AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಪಟಾಕಿ ಅಂಗಡಿ: 13 ಜನರು ಸಜೀವದಹನ

Fire Accident: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಆಕಸ್ಮಿಕ ಬೆಂಕಿಗೆ ಪಟಾಕಿ ಅಂಗಡಿ ಹೊತ್ತಿ ಉರಿದಿದ್ದು, 13 ಜನರು ಸಜೀವದಹನವಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ದೊಡ್ಡ ಮಳಿಗೆಯಾಗಿದ್ದರಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. 

ಆನೇಕಲ್: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಪಟಾಕಿ ಅಂಗಡಿ: 13 ಜನರು ಸಜೀವದಹನ
ಬೆಂಕಿಗೆ ಹೊತ್ತಿ ಉರಿದ ಪಟಾಕಿ ಅಂಗಡಿ
ರಾಮು, ಆನೇಕಲ್​
| Updated By: ವಿವೇಕ ಬಿರಾದಾರ|

Updated on:Oct 08, 2023 | 6:25 AM

Share

ಆನೇಕಲ್, ಅಕ್ಟೋಬರ್​​ 07: ಲಾರಿಯಲ್ಲಿ ಪಟಾಕಿ ಅನ್​ಲೋಡ್ ಮಾಡುವಾಗ ಆಕಸ್ಮಿಕ ಬೆಂಕಿ ತಗುಲಿ  ಪಟಾಕಿ (Firecracker) ಅಂಗಡಿ ಹೊತ್ತಿ ಉರಿದಿದ್ದು, 13 ಜನರು ಸಜೀವದಹನವಾಗಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಶನಿವಾರ ನಡೆದಿದೆ. ನವೀನ್ ಎಂಬುವರಿಗೆ ಸೇರಿದ ಪಟಾಕಿ ಮಳಿಗೆಯಲ್ಲಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ದೊಡ್ಡ ಮಳಿಗೆಯಾಗಿದ್ದರಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಅಗ್ನಿ ದುರಂತದಲ್ಲಿ ಕೋಟ್ಯಂತರ ಮೌಲ್ಯದ ಪಟಾಕಿ ಅಗ್ನಿಗಾಹುತಿಯಾಗುವುದರೊಂದಿಗೆ 1 ಕ್ಯಾಂಟ್ರೋ, 2 ಬೊಲೆರೋ, 7 ಬೈಕ್​ಗಳು ಸಹ ಬೆಂಕಿಗಾಹುತಿ ಆಗಿವೆ. ವಾಹನ ಸವಾರರಿಗೆ ಪಟಾಕಿ ಅಂಗಡಿ ದುರಂತ ಎಫೆಕ್ಟ್ ತಟ್ಟಿದ್ದು, ಅತ್ತಿಬೆಲೆ ಕಡೆ ತೆರಳುವ ಮಾರ್ಗದಲ್ಲಿ ಟ್ರಾಫಿಕ್​ ಜಾಮ್ ಉಂಟಾಗಿದೆ.

ಇದನ್ನೂ ಓದಿ: ನೆಲಮಂಗಲ ಬಳಿ ಚಾಲಕನ ಅಜಾಗರೂಕತೆಯಿಂದ ಲಾರಿಗೆ ಗುದ್ದಿದ ಕೆಎಸ್​ಆರ್​ಟಿಸಿ ಬಸ್; 13 ಜನರಿಗೆ ಗಾಯ, ಆಸ್ಪತ್ರೆಗೆ ದಾಖಲು

ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದ್ದಿಷ್ಟು

ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಮಧ್ಯಾಹ್ನ 3.30ರ ಸುಮಾರಿಗೆ  ಪಟಾಕಿ ಗೋಡೌನ್​ ಅಗ್ನಿ ದುರಂತ ಸಂಭವಿಸಿದ್ದು, 10 ಜನ ಸಜೀವದಹನವಾಗಿದ್ದಾರೆ. ರಾಮಸ್ವಾಮಿ ರೆಡ್ಡಿ ಎಂಬುವರಿಗೆ ಸೇರಿದ ಗೋದಾಮಿನಲ್ಲಿ ದುರಂತ ಸಂಭವಿಸಿದೆ. ಗೋದಾಮಿನಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಟಾಕಿ ದುರಂತದ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಕ್ಯಾಂಟರ್​ನಲ್ಲಿ ಪಟಾಕಿ ಅನ್ ಲೋಡ್ ಮಾಡುವ ವೇಳೆ ಬೆಂಕಿ ಹೊತ್ತಿಕೊಂಡಿದ್ದು, ಕೂಡಲೇ ಮಳಿಗೆ ಮತ್ತು ಗೋದಾಮಿಗೂ ಬೆಂಕಿ ವ್ಯಾಪಿಸಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಕಾರ್ಯಾಚರಣೆ ಮಾಡಲಾಗಿದೆ. ಸದ್ಯ ಶೇಕಡಾ 80 ರಷ್ಟು ಬೆಂಕಿ ನಿಯಂತ್ರಣ ಮಾಡಾಗಿದೆ ಎಂದರು.

ಇದನ್ನೂ ಓದಿ: ಇಸ್ರೇಲ್ ಮೇಲೆ ಹಮಾಸ್ ಉಗ್ರರಿಂದ ದಾಳಿ: ಸದ್ಯಕ್ಕೆ ಕರಾವಳಿಯ ಜನರು ಸೇಫ್

ಆನೇಕಲ್ ತಹಶೀಲ್ದಾರ್ ಶಿವಪ್ಪ ಲಮಾಣಿ ಹೇಳಿದ್ದಿಷ್ಟು

ಆನೇಕಲ್ ತಹಶೀಲ್ದಾರ್ ಶಿವಪ್ಪ ಲಮಾಣಿ ಪ್ರತಿಕ್ರಿಯೆ ನೀಡಿದ್ದು, ಗೋಡೌನ್ ರಾಮಸ್ವಾಮಿ ರೆಡ್ಡಿ ಎಂಬುವವರಿಗೆ ಸೇರಿದ್ದು, ಗೋಡೌನ್​ಗೆ ಅನುಮತಿ ಪಡೆದುಕೊಳ್ಳಲಾಗಿತ್ತು. ಆದರೆ ಎಲ್ಲಾ ನಿಯಮ ಪಾಲನೆ ಮಾಡಿದ್ದಾರಾ ಎನ್ನುವುದು ನೋಡಬೇಕಾಗುತ್ತೆ. ಬೆಂಕಿ ನಂದಿದ ಬಳಿಕ‌ ಪರಿಶೀಲನೆ ಮಾಡಬೇಕಾಗುತ್ತೆ ಎಂದು ಹೇಳಿದ್ದಾರೆ.

ಘಟನೆಯಲ್ಲಿ ಇಬ್ಬರಿಗೆ ಸುಟ್ಟ ಗಾಯಗಳಾಗಿದೆ. ಮಳಿಗೆಯ ಮಾಲೀಕ ನವೀನ್​ಗೂ ಸುಟ್ಟ ಗಾಯಗಳಾಗಿವೆ. ಬೆಂಕಿ ಸಂಪೂರ್ಣ ನಂದಿಸಿದ ಬಳಿಕ ಮಳಿಗೆ ಒಳಗೆ ಕಾರ್ಮಿಕರು ಸಿಲುಕಿರುವ ಬಗ್ಗೆ ಮಾಹಿತಿ ಸಿಗಲಿದೆ. ಸದ್ಯ ಹೊತ್ತಿಕೊಂಡ ಬಗ್ಗೆ ಖಚಿತ ಮಾಹಿತಿ ಇಲ್ಲ. ಪರಿಶೀಲನೆಗಾಗಿ ಎಫ್​ಎಸ್​ಎಲ್​ ತಂಡ ಆಗಮಿಸಲಿದೆ. ಮಳಿಗೆ ಪರವಾನಗಿ ಬಗ್ಗೆಯು ಪರಿಶೀಲನೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:49 pm, Sat, 7 October 23