AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತಿಹಾಸದಲ್ಲೇ ಮೊದಲ ಬಾರಿಗೆ ಶಕ್ತಿಸೌಧದಲ್ಲಿ ಸಾಹಿತ್ಯ ಜಾತ್ರೆ: ಪುಸ್ತಕ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಶಕ್ತಿ ಸೌಧ ಐತಿಹಾಸಿಕ ಕಾರ್ಯಕ್ರಮ ಸಾಕ್ಷಿಯಾಗಿದೆ. ಏಕೆಂದರೆ ಸಾಹಿತ್ಯ ಕ್ಷೇತ್ರ ಮತ್ತಷ್ಟು ವಿಸ್ತರಿಸಬೇಕು ಮತ್ತು ಯುವಕರಲ್ಲಿ ಓದಿನ ಹುಚ್ಚು ಹೆಚ್ಚಾಗಬೇಕು ಎಂಬ ಉದ್ದೇಶದಿಂದ ವಿಧಾನಸಭೆ ಸ್ಪೀಕರ್ ಯು ಟಿ‌ ಖಾದರ್ ವಿಭಿನ್ನ ಹೆಜ್ಜೆ ಇಟ್ಟಿದ್ದು, ವಿಧಾನಸೌಧದ ಆವರಣದಲ್ಲಿ ಇಂದಿನಿಂದ 5 ದಿನ ಪುಸ್ತಕ ಮೇಳ ನಡೆಯಲಿದೆ.

ಇತಿಹಾಸದಲ್ಲೇ ಮೊದಲ ಬಾರಿಗೆ ಶಕ್ತಿಸೌಧದಲ್ಲಿ ಸಾಹಿತ್ಯ ಜಾತ್ರೆ: ಪುಸ್ತಕ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಇತಿಹಾಸದಲ್ಲೇ ಮೊದಲ ಬಾರಿಗೆ ಶಕ್ತಿಸೌಧದಲ್ಲಿ ಸಾಹಿತ್ಯ ಜಾತ್ರೆ: ಪುಸ್ತಕ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
TV9 Web
| Edited By: |

Updated on:Feb 27, 2025 | 7:30 PM

Share

ಬೆಂಗಳೂರು, ಫೆಬ್ರವರಿ 27: ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಶಕ್ತಿಸೌಧದಲ್ಲಿ ಸಾಹಿತ್ಯ ಜಾತ್ರೆ ಆಯೋಜನೆ ಮಾಡಲಾಗಿದ್ದು, ಇಂದಿನಿಂದ 5 ದಿನ ನಡೆಯಲಿರುವ ಪುಸ್ತಕ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಿದ್ದಾರೆ. ಈ ವೇಳೆ ಶಕ್ತಿ ಸೌಧದ ಮುಂದೆ ಸ್ಪೀಕರ್ ಯು ಟಿ‌ ಖಾದರ್ ಸಾಹಿತ್ಯದ ತೇರು ಎಳೆದಿದ್ದಾರೆ.

ಕರ್ನಾಟಕ ವಿಧಾನಸಭಾ ಸಚಿವಾಲಯ, ದೇಶದಲ್ಲಿಯೇ ಮೊದಲ ಬಾರಿಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಆಯೋಜಿಸಿದೆ. ಅಧಿಕೃತವಾಗಿ ಇಂದು ಸಂಜೆಯಿಂದಲೇ ಐದು ದಿನಗಳ ಕಾಲ ಈ ಪುಸ್ತಕ ಮೇಳ ಶುರುವಾಗಿದೆ. ಪುಸ್ತಕ ಮೇಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಿದ್ದರು, ಯುಟಿ ಖಾದರ್, ಬಸವರಾಜ್ ಹೊರಟ್ಟಿ ಸಹ ಭಾಗಿಯಾಗಿದ್ದರು.

ಶಕ್ತಿಸೌಧದಲ್ಲಿ ಪುಸ್ತಕ ಮೇಳ

ಇನ್ನು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಪ್ರಸಕ್ತ ಸಾಲಿನ ಅನುದಾನದಲ್ಲಿ 2 ಲಕ್ಷ ರೂ. ಗಳ ಮಿತಿಯೊಳಗೆ ಶಾಸಕರು ಪುಸ್ತಕ ಖರೀದಿ ಮಾಡಲು ಅವಕಾಶ ನೀಡಲಾಗಿದೆ. ಶಾಸಕರು ಪುಸ್ತಕಗಳನ್ನು ಖರೀದಿಸಿ ಆಯಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲಾ-ಕಾಲೇಜುಗಳಿಗೆ ನೀಡಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ
Image
ಕರ್ನಾಟಕ-ಮಹಾರಾಷ್ಟ್ರ ಭಾಷಾ ಸಮಸ್ಯೆ ಬಗೆಹರಿಸಲು ಕೇಂದ್ರ ಮುಂದಾಗಲಿ
Image
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
Image
ಬೆಂಗಳೂರು ಅರಮನೆ ವಿವಾದ; ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಒಪ್ಪದ ಸುಪ್ರೀಂ
Image
ಕಲಿಕಾ ಸಮಯ, ನಗರದವಾಸಿಗಳಿಗಿಂತ ಗ್ರಾಮೀಣದವರೇ ವಾಸಿ

ಇದನ್ನೂ ಓದಿ: ಕರ್ನಾಟಕದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧ: ಸಚಿವ ದಿನೇಶ್ ಗುಂಡೂರಾವ್

150 ಮಳಿಗೆ ತೆರೆಯಲು ಮಾತ್ರ ಅವಕಾಶವಿದ್ದು, ವಿವಿಧ ಅಕಾಡೆಮಿಗಳ ಮಳಿಗೆಗಳು, ಖಾಸಗಿ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶ ಇರಲಿದೆ. ಇನ್ನು, ಪುಸ್ತಕ ಮೇಳದ ಮೂಲಕ ಶಾಸಕಾಂಗವನ್ನು ಸಾಹಿತ್ಯ ಕ್ಷೇತ್ರದ ಹತ್ತಿರಕ್ಕೆ ತೆಗೆದುಕೊಂಡು ಹೋಗುವ ಹಾಗೂ ಪುಸ್ತಕ ಮೇಳದ ನೆಪದಲ್ಲಿ ಸಾರ್ವಜನಿಕರು, ಸಾಹಿತ್ಯಾಸಕ್ತರನ್ನು ವಿಧಾನಸೌಧಕ್ಕೆ ಹತ್ತಿರವಾಗಿಸುವ ಪ್ರಯತ್ನವನ್ನ ಯುಟಿ ಖಾದರ್ ಮಾಡಿದ್ದಾರೆ. ಅವರ ಈ ನಡೆಗೆ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನಾಳೆ ದುಡ್ಡು ತಂದು ಪುಸ್ತಕ ಖರೀದಿಸುವೆ ಎಂದ ಸಿದ್ದರಾಮಯ್ಯ

ಪುಸ್ತಕ ಮೇಳಕ್ಕೆ ಚಾಲನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅತ್ಯಂತ ಸಂತೋಷದಿಂದ‌ ಉದ್ಘಾಟನೆ ಮಾಡಿದ್ದೇನೆ. 150 ಪುಸ್ತಕ ಮಳಿಗೆಗಳು ಇವೆ. ಪುಸ್ತಕ ಪ್ರಿಯರಿಗೆ ಇದೊಂದು ಹಬ್ಬ. ಬೇರೆ ಭಾಷೆಯಿಂದ ಭಾಷಾಂತರ ಆಗಿರುವ ಪುಸ್ತಕ ಸಹ ಇಲ್ಲಿ ಸಿಗುತ್ತೆ. ದೇಶ ಸುತ್ತು, ಕೋಶ ಓದು ಅಂತ ಗಾದೆ ಇದೆ. ಜ್ಞಾನ ವಿಕಾಸ ಮಾಡಬೇಕು. ಓದುವಿಕೆಯಿಂದ ಜ್ಞಾನ ವಿಕಾಸ ಆಗುತ್ತದೆ. ಮಕ್ಕಳು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ನಾನು ಇಂದು ದುಡ್ಡು ತಂದಿಲ್ಲ. ನಾಳೆ ದುಡ್ಡು ತಂದು ಪುಸ್ತಕ ತೆಗೆದುಕೊಳ್ಳುತ್ತೇನೆ ಎಂದು ನಗೆ ಚಟಾಕಿ ಹಾರಿಸಿದರು. ನನಗೆ ಬೇಕಾದ ಪುಸ್ತಕ ಖರೀದಿ ಮಾಡುತ್ತೇನೆ. ಬೇರೆಯವರು ಖರೀದಿ ಮಾಡಿರೋ ಪುಸ್ತಕ ಓದಬಾರದು. ನೀವೇ ಖರೀದಿ ಮಾಡಿ ಪುಸ್ತಕ ಓದಬೇಕು ಎಂದಿದ್ದಾರೆ.

ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಿಷ್ಟು 

ಸ್ಪೀಕರ್ ಯು.ಟಿ ಖಾದರ್ ಮಾತನಾಡಿ, ಪುಸ್ತಕ ಮೇಳ ಹಮ್ಮಿಕೊಳ್ಳುವ ಕನಸು ಕಂಡಿದ್ದೆವು. ಸಭಾಪತಿಗಳು ಎಲ್ಲಾ ಸಹಕಾರ ಕೊಟ್ಟಿದ್ದಾರೆ. ವಿಧಾನಸೌಧ ರಾಜಕಾರಣಿಗಳಿಗೆ ಮಾತ್ರವಲ್ಲ. ಎಲ್ಲರಿಗೂ ವಿಧಾನಸೌಧ ಎನ್ನುವ ಭಾವನೆ ಬರಲು ಅವಕಾಶ ಮಾಡಿಕೊಟ್ಟಿದ್ದೇವೆ. ಸಾಹಿತಿಗಳಿಗೆ ನಾವು ವಿಶೇಷ ಗೌರವ ಕೊಡ್ತಿದ್ದೇವೆ. ಸಾಹಿತಿಗಳು ಸತ್ಯವನ್ನ ಹೇಳುವವರು. ಸಾಹಿತಿಗಳಿಗೆ, ಬರಹಗಾರರಿಗೆ ನಾವು ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಸಿಲ ಶಾಖಕ್ಕೆ ಎಸಿ, ಕೂಲರ್​ ಖರೀದಿಯತ್ತ ಮುಖ ಮಾಡಿದ ಸಿಟಿ ಮಂದಿ: ಬೆಲೆ ಕೇಳೇ ಮತ್ತಷ್ಟು ಬೆವೆತ ಜನ

ಒಟ್ಟಿನಲ್ಲಿ ದೈನಂದಿನ ಜಂಜಾಟದಲ್ಲಿ ಮುಳುಗಿ ಹೋಗಿರುವ ನಾಗರಿಕರಲ್ಲಿ ಸಾಹಿತ್ಯದ ಅಭಿರುಚಿ ಮೂಡಿಸುವ ನಿಟ್ಟಿನಲ್ಲಿ ಈ ತೀರ್ಮಾನ ಸ್ವಾಗತಾರ್ಹ. ಶಕ್ತಿಸೌಧದ ಮಂದೆ ಸಾಹಿತ್ಯದ ತೇರನ್ನು ಎಳೆದು ಈ ಮೇಳವನ್ನು ಯಶಸ್ವಿಗೊಳಿಸಬೇಕಿದೆ.

ವರದಿ: ಈರಣ್ಣಾ ಬಸವಾ ಟಿವಿನೈನ್ ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:06 pm, Thu, 27 February 25

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ