ಬೆಂಗಳೂರು: ಕೊರೊನಾ ವೈರಸ್ನ ಮೂಲವಾಗಿರೋ ಒಮಿಕ್ರಾನ್ ವೈರಸ್ ದೇಶದಲ್ಲಿ ಆತಂಕ ಸೃಷ್ಟಿಸಿದೆ. ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಆದ್ರೆ ಸದ್ಯ ಬಂದ ಮಾಹಿತಿಯಿಂದ ಒಮಿಕ್ರಾನ್ ಸೋಂಕಿತನ ಸಂಪರ್ಕದಲ್ಲಿದ್ದವರು ನಿರಾಳರಾಗಿದ್ದಾರೆ. ಒಮಿಕ್ರಾನ್ ಸೋಂಕಿತನ ಸಂಪರ್ಕದಲ್ಲಿದ್ದ ಐವರಿಗೂ ರೂಪಾಂತರಿ ಒಮಿಕ್ರಾನ್ ಸೋಂಕು ಇಲ್ಲ ಎಂದು ಟಿವಿ9ಗೆ ಬಿಬಿಎಂಪಿ ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಂದು ಮಧ್ಯಾಹ್ನ ಈ ಬಗ್ಗೆ ಅಧಿಕೃತ ಮಾಹಿತಿ ಬಹಿರಂಗ ಪಡಿಸಲಿದ್ದಾರೆ. ಕರ್ನಾಟಕದಲ್ಲಿ ಪತ್ತೆಯಾದ ಒಮಿಕ್ರಾನ್ ಸೋಂಕಿತ ವೈದ್ಯನ ಸಂಪರ್ಕದಲ್ಲಿದ್ದ ಐವರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಈ ಹಿನ್ನೆಲೆ ರಾಜ್ಯದಲ್ಲಿ ಆತಂಕ ಹೆಚ್ಚಾಗಿತ್ತು. ಕೊರೊನಾ ಸೋಂಕಿತರಿಗೆ ಒಮಿಕ್ರಾನ್ ಬಂದಿರಬಹುದೆಂದು ಐವರ ಸ್ಯಾಂಪಲ್ಸ್ ಜಿನೋಮಿಕ್ ಸೀಕ್ವೆನ್ಸಿಂಗ್‌ಗೆ ಕಳಿಸಲಾಗಿತ್ತು. ಸದ್ಯ ಜಿನೇಮಿಕ್ ಸೀಕ್ವೆನ್ಸಿಂಗ್‌ನಲ್ಲಿ ಒಮಿಕ್ರಾನ್ ಇಲ್ಲವೆಂದು ದೃಢಪಡಿಸಿದೆ. ಇಂದು ಮಧ್ಯಾಹ್ನದ ಬಳಿಕ ಟೆಸ್ಟ್ ರಿಪೋರ್ಟ್ ಲಭ್ಯವಾಗಲಿದೆ. ಟೆಸ್ಟ್ ರಿಪೋರ್ಟ್ ಲಭ್ಯವಾದ ಬಳಿಕ ಮತ್ತೊಮ್ಮೆ ಐವರಿಗೂ ಆರ್‌ಟಿಪಿಸಿಆರ್ ಟೆಸ್ಟ್ ಮಾಡಿಸಿ ಬಳಿಕ ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ ಇಂದೇ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.
ಕೊರೊನಾ ಸೋಂಕಿತ ವ್ಯಕ್ತಿ ನಾಪತ್ತೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರ್‌ಟಿಪಿಸಿಆರ್ ಟೆಸ್ಟ್ ವೇಳೆ ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ಕೆಐಎಬಿಗೆ ಬಂದ ಇಬ್ಬರಿಗೆ ಕೊರೊನಾ ದೃಢಪಟ್ಟಿದೆ. 43, 50 ವರ್ಷದ ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಒಮಿಕ್ರಾನ್ ಇದೆಯಾ ಎಂದು ಪತ್ತೆ ಹಚ್ಚಲು ಇಬ್ಬರ ಸ್ಯಾಂಪಲ್ಸ್ ಜಿನೋಮಿಕ್ ಸೀಕ್ವೆನ್ಸಿಂಗ್‌ಗೆ ರವಾನೆ ಮಾಡಲಾಗಿದೆ. ಆದ್ರೆ ಕೊರೊನಾ ಪಾಸಿಟಿವ್ ತಿಳಿಯುತ್ತಿದ್ದಂತೆ ಸೋಂಕಿತ ವ್ಯಕ್ತಿ ನಾಪತ್ತೆಯಾಗಿದ್ದು ಓರ್ವ ಸೊಂಕಿತನಿಗೆ ಬೋರಿಂಗ್ ಆಸ್ವತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ. ನಾಪತ್ತೆಯಾದ ಸೋಂಕಿತನಿಗಾಗಿ ಹುಡುಕಾಟ ಶುರುವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿಯಾಗಿದೆ.
ಮೆಜೆಸ್ಟಿಕ್‌ನ BMTC ಬಸ್ ನಿಲ್ದಾಣದಲ್ಲಿ ರೂಲ್ಸ್ ಬ್ರೇಕ್
ನಗರದಲ್ಲಿ ಮಹಾಮಾರಿ ಕೊರೊನಾ ಮತ್ತೆ ತನ್ನ ಅಟ್ಟಹಾಸ ಶುರು ಮಾಡಿದೆ. ಇದರ ನಡುವೆ ಜನ ಕೂಡ ಭಾರಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಮೆಜೆಸ್ಟಿಕ್‌ನ BMTC ಬಸ್ ನಿಲ್ದಾಣದಲ್ಲಿ ರೂಲ್ಸ್ ಬ್ರೇಕ್ ಆಗುತ್ತಿದೆ. ದೈಹಿಕ ಅಂತರವೂ ಇಲ್ಲ, ಮಾಸ್ಕ್ ಕೂಡ ಧರಿಸದೆ ಪ್ರಯಾಣಿಕರು ನಿರ್ಲಕ್ಷ್ಯವಾಗಿ ವರ್ತಿಸುತ್ತಿದ್ದಾರೆ. ಜೊತೆಗೆ ಬಿಎಂಟಿಸಿ ಚಾಲಕ, ನಿರ್ವಾಹಕರಿಂದಲೂ ನಿರ್ಲಕ್ಷ್ಯ ಕಂಡು ಬರುತ್ತಿದೆ. ಪ್ರತಿನಿತ್ಯ ಸಾವಿರಾರು ಜನ ಓಡಾಡುವ ಕಡೆ ಈ ರೀತಿ ರೂಲ್ಸ್ ಬ್ರೇಕ್ ಹಾಕುತ್ತಿರುವುದು ಅಪಾಯಕ್ಕೆ ಸ್ವಾಗತ ಮಾಡಿದಂತೆ.
ಇನ್ನು ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲೂ ಇದೇ ರೀತಿಯ ಪರಿಸ್ಥಿತಿ ಕಂಡು ಬಂದಿದೆ. ಮಾಸ್ಕ್ ಧರಿಸದೆ, ದೈಹಿಕ ಅಂತರ ಪಾಲಿಸದೆ ನಿರ್ಲಕ್ಷ್ಯ ತೋರಲಾಗುತ್ತಿದೆ. ಸದ್ಯ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಕೊವಿಡ್ ಟೆಸ್ಟ್ ಹೆಚ್ಚಳ ಮಾಡಲಾಗಿದ್ದು ಕೇರಳ, ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಲು ಬಿಬಿಎಂಪಿ ಮುಂದಾಗಿದೆ.
ಇದನ್ನೂ ಓದಿ: ಒಮಿಕ್ರಾನ್ ಸೋಂಕಿತ ವಿದೇಶಕ್ಕೆ ಪರಾರಿ ಪ್ರಕರಣ; ಆಫ್ರಿಕಾ ಪ್ರಜೆ, ಶಾಂಗ್ರಿ-ಲಾ ಆಡಳಿತ ಮಂಡಳಿ ವಿರುದ್ಧ ಎಫ್ಐಆರ್ ದಾಖಲು
Published On - 8:32 am, Wed, 8 December 21