AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ

ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಎ. ಕೃಷ್ಣಪ್ಪ ಎಂಬುವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.ಹೈಕೋರ್ಟ್ ಪೊಲೀಸರು ಮತ್ತು ದೂರುದಾರರಿಗೆ ನೋಟಿಸ್ ಜಾರಿಗೊಳಿಸಿ, ಆರೋಪಪಟ್ಟಿ ದಾಖಲಿಸದಂತೆ ತಡೆಯಾಜ್ಞೆ ನೀಡಿದೆ. ಈ ಪ್ರಕರಣ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಶಾಸಕ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ
ರಾಷ್ಟ್ರಧ್ವಜಕ್ಕೆ ಕೈ ಒರೆಸಿದ ಎ ಕೃಷ್ಣಪ್ಪ
Ramesha M
| Updated By: ವಿವೇಕ ಬಿರಾದಾರ|

Updated on:May 13, 2025 | 3:42 PM

Share

ಬೆಂಗಳೂರು, ಮೇ 13: ರಾಷ್ಟ್ರಧ್ವಜಕ್ಕೆ (National Flag) ಕೈ ಒರೆಸಿ ಅಪಮಾನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಎಫ್ಐಆರ್ (FIR) ರದ್ದು ಕೋರಿ ಎ.ಕೃಷ್ಣಪ್ಪ (A Krishnappa) ಎಂಬುವರು ಹೈಕೋರ್ಟ್​ಗೆ (High Court) ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರ ಪರ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ವಾದ ಮಂಡಿಸಿದ್ದು, ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವ ಉದ್ದೇಶವಿರಲಿಲ್ಲವೆಂದು ಪೀಠಕ್ಕೆ ತಿಳಿಸಿದ್ದಾರೆ. ಪ್ರಕರಣ ಸಂಬಂಧ ತಿಲಕನಗರ ಪೊಲೀಸ್ ಮತ್ತು ದೂರುದಾರ ಮಂಜುನಾಥ್​ ಎಂಬುವರಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಪ್ರಕರಣ ಸಂಬಂಧ ಆರೋಪ ಪಟ್ಟಿ ದಾಖಲಿಸದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ರಾಷ್ಟ್ರದ್ವಜಕ್ಕೆ ಕೈ ಒರೆಸಿದ ಎ ಕೃಷ್ಣಪ್ಪ

ಕಳೆದ ಗುರುವಾರ (ಮೇ.08) ರಂದು ಜಯನಗರ ಬಿಜೆಪಿ ಶಾಸಕ ರಾಮಮೂರ್ತಿ ಅವರು ತಮ್ಮ ಬೆಂಬಲಿಗರೊಂದಿಗೆ ಸಹಿ ಹಂಚ್ಚಿದ್ದರು. ಬಿಜೆಪಿ ಶಾಸಕ ರಾಮಮೂರ್ತಿ ಅವರ ಜೊತೆ ಎ. ಕೃಷ್ಣಪ್ಪ ಎಂಬುವರು ಕೂ ಸಿಹಿ ಹಂಚಿದ್ದರು. ಸಿಹಿ ಹಂಚಿದ ಬಳಿಕ ತಮ್ಮ ಕೈಯನ್ನು ಎ.ಕೃಷ್ಣಪ್ಪ ಅವರು ರಾಷ್ಟ್ರಧ್ವಜಕ್ಕೆ ಒರೆಸಿದ್ದಾರೆ. ಎ. ಕೃಷ್ಣಪ್ಪ ಅವರು ರಾಷ್ಟ್ರಧ್ವಜಕ್ಕೆ ಕೈ ಒರೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಇದನ್ನೂ ನೋಡಿ: ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್

ಇದನ್ನೂ ಓದಿ
Image
ಬೆಂಗಳೂರು ಮಾಲ್​ಗಳಲ್ಲಿ ಕಟ್ಟೆಚ್ಚರ: ಸೆಕ್ಯೂರಿಟಿ ಚೆಕಿಂಗ್, ಭದ್ರತೆ ಹೆಚ್ಚಳ
Image
ಈಜಿಪುರ ಫ್ಲೈಓವರ್ ಕಾಮಗಾರಿ ಪೂರ್ಣಗೊಳ್ಳಲು ಟ್ರಂಪ್ ಮಧ್ಯಸ್ಥಿಕೆ ವಹಿಸಬೇಕು
Image
ಮೋದಿ ಟೀಕಿಸುವ ಭರದಲ್ಲಿ ಎಡವಟ್ಟು ಮಾಡಿಕೊಂಡ ಕರ್ನಾಟಕ ಕಾಂಗ್ರೆಸ್
Image
ಪೊಲೀಸರು, ಡಿ-ಸ್ವ್ಯಾಟ್ ಪಡೆಯಿಂದ ಹುಡುಕಾಟ, ಡಿಸಿಪಿ ಸ್ಥಳದಲ್ಲಿ ಮೊಕ್ಕಾಂ

ಕಾಂಗ್ರೆಸ್​ ಆಕ್ರೋಶ

“ಬೆಂಗಳೂರಿನ ಜಯನಗರದಲ್ಲಿ ನಡೆದ ಸಿಹಿ ಹಂಚಿಕೆ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಕರವಸ್ತ್ರದಂತೆ ಬಳಸಿ ಅಪಮಾನಿಸಿದ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಹಾಗೂ ಬಿಜೆಪಿ ನಾಯಕರು! ನಕಲಿ ದೇಶಪ್ರೇಮಿ ಬಿಜೆಪಿಗರು ಭಾರತದ ರಾಷ್ಟ್ರಧ್ವಜ, ಸಂವಿಧಾನವನ್ನು ಎಂದಿಗೂ ಒಪ್ಪುವುದಿಲ್ಲ. ಮನುವಾದಿಗಳು ಸಮಾನತೆ, ಐಕ್ಯತೆ, ಸಮಗ್ರತೆ ಸಾರುವ ರಾಷ್ಟ್ರಧ್ವಜವನ್ನು ಒಪ್ಪಲು ಸಾಧ್ಯವೂ ಇಲ್ಲ!” ಎಂದು ಟ್ವೀಟ್​ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Tue, 13 May 25