ಬೆಂಗಳೂರಿನ ಐವರಲ್ಲಿ ಝೀಕಾ ವೈರಸ್ ಪತ್ತೆ​​​, ಗರ್ಭಿಣಿಯರೇ ಎಚ್ಚರ!

ಮಳೆಗಾಲ ಆರಂಭವಾಗುತ್ತಿದ್ದಂತೆ ಡೆಂಗ್ಯೂ ರೋಗ ಭಯದ ನಡುವೆ ಜನರಿಗೆ ಮತ್ತೊಂದು ರೋಗದ ಭಯ ಶುರುವಾಗಿದೆ. ಝೀಕಾ ವೈರಸ್ ಬೆಂಗಳೂರಿಗೂ ಕಾಲಿಟ್ಟಿದೆ. ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ಐವರಲ್ಲಿ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ. ಹೀಗಾಗಿ ವಿಶೇಷವಾಗಿ ಗರ್ಭಣಿಯರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ​

ಬೆಂಗಳೂರಿನ ಐವರಲ್ಲಿ ಝೀಕಾ ವೈರಸ್ ಪತ್ತೆ​​​, ಗರ್ಭಿಣಿಯರೇ ಎಚ್ಚರ!
ಝೀಕಾ ವೈರಸ್
Follow us
| Updated By: ವಿವೇಕ ಬಿರಾದಾರ

Updated on:Aug 18, 2024 | 1:56 PM

ಬೆಂಗಳೂರು, ಆಗಸ್ಟ್​ 18: ಬೆಂಗಳೂರಿನ (Bengaluru) ಜಿಗಣಿ ಪ್ರದೇಶದಲ್ಲಿ ಐವರಲ್ಲಿ ಝೀಕಾ ವೈರಸ್ (Zika Virus)​​​ ಸೋಂಕು ಪತ್ತೆಯಾಗಿದೆ. ಝೀಕಾ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಜಿಗಣಿ ಪ್ರದೇಶವನ್ನು ಕಂಟೋನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಐವರು ಸೋಂಕಿತರ ಮೇಲೆ ಆರೋಗ್ಯ ಇಲಾಖೆ (Karnataka Health Department) ನಿಗಾ ಇಟ್ಟಿದೆ. ಝೀಕಾ ವೈರಸ್ ಸೋಂಕಿತರ ಕುಟುಂಬಸ್ಥರ ರಕ್ತದ ಮಾದರಿ ಸಂಗ್ರಹಿಸಲಾಗಿದ್ದು, ಪರೀಕ್ಷೆ ನಡೆಸಲಾಗುತ್ತಿದೆ.

ಬೆಂಗಳೂರಿನಲ್ಲಿ ಝೀಕಾ ಸೋಂಕು ಪತ್ತೆಯಾದ ಬಗ್ಗೆ, ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಮಾತನಾಡಿ, ಎರಡು ವಾರದಲ್ಲಿ ಐದು ಪ್ರಕರಣಗಳು ಪತ್ತೆಯಾಗಿವೆ ಆತಂಕಪಡುವ ಅಗತ್ಯವಿಲ್ಲ. ಆದರೆ ಗರ್ಭಿಣಿಯರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ 7 ಕೇಸ್​ ಪತ್ತೆ

ರಾಜ್ಯದಲ್ಲಿ 7 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ವೈರಸ್‌ ತಗುಲದಂತೆ ಮುನ್ನೆಚ್ಚರಿಕೆ ವಹಿಸಿದೆ. ಝೀಕಾ ವೈರಸ್​ ಪತ್ತೆಯಾದ ಮನೆಯ ಸುತ್ತಮುತ್ತಲಿನ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಪರೀಕ್ಷೆಗೊಳಪಡಿಸುತ್ತಿದೆ. ಆ ಪ್ರದೇಶದ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ಕಂಟೈನ್ವೆಂಟ್ ಜೋನ್ ಎಂದು ಪರಿಗಣಿಸುತ್ತದೆ. ಝೀಕಾ ವೈರಸ್​ಗೆ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಝೀಕಾ ವೈರಸ್ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.

ಇದನ್ನೂ ಓದಿ: ಡೆಂಗ್ಯೂ ಜೊತೆ ಝೀಕಾ ವೈರಸ್ ಬಗ್ಗೆಯೂ ಎಚ್ಚರ ವಹಿಸಿ; ಜಿಲ್ಲಾಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ರೋಗ ಲಕ್ಷಣ ಹೀಗಿದೆ

ಅತಿಯಾದ ತಲೆನೋವು, ಕೆಂಪಾದ ಕಣ್ಣು, ಜ್ವರ, ಮೈಯಲ್ಲಿ ಗುಳ್ಳೆ, ದದ್ದುಗಳು ಕಾಣಿಸಿಕೊಳ್ಳೋದು ಝೀಕಾ ವೈರಸ್ ಗುಣಲಕ್ಷಣ. ಇನ್ನು ಬಹುತೇಕ ಝೀಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2-7 ದಿನಗಳವರೆಗೆ ಇರುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:51 pm, Sun, 18 August 24

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ