ಬೆಂಗಳೂರು: ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ (Firing) ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಅಶೋಕನಗರದಲ್ಲಿ ನಡೆದಿದೆ. ನವೆಂಬರ್ 10 ರಂದು ಬೆಳ್ಳಂದೂರಿನಲ್ಲಿ ಮುನ್ನಾಕುಮಾರ್ ಕೊಲೆ ಮಾಡಿದ್ದ ಪಳನಿಯನ್ನು ಬಂಧಿಸಲು ಪೊಲೀಸರು (Karnataka police) ಶೋಧ ಕಾರ್ಯ ನಡೆಸುತ್ತಿದ್ದರು. ಎಸಿಪಿ ಪರಮೇಶ್ವರ್ ಹಾಗೂ ಇನ್ಸ್‌ಪೆಕ್ಟರ್ ಹರೀಶ್ ಕುಮಾರ್ ತಂಡ ಅರೋಪಿ ಬಂಧನಕ್ಕೆ ತೆರಳಿದ್ದಾರೆ. ಈ ವೇಳೆ ಅಶೋಕನಗರ ಸ್ಮಶಾನದ ಬಳಿ ಆರೋಪಿ ಪಳಸಿ ಇರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ಸಂದರ್ಭದಲ್ಲಿ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ಪಳನಿ ದಾಳಿ ಮಾಡಿದ್ದಾನೆ. ಇನ್ಸ್‌ಪೆಕ್ಟರ್ ಹರೀಶ್ ಕುಮಾರ್ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸುತ್ತಿದ್ದ ವೇಳೆ ಎಸಿಪಿ ಪರಮೇಶ್ವರ್ ಫೈರಿಂಗ್ ಮಾಡಿದ್ದಾರೆ.
ಎಡಗಾಲಿಗೆ ಶೂಟ್ ಮಾಡಿ ಆರೋಪಿ ಅಲಿಯಾಸ್ ಕರ್ಚಿಫ್ ಪಳನಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಬೌರಿಂಗ್ ಆಸ್ಪತ್ರೆಯಲ್ಲಿ ಪಳನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸುಮಾರು 20 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಪಳನಿಗಾಗಿ ಬೆಳ್ಳಂದೂರು ಪೊಲೀಸರು, ಸಿಸಿಬಿ ಪೊಲೀಸರು ಶೋಧ ನಡೆಸುತ್ತಿದ್ದರು. ಸದ್ಯ ಆರೋಪಿ ಪಳನಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮತ್ತು ಶೂಟೌಟ್ ಸಂಬಂಧ ಆಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಪಳನಿ ಇತಿಹಾಸ ಅತಿ ಭಯಾನಕ
20 ಕ್ಕೂ ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪಳನಿ ಮೇಲೆ ಅಶೋಕನಗರ, ಕೋಣನಕುಂಟೆ ಹಾಗೂ ಕೆ.ಎಸ್. ಲೇಔಟ್ ಠಾಣೆಯಲ್ಲಿ ರೌಡಿಶೀಟರ್ ಪ್ರಕರಣ ದಾಖಲಾಗಿದೆ. ಅಲ್ಲದೇ ಈತನ ಮೇಲೆ ಅಶೋಕನಗರ, ಸುಬ್ರಹ್ಮಣ್ಯಪುರ, ಬೆಳ್ಳಂದೂರು ಠಾಣೆಯಲ್ಲಿ ಮೂರು ಕೊಲೆ ಪ್ರಕರಣಗಳಿವೆ. ಕಾಡುಗೋಡಿ, ಜಯನಗರ, ಕೋಣನಕುಂಟೆ, ಕೆ.ಎಸ್.ಲೇಔಟ್, ಹುಳಿಮಾವು, ಆಡುಗೋಡಿ, ವಿಲ್ಸನ್ ಗಾರ್ಡನ್ ಠಾಣೆಗಳಲ್ಲಿ ಕೊಲೆ ಯತ್ನ ಪ್ರಕರಣಗಳಿದ್ದು, ಸುಲಿಗೆ, ದರೋಡೆ ಹಾಗೂ ಬೆದರಿಕೆ ಸೇರಿದಂತೆ 15 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ನಿನ್ನೆ (ನವೆಂಬರ್ 16) ರಾತ್ರಿ 11 ಗಂಟೆಗೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಸಿಸಿಬಿ ಪೊಲೀಸರು ಪಳನಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:
ಬೆಂಗಳೂರಿನಲ್ಲಿ ಪರಾರಿಯಾಗa ಲು ಯತ್ನಿಸುತ್ತಿದ್ದ ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್!
ಪೊಲೀಸರು-ಕೊಲೆ ಆರೋಪಿಗಳ ನಡುವೆ ಫೈರಿಂಗ್; ಆರೋಪಿಯ ಮುಖಕ್ಕೇ ಬಿತ್ತು ಎಎಸ್ಐ ಹೊಡೆದ ಗುಂಡು
Published On - 7:38 am, Wed, 17 November 21