ಬೆಂಗಳೂರು: ರಾಕೆಟ್​ ಸಿಡಿತದಿಂದ ಬಾಲಕನಿಗೆ ಗಾಯ, ಪ್ರಶ್ನಿಸಿದ್ದಕ್ಕೆ ತಾಯಿ ಮೇಲೆ ಹಲ್ಲೆ; ದೂರು ದಾಖಲು

ಬಾಲಕನನ್ನು (10 ವರ್ಷ) ಗುರಿಯಾಗಿಸಿ ರಾಕೆಟ್‌ ಹಾರಿಸಿ ಗಾಯಗೊಳಿಸಿದ ಆರೋಪದ ಮೇಲೆ ಮಲ್ಲಿಕಾರ್ಜುನ ಎಂಬುವರ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ. ಮಲ್ಲಿಕಾರ್ಜುನ ಕೂಡ ಬಾಲಕನ ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಿದ್ದಾರೆ.

ಬೆಂಗಳೂರು: ರಾಕೆಟ್​ ಸಿಡಿತದಿಂದ ಬಾಲಕನಿಗೆ ಗಾಯ, ಪ್ರಶ್ನಿಸಿದ್ದಕ್ಕೆ ತಾಯಿ ಮೇಲೆ ಹಲ್ಲೆ; ದೂರು ದಾಖಲು
ಸಾಂದರ್ಭಿಕ ಚಿತ್ರ
Follow us
|

Updated on:Nov 20, 2023 | 6:55 AM

ಬೆಂಗಳೂರು ನ.20: ಬಾಲಕನನ್ನು (10 ವರ್ಷ) ಗುರಿಯಾಗಿಸಿ ರಾಕೆಟ್‌ ಹಾರಿಸಿ (Firecrackers) ಗಾಯಗೊಳಿಸಿದ ಆರೋಪದ ಮೇಲೆ ಮಲ್ಲಿಕಾರ್ಜುನ (24 ವರ್ಷ) ಎಂಬುವವರ ವಿರುದ್ಧ ದೂರು ದಾಖಲಾಗಿದೆ. ಮಂಗಳವಾರ ಘಟನೆ ನಡೆದಿದ್ದು, ಎರಡು ದಿನಗಳ ನಂತರ ಬಾಲಕನ ಚಿಕ್ಕಮ್ಮ ಬೈಯಪ್ಪನಹಳ್ಳಿ ಪೊಲೀಸ್ (Police)​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗಾಯಾಳುಗಳು ಮತ್ತು ಆರೋಪಿ ಮಲ್ಲಿಕಾರ್ಜುನ ಹೊಸನಗರ ನಿವಾಸಿಗಳಾಗಿದ್ದಾರೆ. ಬಾಲಕ ಹೇಳಿಕೆ ಪ್ರಕಾರ ” ಮಲ್ಲಿಕಾರ್ಜುನ ಮತ್ತು ಆತನ ನೆರೆಹೊರೆಯವರು ಉದ್ದೇಶಪೂರ್ವಕವಾಗಿ ನನ್ನನ್ನು ಗುರಿಯಾಗಿಸಿಕೊಂಡು ರಾಕೆಟ್​​ ಹಾರಿಸಿ ಗಾಯಗೊಳಿಸಿದ್ದಾರೆ” ಎಂದು ಬಾಲಕ ಪೋಷಕರಿಗೆ ತಿಳಿಸಿದ್ದಾನೆ.

ಇದರಿಂದ ಎರಡೂ ಕುಟುಂಬಗಳ ನಡುವೆ ಮಾತಿನ ಚಕಮಕಿ, ಮಾತಿನ ಚಕಮಕಿ ನಡೆಯಿತು. ಬಾಲಕನ ತಾಯಿ ಪ್ರಶ್ನಿಸಲು ಹೋದಾಗ, ಆರೋಪಿ ಮಲ್ಲಿಕಾರ್ಜುನ ಆಕೆಯ ಮುಖಕ್ಕೆ ಹೊಡೆದಿದ್ದಾನೆ. ಅಲ್ಲದೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪ ಕೇಳಿಬಂದಿದೆ.

ಮಲ್ಲಿಕಾರ್ಜುನ ಕೂಡ ಬಾಲಕನ ತಾಯಿ ಮತ್ತು ಕುಟುಂಬದ ವಿರುದ್ಧ ದೂರು ದಾಖಲಿಸಿದ್ದಾರೆ. ನಾನು ಯಾವುದೇ ಪಟಾಕಿ ಸಿಡಿಸಿಲ್ಲ, ಮಕ್ಕಳು ಪಟಾಕಿ ಸಿಡಿಸುವುದನ್ನು ನೋಡುತ್ತಿದ್ದೆ ಅಷ್ಟೇ ಎಂದು ಮಲ್ಲಿಕಾರ್ಜುನ ದೂರಿನಲ್ಲಿ ತಿಳಿಸಿದ್ದಾರೆ. ತನ್ನ ಜೊತೆಗೆ ತನ್ನ 18 ವರ್ಷದ ಸಹೋದರಿಯನ್ನೂ ಥಳಿಸಿದ್ದಾರೆ ಎಂದು ಮಲ್ಲಿಕಾರ್ಜುನ ಹೇಳಿದ್ದಾರೆ.

ದೂರು ಮತ್ತು ಪ್ರತಿದೂರು ಗುರುವಾರ ಮಧ್ಯಾಹ್ನ ದಾಖಲಾಗಿದೆ. ಎರಡೂ ಕಡೆಯವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಬಾಲಕ ಅಪಾಯದಿಂದ ಪಾರಾಗಿದ್ದು, ರಾಕೆಟ್ ಪಟಾಕಿಯನ್ನು ಹೊತ್ತಿಸಿದವನು ಮಲ್ಲಿಕಾರ್ಜುನ ಎಂದು ಬಾಲಕ ಹೇಳಿಕೊಳ್ಳುತ್ತಲೇ ಇದ್ದಾನೆ. ಪ್ರಕರಣದ ತನಿಖೆ ನಡೆಯುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:55 am, Mon, 20 November 23

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ