AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್.ಎಂ.ಕೃಷ್ಣ, ನಾರಾಯಣಮೂರ್ತಿ, ಪಡುಕೋಣೆಗೆ ಚೊಚ್ಚಲ ‘ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ

KempeGowda International Award: ಜೂನ್ 27ರ ಸೋಮವಾರ ವಿಧಾನಸೌಧದಲ್ಲಿ ನಡೆಯಲಿರುವ ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮೂವರಿಗೂ ತಲಾ 5 ಲಕ್ಷ ರೂಪಾಯಿ ನಗದುಸಹಿತ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಎಸ್.ಎಂ.ಕೃಷ್ಣ, ನಾರಾಯಣಮೂರ್ತಿ, ಪಡುಕೋಣೆಗೆ ಚೊಚ್ಚಲ 'ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ
ಎಸ್.ಎಂ.ಕೃಷ್ಣ, ನಾರಾಯಣಮೂರ್ತಿ, ಪಡುಕೋಣೆಗೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 25, 2022 | 1:51 PM

Share

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಗೌರವಾರ್ಥ ಈ ವರ್ಷದಿಂದ ಸರಕಾರವು ಕೊಡಮಾಡುತ್ತಿರುವ ‘ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ (KempeGowda International Award) ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಮತ್ತು ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಜೂನ್ 27ರ ಸೋಮವಾರ ವಿಧಾನಸೌಧದಲ್ಲಿ ನಡೆಯಲಿರುವ ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮೂವರಿಗೂ ತಲಾ 5 ಲಕ್ಷ ರೂಪಾಯಿ ನಗದುಸಹಿತ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿ ಕೊಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಿವ ಸೇನೆಯ ಕೆಲ ಭಿಕ್ಷುಕರ ಕೈ ಹಿಡಿದು ಬಿಜೆಪಿ ತಾನೊಂದು ಮಹಾಶಕ್ತಿಯೆಂದು ಬಿಂಬಿಸಿಕೊಳ್ಳುತ್ತಿದೆ: ಸಾಮ್ನಾದಲ್ಲಿ ಸಂಪಾದಕೀಯ!

ಸಚಿವ ಅಶ್ವತ್ಥ ನಾರಾಯಣ ಅವರು, ಮೂವರು ಪುರಸ್ಕೃತರ ಪೈಕಿ ಹಿರಿಯರಾದ ಕೃಷ್ಣ ಅವರನ್ನು ಶನಿವಾರ ಅವರ ಮನೆಯಲ್ಲಿ ಭೇಟಿಯಾಗಿ, ಕೆಂಪೇಗೌಡ ಜಯಂತಿಗೆ ಆಗಮಿಸಿ ಪ್ರಶಸ್ತಿ ಸ್ವೀಕರಿಸಬೇಕೆಂದು ಸರಕಾರದ ಪರವಾಗಿ ಆಹ್ವಾನಿಸಿದರು. ಇದಕ್ಕೆ ಕೃಷ್ಣ ಅವರು ಸಮ್ಮತಿಸಿ, ಪ್ರಶಸ್ತಿಗೆ ತಮ್ಮನ್ನು ಆಯ್ಕೆ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ‘ಮೂವರೂ ಪುರಸ್ಕೃತರು ಬೆಂಗಳೂರಿನ ಬೆಳವಣಿಗೆಗೆ ಮತ್ತು ಕೀರ್ತಿಗೆ ತಮ್ಮದೇ ಆದ ಅನನ್ಯ ವಿಧಾನಗಳ ಮೂಲಕ ಅನುಪಮ ಕೊಡುಗೆ ನೀಡಿದ್ದಾರೆ’ ಎಂದು ಬಣ್ಣಿಸಿದರು.

ಸಾಧಕರನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರದ ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು. ಇದರಲ್ಲಿ ಉದ್ಯಮಿ ಮೋಹನದಾಸ್ ಪೈ, ವಿವೇಕಾನಂದ ಯೂತ್ ಮೂವ್ ಮೆಂಟ್ ಸ್ಥಾಪಕ ಆರ್.ಬಾಲಸುಬ್ರಹ್ಮಣ್ಯಂ, ನಿವೃತ್ತ ಐಎಎಸ್ ಅಧಿಕಾರಿ ಎಂ.ಕೆ.ಶಂಕರಲಿಂಗೇಗೌಡ ಅವರು ಸದಸ್ಯರಾಗಿದ್ದರು. ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಆರ್. ವಿನಯದೀಪ್ ಅವರು ಸದಸ್ಯ ಕಾರ್ಯದರ್ಶಿ ಆಗಿದ್ದರು.

ಇದನ್ನೂ ಓದಿ: WhatsApp: ನೀವು ವಾಟ್ಸ್​ಆ್ಯಪ್ ಕಂಪ್ಯೂಟರ್​ನಲ್ಲಿ ಉಪಯೋಗಿಸ್ತೀರ?: ಹಾಗಿದ್ರೆ ಈ ಟ್ರಿಕ್ ಫಾಲೋ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!