂರಿನ ಪೂರ್ವ ಡಿಸಿಪಿ ಸಾಮಾಜಿಕ ಜಾಲತಾಣಗಳಲ್ಲಿ ಬಾಲಕಿ ರಕ್ಷಣೆಯ ವಿಡಿಯೋ ಹಂಚಿಕೊಂಡಿದ್ದು, ಈ ದಿನ ಪೂರ್ವ ವಿಭಾಗದ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 16 ವರ್ಷದ ಯುವತಿಯೊಬ್ಬಳು 5 ಅಂತಸ್ತಿನ ಕಟ್ಟಡದ ಮೇಲಿನಿಂದ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ, ರಾಮಮೂರ್ತಿನಗರ ಠಾಣೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸಾರ್ವಜನಿಕರ ಸಹಕಾರದಿಂದ ಯುವತಿಯನ್ನು ಸುರಕ್ಷಿತವಾಗಿ ರಕ್ಷಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರ ಸಹಾಯದೊಂದಿಗೆ ಬಾಲಕಿಯನ್ನು ರಕ್ಷಿಸಿದ ಸಿಬ್ಬಂದಿ, ಬಾಲಕಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಿದರು. ಆದ್ರೆ, ಬಾಲಕಿ ಏಕೆ ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ಇಲ್ಲಿ  ಹೊಯ್ಸಳ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಸಮಯ ಪ್ರಜ್ಞೆಯನ್ನು ಮೆಚ್ಚಲೇಬೇಕು. ಯಾಕಂದ್ರೆ, ಇನ್ನೇನು ಸ್ವಲ್ಪ ತಡವಾಗಿದ್ದರೂ ಬಾಲಕಿ ಬಿದ್ದು ಜೀವ ಕಳೆದುಕೊಳ್ಳುತ್ತಿದ್ದಳು.

ಸ್ವಲ್ಪ ಹೆಚ್ಚು ಕಮ್ಮಿಯಾಗಿದ್ದರೂ ಬಾಲಕಿಯ ಜೀವ ಹೋಗಿಬಿಡೋದು. ಆದ್ರೆ, ಬಾಲಕಿಯ ಆಯಸ್ಸು ಗಟ್ಟಿ ಇದೆ ಅನ್ಸುತ್ತೆ.   ಸಾವಿನ ದವಡೆಯಿಂದ ಪಾರಾಗಿದ್ದಾಳೆ.

Published On - 6:35 pm, Thu, 21 May 26

Follow Us
Pradeep Chikkati
Pradeep Chikkati

ಕ್ರೈಂ ವರದಿಗಾರನಾಗಿ ಟಿವಿ9 ಕನ್ನಡದಲ್ಲಿ ಕೆಲಸ

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?