ಹೂಗುಚ್ಚ, ಹಾರ, ತುರಾಯಿ ನಿಷೇಧ ಹಿಂಪಡೆಯುವಂತೆ ಆಗ್ರಹ; ಆಗಸ್ಟ್ 12ಕ್ಕೆ ಬೃಹತ್ ಪ್ರತಿಭಟನೆ ನಡೆಸಲು ಪುಷ್ಪ ಬೆಳೆಗಾರರ ಸಂಘ ನಿರ್ಧಾರ

| Updated By: sandhya thejappa

Updated on: Aug 11, 2021 | 1:59 PM

ಈ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯದ ಎಲ್ಲಾ ಹೂ ಬೆಳೆಗಾರರು, ಪುಷ್ಪ ಕೃಷಿ ರೈತ ಸಂಘಟನೆಗಳು, ಹೂ ಮಾರಾಟಗಾರರು ಮತ್ತು ಪುಷ್ಪ ಬೆಳೆಗಾರರ ಸಂಘ ನಾಳೆ (ಆಗಸ್ಟ್ 12) ನಾಳೆ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಹೂಗುಚ್ಚ, ಹಾರ, ತುರಾಯಿ ನಿಷೇಧ ಹಿಂಪಡೆಯುವಂತೆ ಆಗ್ರಹ; ಆಗಸ್ಟ್ 12ಕ್ಕೆ ಬೃಹತ್ ಪ್ರತಿಭಟನೆ ನಡೆಸಲು ಪುಷ್ಪ ಬೆಳೆಗಾರರ ಸಂಘ ನಿರ್ಧಾರ
ಪತ್ರಿಕಾ ಪ್ರಕಟಣೆ
Follow us on

ಬೆಂಗಳೂರು: ಸಭೆ ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ನೀಡುವಂತಿಲ್ಲ ಎಂದು ನಿನ್ನೆ (ಆಗಸ್ಟ್ 10) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಈ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯದ ಎಲ್ಲಾ ಹೂ ಬೆಳೆಗಾರರು, ಪುಷ್ಪ ಕೃಷಿ ರೈತ ಸಂಘಟನೆಗಳು, ಹೂ ಮಾರಾಟಗಾರರು ಮತ್ತು ಪುಷ್ಪ ಬೆಳೆಗಾರರ ಸಂಘ ನಾಳೆ (ಆಗಸ್ಟ್ 12) ನಾಳೆ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ರಾಜ್ಯ ಸರಕಾರ ಮತ್ತು ಸರಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ನೀಡದೆ ಕನ್ನಡ ಪುಸ್ತಕಗಳನ್ನು ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶವನ್ನುಹೊರಡಿಸಿದ್ದರು.

ಈ ಆದೇಶವನ್ನು ತಕ್ಷಣ ಹಿಂದಕ್ಕೆ ತಗೆದುಕೊಳ್ಳಬೇಕೆಂದು ಸರಕಾರವನ್ನು ಒತ್ತಾಯಿಸಲು ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷರಾದ ಟಿ.ಎಂ.ಅರವಿಂದ್, ನಿರ್ದೇಶಕರಾದ ಶ್ರೀಕಾಂತ್ ಬೆಲ್ಲಂಪಳ್ಳಿ, ರಾಜ್ಯದ ಎಲ್ಲಾ ಹೂ ಬೆಳೆಗಾರರರು, ಪುಷ್ಟ ಕೃಷಿ ರೈತ ಸಂಘಟನೆಗಳು ಮತ್ತು ರಾಜ್ಯದ ಎಲ್ಲಾ ಪುಷ್ಟ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘದ ನೇತೃತ್ವದಲ್ಲಿ ಬೆಂಗಳೂರಿನ ಅಂತರಾಷ್ಟ್ರೀಯ ಪುಷ್ಪ ಮಾರುಕಟ್ಟೆಯ ಎದುರು ಬೆಳಿಗ್ಗೆ 11.15ಕ್ಕೆ ಬೃಹತ್ ಪ್ರತಿಭಟನೆಗೆ ನಿರ್ಧರಿಸಲಾಗಿದೆ.

ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿಯನ್ನು ಹಿಡಿದುಕೊಂಡು ವಿನೂತನವಾಗಿ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ನಿನ್ನೆ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.

ಇದನ್ನೂ ಓದಿ

ರೈಲಿನಲ್ಲಿ ಮರೆತು ಬಿಟ್ಟುಹೋಗಿದ್ದ ಚಿನ್ನಾಭರಣ ವಾಪಸ್; ರೈಲ್ವೆ ಪೊಲೀಸರಿಂದ ಪ್ರಶಂಸನೀಯ ಕಾರ್ಯ

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ಪೇಟ, ಶಾಲುಗೆ ಬ್ರೇಕ್; ಹೂ ಗುಚ್ಚದ ಬದಲು ಕನ್ನಡ ಪುಸ್ತಕ ನೀಡಿ – ರಾಜ್ಯ ಸರ್ಕಾರ ಆದೇಶ

(Flower Growers Association to hold massive protest on August 12 demanding to revoke ban on flower bouquet and fruit basket to honour)

Published On - 1:31 pm, Wed, 11 August 21