Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಬೇಕು: ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಕರೆ

Dr CN Ashwath Narayan: ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಿದರೆ ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿರುತ್ತದೆ. ಮಣ್ಣಿನ ಮಕ್ಕಳು ಸ್ವತಃ ಶ್ರಮಜೀವಿಗಳು ಉದ್ಯಮಶೀಲತೆಯ ಸ್ಫೂರ್ತಿ ಹೊಂದಿರುವವರು ಎಂದು ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದರು.

ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಬೇಕು: ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಕರೆ
ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಬೇಕು: ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಕರೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Nov 26, 2022 | 5:39 PM

ಬೆಂಗಳೂರು: “ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು (entrepreneurs) ಶ್ರಮಿಸಿದರೆ ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿರುತ್ತದೆ. ಮಣ್ಣಿನ ಮಕ್ಕಳು (vokkaligas) ಸ್ವತಃ ಶ್ರಮಜೀವಿಗಳು ಉದ್ಯಮಶೀಲತೆಯ ಸ್ಫೂರ್ತಿ ಹೊಂದಿರುವವರು” ಎಂದು ಉನ್ನತ ಶಿಕ್ಷಣ, ಎಲೆಕ್ಟ್ರಾನಿಕ್ಸ್ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ್ (Dr CN Ashwath Narayan) ಹೇಳಿದರು.

ಅವರು ಪ್ರಾದೇಶಿಕ ಸಮುದಾಯದ ಆರ್ಥಿಕ ಸಬಲೀಕರಣಕ್ಕಾಗಿ ರಚಿಸಲಾಗಿರುವ “ಫರ್ಸ್ಟ್ ಸರ್ಕಲ್ – First circle” ಎಂಬ ವೇದಿಕೆಯು ನವೆಂಬರ್ 25, 26 ಮತ್ತು 27, 2022ರಂದು ಮೂರು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಬಿಸಿನೆಸ್ ನೆಟ್ ವರ್ಕಿಂಗ್ ಎಕ್ಸ್ ಪೋ ಹಾಗೂ ವಾರ್ಷಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಅವರು, “ಕರ್ನಾಟಕ, ಬೆಂಗಳೂರು ಇಡೀ ವಿಶ್ವಕ್ಕೆ ಆವಿಷ್ಕಾರದ ನಾಡು ಎನಿಸಿದೆ. ಎಲ್ಲಾ ಕ್ಷೇತ್ರದಲ್ಲೂ ಬೆಂಗಳೂರು ವಿಶ್ವಕ್ಕೆ ಮಾದರಿಯಾಗಿದೆ.

ಇಂತಹ ಪುಣ್ಯಭೂಮಿ, ಭರವಸೆಯ ನಾಡಿನಲ್ಲಿ ನಾವು ಇದ್ದೇವೆ. ಇಂತಹ ಅವಕಾಶಗಳ ನಾಡಿನ ಶಕ್ತಿಯನ್ನು ಅರಿಯಬೇಕು. ಉದ್ಯಮಿಗಳಾಗಿ ಯಶಸ್ಸು ಗಳಿಸಿದ ನಂತರ ಅದನ್ನು ಸಮಾಜಕ್ಕೆ ಹಿಂದಕ್ಕೆ ಕೊಡಬೇಕು. ಹೊಸ ಐಡಿಯಾಗಳನ್ನು ಹೊಂದಿರುವ ಉದ್ಯಮಿಗಳಿಗೆ ಸದಾ ನಾನು ಬೆಂಬಲಿಸುತ್ತೇನೆ. ನನ್ನ ಕರ್ತವ್ಯವೇ ಅವರನ್ನು ಸನ್ನದ್ಧರನ್ನಾಗಿಸುವುದು, ಅವರಿಗೆ ಸೌಲಭ್ಯ ಒದಗಿಸುವುದು. ನಮ್ಮ ಜೊತೆಯಲ್ಲಿರುವ ನೂರಾರು ಮಂದಿ ಇಂದು ಉದ್ಯಮಿಗಳಾಗಿದ್ದಾರೆ. ಅವರ ಪ್ರಯತ್ನಕ್ಕೆ ನಮ್ಮ ಕಡೆಯಿಂದ ಬೆಂಬಲ ಅಷ್ಟೇ. ಉದ್ಯಮಿಗಳಾಗಲು ಬಯಸುವ ಎಲ್ಲರಿಗೂ ನಾವು ಬೆಂಬಲ, ಸಹಕಾರ ನೀಡುತ್ತೇವೆ” ಎಂದರು.

ಬಿಬಿಎಂಪಿ ವಿಶೇಷ ಆಯುಕ್ತ ಜೈರಾಮ್ ರಾಯ್ಪುರ, ಐ.ಆರ್.ಎಸ್ ಅವರು ಮಾತನಾಡಿ “ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಈ ಫರ್ಸ್ಟ್ ಸರ್ಕಲ್ ಇನ್ನೂ 25 ಜಿಲ್ಲೆಗಳಿಗೆ ವಿಸ್ತರಿಸಲಿದೆ. ಕ್ರಮೇಣ ದೇಶದ ವಿವಿಧ ರಾಜ್ಯಗಳಿಗೆ ವಿಸ್ತರಿಸಲಿದೆ. ಇನ್ನೂ 250ಕ್ಕೂ ಹೆಚ್ಚು ಉದ್ಯಮಿಗಳು ಇದರ ವ್ಯಾಪ್ತಿಗೆ ಸೇರಿಕೊಳ್ಳಲಿದ್ದಾರೆ. ಇದು ಆಂತರಿಕ ಅರ್ಥ್ಯವ್ಯವಸ್ಥೆ ಸುಧಾರಣೆಗೆ ನೆರವಾಗಲಿದೆ” ಎಂದರು.

ಅಬಕಾರಿ ಸಚಿವರಾದ ಕೆ. ಗೋಪಾಲಯ್ಯ, ಸಂಸದರಾದ ಬಿ.ಎನ್.ಬಚ್ಚೇಗೌಡ, ಫ್ರೀಡಂ ಆಪ್ ಸಂಸ್ಥಾಪಕ ಸುಧೀರ್, ಕರ್ನಾಟಕ ಗ್ಯಾಸ್ಟ್ರೊ ಎಂಟರಾಲಜಿ ಇನ್ಸ್ ಟಿಟ್ಯೂಟ್ ಸಂಸ್ಥಾಪಕ ನಿರ್ದೇಶಕ ಡಾ.ನಾಗೇಶ್, ಫರ್ಸ್ಟ್ ಸರ್ಕಲ್ ಸದಸ್ಯರಾದ ಮನೋಹರ್ ಗೌಡ, ನಂದೀಶ್, ಇಂದ್ರೇಶ್, ಫಿಡೆಲಿಟಸ್ ಸಂಸ್ಥಾಪಕ, ಉದ್ಯಮಿ ಅಚ್ಚುತ್ ಗೌಡ ಮುಂತಾದವರು ಉಪಸ್ಥಿತರಿದ್ದರು.

ಫಸ್ಟ್ ಸರ್ಕಲ್ ಸಂಸ್ಥೆಯು ಪ್ರಾದೇಶಿಕ ಸಮುದಾಯದ ಏಳಿಗೆಗಾಗಿ ಕೊಡುಗೆ ನೀಡಲು ಸಿದ್ದವಿರುವ ವೃತ್ತಿಪರರು, ಸ್ವಯಂ ಉದ್ಯೋಗಿಗಳು, ಹಾಗೂ ವ್ಯಾಪಾರಸ್ಥರನ್ನು ಒಳಗೊಂಡಿದೆ. ಜಾಗತಿಕ ನೆಟ್ ವರ್ಕಿಂಗ್ ಮೂಲಕ ಉದ್ದಿಮೆಗಳನ್ನು ಬೆಳೆಸಲು ಫಸ್ಟ್ ಸರ್ಕಲ್ ಸಹಾಯ ಮಾಡುತ್ತದೆ. ಅಲ್ಪಕಾಲದಲ್ಲಿ ಸಂಸ್ಥೆಯು ರಾಜ್ಯಾದ್ಯಂತ ವಿಸ್ತರಿಸುತ್ತಿದೆ. ಆದಾಗ್ಯೂ ಬೆಂಗಳೂರು ನಗರಕ್ಕೆ ಮೊದಲ ಆದ್ಯತೆ ನೀಡಲಾಗಿದೆ, ಕ್ರಮೇಣ ಕರ್ನಾಟಕದ ಎಲ್ಲಾ ನಗರಗಳಿಗೂ ವಿಸ್ತರಿಸಲಿದೆ.

ಈ ಎಕ್ಸ್ ಪೋ ಕುರಿತು ಫರ್ಸ್ಟ್ ಸರ್ಕಲ್ ಅಧ್ಯಕ್ಷ ಹಾಗೂ ಸ್ಥಾಪಕ ಸದಸ್ಯ ನಂದೀಶ್ ಎಸ್.ಆರ್ ಅವರು ಮಾತನಾಡಿ “ಫರ್ಸ್ಟ್ ಸರ್ಕಲ್ ಆಯೋಜಿಸಿರುವ ಈ ಮೂರು ದಿನಗಳ ಎಕ್ಸ್ ಪೋ ಕರ್ನಾಟಕದ ಉದ್ಯಮಿಗಳಿಗೆ ಜಾಲ ನಿರ್ಮಿಸಿಕೊಳ್ಳಲು, ಹೂಡಿಕೆದಾರರನ್ನು ಆಕರ್ಷಿಸಲು ಹಾಗೂ ತಮ್ಮ ಉದ್ಯಮ ಬಾಂಧವರೊಂದಿಗೆ ಸಂಪರ್ಕ ಹೊಂದಲು ಅವಕಾಶ ನೀಡುತ್ತದೆ. ದೇಶ ವಿದೇಶಗಳ ಹೂಡಿಕೆದಾರರು, ಉದ್ಯಮಿಗಳು ಭಾಗವಹಿಸುವ ಈ ಎಕ್ಸ್ ಪೋ ಹಾಗೂ ಸಮ್ಮೇಳನದ ಸದವಕಾಶವನ್ನು ಉದಯೋನ್ಮುಖ ಉದ್ಯಮಿಗಳು ಪಡೆಯಬೇಕು ಎನ್ನುವುದು ನಮ್ಮ ಉದ್ದೇಶ. ತಮ್ಮ ಉದ್ಯಮ ವಿಸ್ತರಣೆ ಮಾಡಿಕೊಳ್ಳುವವರಿಗೆ ಅವಕಾಶ ನೀಡುತ್ತದೆ” ಎಂದರು.

ಪ್ರಸ್ತುತ ಫಸ್ಟ್ ಸರ್ಕಲ್ ಸಂಸ್ಥೆಯು 6 ವಲಯಗಳಲ್ಲಿ 150 ಸದಸ್ಯರು ಹಾಗೂ 500+ ಸದಸ್ಯರನ್ನು ಒಳಗೊಂಡಿದ್ದು ಕೇವಲ 6 ತಿಂಗಳ ಅಲ್ಪಾವಧಿಯಲ್ಲಿ 57 ಕೋಟಿ ರೂ ಗಳ ವ್ಯವಹಾರ ನಡೆಸಲಾಗಿದೆ. ಫಸ್ಟ್ ಸರ್ಕಲ್ ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ಸಾವಿರಾರು ಸಂಭಾವ್ಯ ಗ್ರಾಹಕರೊಂದಿಗಿರುವ ಹಲವು ವಲಯಗಳ ಹೂಡಿಕೆದಾರರು, ಉದ್ಯಮಿಗಳು, ವಾಣಿಜ್ಯೋದ್ಯಮಿಗಳು, ಯಶಸ್ವಿ ವೃತ್ತಿಪರರು, ಅಧಿಕಾರಿಗಳು ಮಾತ್ರವಲ್ಲದೆ ದೇಶಾದ್ಯಂತ ಇರುವ ನವನವೀನ ಸ್ಟಾರ್ಟ್ ಅಪ್ ಗಳು, ವ್ಯಾಪಾರೀ ಸಂಸ್ಥೆಗಳು ಮತ್ತು ಉದ್ಯಮಿಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಭಾರತದ ಅತ್ಯಂತ ದೊಡ್ಡ ಬೃಹತ್ ಬಿಸಿನೆಸ್ ಎಕ್ಸ್ ಪೋ ದಲ್ಲಿ ಪ್ರಪಂಚದ ವಿವಿಧ ಭಾಗಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಅರಮನೆ ಮೈದಾನದ 6ನೇ ದ್ವಾರದ ಗ್ರ್ಯಾಂಡ್ ಕ್ಯಾಸಲ್ ನಲ್ಲಿಈ ಕಾರ್ಯಕ್ರಮ ನಡೆಯುತ್ತಿದೆ.

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!