ಬೆಂಗಳೂರಿನಲ್ಲಿ ಕೊಲೆ ಆರೋಪಿ ಮೇಲೆ ಫೈರಿಂಗ್; ಸ್ಮಶಾನದ ಬಳಿ ಕಾಲಿಗೆ ಗುಂಡು ಹಾರಿಸಿ ರೌಡಿ ಪಳನಿ ಬಂಧನ

ಎಡಗಾಲಿಗೆ ಶೂಟ್ ಮಾಡಿ ಆರೋಪಿ ಅಲಿಯಾಸ್ ಕರ್ಚಿಫ್ ಪಳನಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಬೌರಿಂಗ್ ಆಸ್ಪತ್ರೆಯಲ್ಲಿ ಪಳನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸುಮಾರು 20 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಪಳನಿಗಾಗಿ ಬೆಳ್ಳಂದೂರು ಪೊಲೀಸರು, ಸಿಸಿಬಿ ಪೊಲೀಸರು ಶೋಧ ನಡೆಸುತ್ತಿದ್ದರು.

ಬೆಂಗಳೂರಿನಲ್ಲಿ ಕೊಲೆ ಆರೋಪಿ ಮೇಲೆ ಫೈರಿಂಗ್; ಸ್ಮಶಾನದ ಬಳಿ ಕಾಲಿಗೆ ಗುಂಡು ಹಾರಿಸಿ ರೌಡಿ ಪಳನಿ ಬಂಧನ
ಪಳನಿ
Follow us
TV9 Web
| Updated By: preethi shettigar

Updated on:Nov 17, 2021 | 10:43 AM

ಬೆಂಗಳೂರು: ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ (Firing) ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಅಶೋಕನಗರದಲ್ಲಿ ನಡೆದಿದೆ. ನವೆಂಬರ್ 10 ರಂದು ಬೆಳ್ಳಂದೂರಿನಲ್ಲಿ ಮುನ್ನಾಕುಮಾರ್ ಕೊಲೆ ಮಾಡಿದ್ದ ಪಳನಿಯನ್ನು ಬಂಧಿಸಲು ಪೊಲೀಸರು (Karnataka police) ಶೋಧ ಕಾರ್ಯ ನಡೆಸುತ್ತಿದ್ದರು. ಎಸಿಪಿ ಪರಮೇಶ್ವರ್ ಹಾಗೂ ಇನ್ಸ್​ಪೆಕ್ಟರ್​ ಹರೀಶ್ ಕುಮಾರ್ ತಂಡ ಅರೋಪಿ ಬಂಧನಕ್ಕೆ ತೆರಳಿದ್ದಾರೆ. ಈ ವೇಳೆ ಅಶೋಕನಗರ ಸ್ಮಶಾನದ ಬಳಿ ಆರೋಪಿ ಪಳಸಿ ಇರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ಸಂದರ್ಭದಲ್ಲಿ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ಪಳನಿ ದಾಳಿ ಮಾಡಿದ್ದಾನೆ. ಇನ್ಸ್‌ಪೆಕ್ಟರ್ ಹರೀಶ್ ಕುಮಾರ್ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸುತ್ತಿದ್ದ ವೇಳೆ ಎಸಿಪಿ ಪರಮೇಶ್ವರ್  ಫೈರಿಂಗ್ ಮಾಡಿದ್ದಾರೆ.

ಎಡಗಾಲಿಗೆ ಶೂಟ್ ಮಾಡಿ ಆರೋಪಿ ಅಲಿಯಾಸ್ ಕರ್ಚಿಫ್ ಪಳನಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಬೌರಿಂಗ್ ಆಸ್ಪತ್ರೆಯಲ್ಲಿ ಪಳನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸುಮಾರು 20 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಪಳನಿಗಾಗಿ ಬೆಳ್ಳಂದೂರು ಪೊಲೀಸರು, ಸಿಸಿಬಿ ಪೊಲೀಸರು ಶೋಧ ನಡೆಸುತ್ತಿದ್ದರು. ಸದ್ಯ ಆರೋಪಿ ಪಳನಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮತ್ತು ಶೂಟೌಟ್ ಸಂಬಂಧ ಆಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಪಳನಿ ಇತಿಹಾಸ ಅತಿ ಭಯಾನಕ 20 ಕ್ಕೂ ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಳನಿ ಮೇಲೆ ಅಶೋಕನಗರ, ಕೋಣನಕುಂಟೆ ಹಾಗೂ ಕೆ.ಎಸ್. ಲೇಔಟ್ ಠಾಣೆಯಲ್ಲಿ ರೌಡಿಶೀಟರ್ ಪ್ರಕರಣ ದಾಖಲಾಗಿದೆ. ಅಲ್ಲದೇ ಈತನ ಮೇಲೆ ಅಶೋಕನಗರ, ಸುಬ್ರಹ್ಮಣ್ಯಪುರ, ಬೆಳ್ಳಂದೂರು ಠಾಣೆಯಲ್ಲಿ ಮೂರು ಕೊಲೆ ಪ್ರಕರಣಗಳಿವೆ. ಕಾಡುಗೋಡಿ, ಜಯನಗರ, ಕೋಣನಕುಂಟೆ, ಕೆ.ಎಸ್.ಲೇಔಟ್, ಹುಳಿಮಾವು, ಆಡುಗೋಡಿ, ವಿಲ್ಸನ್ ಗಾರ್ಡನ್ ಠಾಣೆಗಳಲ್ಲಿ ಕೊಲೆ ಯತ್ನ ಪ್ರಕರಣಗಳಿದ್ದು, ಸುಲಿಗೆ, ದರೋಡೆ ಹಾಗೂ ಬೆದರಿಕೆ ಸೇರಿದಂತೆ 15 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ನಿನ್ನೆ (ನವೆಂಬರ್ 16) ರಾತ್ರಿ 11 ಗಂಟೆಗೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಸಿಸಿಬಿ ಪೊಲೀಸರು ಪಳನಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:

ಬೆಂಗಳೂರಿನಲ್ಲಿ ಪರಾರಿಯಾಗa ಲು ಯತ್ನಿಸುತ್ತಿದ್ದ ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್!

ಪೊಲೀಸರು-ಕೊಲೆ ಆರೋಪಿಗಳ ನಡುವೆ ಫೈರಿಂಗ್​; ಆರೋಪಿಯ ಮುಖಕ್ಕೇ ಬಿತ್ತು ಎಎಸ್​ಐ ಹೊಡೆದ ಗುಂಡು

Published On - 7:38 am, Wed, 17 November 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ