Bengaluru News: ಸಿಎಂ ಬೊಮ್ಮಾಯಿ ಉದ್ಘಾಟಿಸಿದ ಫ್ಲೈಓವರ್ ಒಂದೇ ದಿನಕ್ಕೆ ಬಂದ್
ಮುಖ್ಯಮಂತ್ರಿ ಬಸವಾರಜ ಬೊಮ್ಮಾಯಿ ಅವರು ಭಾನುವಾರ (ಜ.29) ಉದ್ಘಾಟಿಸಿದ್ದ ‘ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲ್ಸೇತುವೆ’ ಮತ್ತು ಅಂಡರ್‌ಪಾಸ್ ಸೋಮವಾರ (ಜ.30) ರಂದು ಬಂದ್ ಆಗಿದೆ.
ಬೆಂಗಳೂರು: ಮುಖ್ಯಮಂತ್ರಿ ಬಸವಾರಜ ಬೊಮ್ಮಾಯಿ (CM Basavaraj Bommai) ಅವರು ಭಾನುವಾರ (ಜ.29) ಉದ್ಘಾಟಿಸಿದ್ದ ‘ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲ್ಸೇತುವೆ’ ಮತ್ತು ಅಂಡರ್‌ಪಾಸ್ ಸೋಮವಾರ (ಜ.30) ರಂದು ಬಂದ್ ಆಗಿದೆ. ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲ್ಸೇತುವೆ ಕಾಮಗಾರಿ ಮುಗಿದಿಲ್ಲವೆಂದು ಬಂದ್ ಮಾಡಲಾಗಿದೆ. ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲ್ಸೇತುವೆ ಕಾಮಗಾರಿ ವರ್ಷಗಳಿಂದ ಕುಂಟುತ್ತಾ ಸಾಗಿತ್ತು. ವೆಸ್ಟ್ ಆಫ್ ಕಾರ್ಡ್ ರೋಡ್ ಅಂಡರ್ ಪಾಸ್ ಸಣ್ಣ ದುರಸ್ತಿಗಾಗಿ ಕಳೆದ 6 ತಿಂಗಳುಗಳಿಂದ ಬಂದ್ ಆಗಿತ್ತು. ಈಗ ಕಾಮಗಾರಿ ಪೂರ್ಣಗೊಳ್ಳದೆ ಪ್ರಚಾರಕ್ಕಾಗಿ ಉದ್ಘಾಟನೆ ಮಾಡಿದ್ದಾರೆ ಅಂತ ಸಾರ್ವಜನಿಕರು ಕಿಡಿ ಕಾರುತ್ತಿದ್ದಾರೆ. ಈ ಫ್ಲೈ ಓವರ್ ಸುಮಾರು 76.5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ.
ಏನಿದು ಯೋಜನೆ?
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿಗ್ನಲ್-ಮುಕ್ತ ರಸ್ತೆ ನಿರ್ಮಿಸುವ ಉದ್ದೇಶದಿಂದ ವೆಸ್ಟ್ ಆಫ್ ಕಾರ್ಡ್ ರೋಡ್ ರಸ್ತೆಗೆ ಫ್ಲೈ ಓವರ್‌ಗಳನ್ನು ನಿರ್ಮಿಸುವ ಯೋಜನೆ ರೂಪಿಸಿದೆ. ಮಂಜುನಾಥ ನಗರ ಮತ್ತು ಬಸವೇಶ್ವರ ನಗರ ವೃತದ ಬಳಿ ಫ್ಲೈ ಓವರ್ ನಿರ್ಮಿಸುವುದು ಯೋಜನೆಯಾಗಿದೆ. ವೆಸ್ಟ್ ಆಫ್ ಕಾರ್ಡ್ ರಸ್ತೆ ತುಮಕೂರು ರಸ್ತೆ ಮತ್ತು ಮೈಸೂರು ರಸ್ತೆ ಸಂಪರ್ಕಿಸುತ್ತದೆ. ಈ ರಸ್ತೆಯು ಬಸವೇಶ್ವರ ನಗರ, ರಾಜಾಜಿನಗರ ಮತ್ತು ಬೆಂಗಳೂರು ಉತ್ತರ ಭಾಗದ ಪ್ರಮುಖ ವಾಣಿಜ್ಯ ಸ್ಥಳಗಳ ಮೂಲಕ ಹಾದುಹೋಗುತ್ತದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ