
ಬೆಂಗಳೂರು, (ಮೇ 21): ಹೊಯ್ಸಳ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸಮಯ ಪ್ರಜ್ಞೆ ಬಾಲಕಿ (Girl) ಜೀವ ಉಳಿದಿದೆ. ಇನ್ನೇನು ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು 16 ವರ್ಷದ ಬಾಲಕಿ ರಕ್ಷಣೆಯನ್ನು ರಕ್ಷಣೆ ಮಾಡಿಲಾಗಿದೆ. ಹೌದು…ಬೆಂಗಳೂರಿನ (Bengaluru) NRI ಲೇಔಟ್ನ ಅಪಾರ್ಟ್ಮೆಂಟ್ನ 5ನೇ ಮಹಡಿ ಹತ್ತಿದ್ದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಸ್ಥಳಕ್ಕೆ ಹೊಯ್ಸಳ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಅನಾಯಸವಾಗಿ ಹೋಗುತ್ತಿದ್ದ ಒಂದು ಜೀವನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಐದನೇ ಮಹಡಿ ಮೇಲೆ ಬಾಲಕಿಯನ್ನು ರಕ್ಷಿಸುತ್ತಿದ್ದಂತಯೇ ಇತ್ತ ಕೆಳಗೆ ಏನಾಗುತ್ತೋ ಎಂದು ಆತಂಕದಲ್ಲಿದ್ದ ಸಾರ್ವಜನಿಕರು ಶಿಳ್ಳೆ, ಚಪ್ಪಾಳೆ ತಟ್ಟಿ ನಿಟ್ಟುಸಿರುಬಿಟ್ಟರು.
16 ವರ್ಷದ ಬಾಲಕಿಯೋರ್ವಳು ಬೆಂಗಳೂರಿನ NRI ಲೇಔಟ್ನ ಅಪಾರ್ಟ್ಮೆಂಟ್ನ 5ನೇ ಮಹಡಿ ಹತ್ತಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಜೋರಾಗಿ ಕೂಗಿ ಹೇಳಿದ್ದಾಳೆ. ಬಾಲಕಿಯ ಧ್ವನಿ ಕೇಳುತ್ತಿದ್ದಂತೆಯೇ ಸ್ಥಳೀಯರು ಕೂಡಲೇ ಕೂಡಲೇ 112ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆಯೇ ಹೊಯ್ಸಳ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದೌಡಾಯಿಸಿ ಹರಸಹಾಸೊಟ್ಟು ಬಾಲಕಿಯನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಈ ಬಗ್ಗೆ ಬೆಂಗಳೂರಿನ ಪೂರ್ವ ಡಿಸಿಪಿ ಸಾಮಾಜಿಕ ಜಾಲತಾಣಗಳಲ್ಲಿ ಬಾಲಕಿ ರಕ್ಷಣೆಯ ವಿಡಿಯೋ ಹಂಚಿಕೊಂಡಿದ್ದು, ಈ ದಿನ ಪೂರ್ವ ವಿಭಾಗದ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 16 ವರ್ಷದ ಯುವತಿಯೊಬ್ಬಳು 5 ಅಂತಸ್ತಿನ ಕಟ್ಟಡದ ಮೇಲಿನಿಂದ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ, ರಾಮಮೂರ್ತಿನಗರ ಠಾಣೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸಾರ್ವಜನಿಕರ ಸಹಕಾರದಿಂದ ಯುವತಿಯನ್ನು ಸುರಕ್ಷಿತವಾಗಿ ರಕ್ಷಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ.
ಈ ದಿನ ಪೂರ್ವ ವಿಭಾಗದ @ramamurthyngrps ವ್ಯಾಪ್ತಿಯಲ್ಲಿ 16 ವರ್ಷದ ಯುವತಿಯೊಬ್ಬಳು 5 ಅಂತಸ್ತಿನ ಕಟ್ಟಡದ ಮೇಲಿನಿಂದ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ, ರಾಮಮೂರ್ತಿನಗರ ಠಾಣೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸಾರ್ವಜನಿಕರ ಸಹಕಾರದಿಂದ ಯುವತಿಯನ್ನು ಸುರಕ್ಷಿತವಾಗಿ ರಕ್ಷಿಸಲಾಯಿತು.
Well done @ramamurthyngrps 👏 pic.twitter.com/TUQtrARFHX— DCP EAST (@DcpEastBcp) May 21, 2026
ಸಾರ್ವಜನಿಕರ ಸಹಾಯದೊಂದಿಗೆ ಬಾಲಕಿಯನ್ನು ರಕ್ಷಿಸಿದ ಸಿಬ್ಬಂದಿ, ಬಾಲಕಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಿದರು. ಆದ್ರೆ, ಬಾಲಕಿ ಏಕೆ ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ಇಲ್ಲಿ ಹೊಯ್ಸಳ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಸಮಯ ಪ್ರಜ್ಞೆಯನ್ನು ಮೆಚ್ಚಲೇಬೇಕು. ಯಾಕಂದ್ರೆ, ಇನ್ನೇನು ಸ್ವಲ್ಪ ತಡವಾಗಿದ್ದರೂ ಬಾಲಕಿ ಬಿದ್ದು ಜೀವ ಕಳೆದುಕೊಳ್ಳುತ್ತಿದ್ದಳು.
ಸ್ವಲ್ಪ ಹೆಚ್ಚು ಕಮ್ಮಿಯಾಗಿದ್ದರೂ ಬಾಲಕಿಯ ಜೀವ ಹೋಗಿಬಿಡೋದು. ಆದ್ರೆ, ಬಾಲಕಿಯ ಆಯಸ್ಸು ಗಟ್ಟಿ ಇದೆ ಅನ್ಸುತ್ತೆ. ಸಾವಿನ ದವಡೆಯಿಂದ ಪಾರಾಗಿದ್ದಾಳೆ.
Published On - 6:35 pm, Thu, 21 May 26