AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಕೆಲಸ ಮಾಡ್ತಿದೆ ಕೇಂದ್ರ ಸರಕಾರ: ಹೆಚ್​ಡಿ ಕುಮಾರಸ್ವಾಮಿ ಕಿಡಿ

ಎಫ್ ಎಂ ರೇನ್ ಬೋದ ಬಹುತೇಕ ನಿರೂಪಕರು ಅರೆಕಾಲಿಕ ಉದ್ಯೋಗಿಗಳು. ಸ್ಪಷ್ಟ ಕನ್ನಡ, ಅಚ್ಚ ಕನ್ನಡದ ರಾಯಭಾರಿಗಳು. ಅರ್ಥಪೂರ್ಣ ಕಾರ್ಯಕ್ರಮ, ಸುಶ್ರಾವ್ಯ ಹಾಡುಗಳ ಮೂಲಕ ಕೇಳುಗರೊಂದಿಗೆ ಸಂವಾದಿಯಾದವರು. ಈಗ ವಾಹಿನಿಯನ್ನೇ ನಿಲ್ಲಿಸುವ ಒಳಸಂಚು ಇವರೆಲ್ಲರಿಗೂ ಆಗುವ ಅನ್ಯಾಯ ಹಾಗೂ ಕನ್ನಡ, ಕನ್ನಡಿಗರಿಗೆ ಮಾಡುವ ಅಪಚಾರ - ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ

ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಕೆಲಸ ಮಾಡ್ತಿದೆ ಕೇಂದ್ರ ಸರಕಾರ: ಹೆಚ್​ಡಿ ಕುಮಾರಸ್ವಾಮಿ ಕಿಡಿ
ಹೆಚ್‌ಡಿ ಕುಮಾರಸ್ವಾಮಿ
TV9 Web
| Edited By: ಸಾಧು ಶ್ರೀನಾಥ್​|

Updated on:Jan 28, 2022 | 11:34 AM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಕನ್ನಡದ ( kannada) ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡ್ತಿದೆ ಕೇಂದ್ರ ಸರಕಾರ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘101.3 ಎಫ್ ಎಂ ರೇನ್ ಬೋ ಕನ್ನಡ ಕಾಮನಬಿಲ್ಲುʼ (FM Rainbow kannada kamanabillu) ರೇಡಿಯೋ ವಾಹಿನಿಯ ಪ್ರಸಾರ ಸ್ಥಗಿತಗೊಳಿಸಿರುವುದೇ ಕಾರಣವಾಗಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (hd kumarswamy) ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​ ಸಾರಾಂಶ ಹೀಗಿದೆ: ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿದೆ ಇನ್ನೊಂದು ಸಾಕ್ಷಿ. ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ.

ಸೂರ್ಯೋದಯಕ್ಕೆ ಮುನ್ನವೇ ಪ್ರಸಾರ ಆರಂಭಿಸಿ ರಾತ್ರಿ 11ರ ತನಕ ಸತತ 18 ಗಂಟೆ ಕಾಲ ನಿರಂತರವಾಗಿ ಕನ್ನಡ ಕಾರ್ಯಕ್ರಮಗಳನ್ನು ನೀಡುತ್ತಿರುವ ‘101.3 ಎಫ್ ಎಂ ರೇನ್ ಬೋ ಕನ್ನಡ ಕಾಮನಬಿಲ್ಲುʼ ರೇಡಿಯೋ ವಾಹಿನಿಯ ಕತ್ತು ಕುಯ್ಯುವ ಕೆಲಸಕ್ಕೆ ಕೇಂದ್ರ ಸರಕಾರ ಹೊರಟಿರುವುದು ಅಕ್ಷಮ್ಯ. ಕನ್ನಡಕ್ಕೆ ಕೊಡಲಿ ಪೆಟ್ಟು.

ʼರೇನ್ ಬೋ ಕನ್ನಡ ಕಾಮನಬಿಲ್ಲುʼ ಕೇವಲ ರೇಡಿಯೋ ವಾಹಿನಿ ಮಾತ್ರವಲ್ಲ, ಕನ್ನಡಿಗರ ಹೃದಯಬಡಿತ, ಕನ್ನಡದ ಅಸ್ಮಿತೆ ಕೂಡ. ಆದರೆ, ಕೇಂದ್ರ ಸರಕಾರ ಕನ್ನಡಿಗರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ. ಅಧಿಕಾರಿಗಳ ಮೂಲಕ ಕನ್ನಡಮ್ಮನ ರಕ್ತ ಬಗೆಯುವ ಹೀನ ಕೆಲಸ ಮಾಡುತ್ತಿದೆ.

ಈ ಹಿಂದೆ ಕನ್ನಡಿಗರ ಮನೆಮನದಲ್ಲಿ ತುಂಬಿದ್ದ ʼಅಮೃತವರ್ಷಿಣಿʼಯನ್ನು ಮುಗಿಸಲಾಯಿತು. ಈಗ ಕನ್ನಡ ಕಾಮನಬಿಲ್ಲನ್ನು ಮುಗಿಸಲು ಹೊರಟಿದ್ದಾರೆ. ಕನ್ನಡ ವಿರೋಧಿ ಕೇಂದ್ರ ಸರಕಾರ, ಕನ್ನಡದ್ರೋಹಿ ಅಧಿಕಾರಿಗಳ ಕಪಿಮುಷ್ಠಿಯಲ್ಲಿ ಸಿಲುಕಿರುವ ಕನ್ನಡದ ಆಕ್ರಂದನವನ್ನು ಇನ್ನು ಸಹಿಸಲು ಸಾಧ್ಯವಿಲ್ಲ.

ಆಯಕಟ್ಟಿನಲ್ಲಿ ಕೂತಿರುವ ಹಿರಿಯ ಅಧಿಕಾರಿಗಳು ಕಸಾಯಿಗಳಂತೆ ಸಾವಿರಾರು ವರ್ಷಗಳ ಅಭಿಜಾತ ಭಾಷೆ ಕನ್ನಡದ ಮೇಲೆ ದಾಳಿ ನಡೆಸಿ ಕ್ರೂರವಾಗಿ ವಧೆ ಮಾಡುತ್ತಿದ್ದಾರೆ. ಕನ್ನಡನಾಡನ್ನು ಉದ್ಧಾರ ಮಾಡುತ್ತೇವೆಂದು ಗೆದ್ದುಹೋದ ಸಂಸದ ಮಹಾಶಯರು ಕನ್ನಡಕ್ಕೆ ಆಗುತ್ತಿರುವ ಅನ್ಯಾಯವನ್ನು ಸಹಿಸುತ್ತಿರುವುದು ಹೊಣೆಗೇಡಿತನವೇ ಸರಿ.

ಕನ್ನಡಿಗರು ಸಹಿಷ್ಣುಗಳು, ಸೌಮ್ಯರು ಹೌದು. ಹಾಗೆಂದು, ತಾಯಿಭಾಷೆಗೆ ಕೊಳ್ಳಿ ಇಡುತ್ತಿರುವ ʼಭಾಷಾಂತಕʼರನ್ನು ನೋಡುತ್ತಾ ಸುಮ್ಮನೆ ಕೂರಲಾರರು, ನೆನಪಿರಲಿ. ಸಂಸದರೆಲ್ಲರೂ ದನಿಯೆತ್ತಿ ಈ ರೇಡಿಯೋ ವಾಹಿನಿಯನ್ನು ಉಳಿಸಬೇಕು. ಮುಚ್ಚುವುದು ಅಥವಾ ಇನ್ನೊಂದರಲ್ಲಿ ವಿಲೀನ ಮಾಡುವುದನ್ನು ಸಹಿಸುವ ಪ್ರಶ್ನೆಯೇ ಇಲ್ಲ.

ಎಫ್ ಎಂ ರೇನ್ ಬೋದ ಬಹುತೇಕ ನಿರೂಪಕರು ಅರೆಕಾಲಿಕ ಉದ್ಯೋಗಿಗಳು. ಸ್ಪಷ್ಟ ಕನ್ನಡ, ಅಚ್ಚ ಕನ್ನಡದ ರಾಯಭಾರಿಗಳು. ಅರ್ಥಪೂರ್ಣ ಕಾರ್ಯಕ್ರಮ, ಸುಶ್ರಾವ್ಯ ಹಾಡುಗಳ ಮೂಲಕ ಕೇಳುಗರೊಂದಿಗೆ ಸಂವಾದಿಯಾದವರು. ಈಗ ವಾಹಿನಿಯನ್ನೇ ನಿಲ್ಲಿಸುವ ಒಳಸಂಚು ಇವರೆಲ್ಲರಿಗೂ ಆಗುವ ಅನ್ಯಾಯ ಹಾಗೂ ಕನ್ನಡ, ಕನ್ನಡಿಗರಿಗೆ ಮಾಡುವ ಅಪಚಾರ.

ಕನ್ನಡಿಗರಿಗೆ ಕಿರುಕುಳ ನೀಡಿ ವಿಕೃತ ಸಂತೋಷಪಡುವ ಮನಃಸ್ಥಿತಿ ಅಳಿಯಲಿ. ಭಾರತ ಒಕ್ಕೂಟ ರಾಜ್ಯಗಳ ಆಗರ ಎನ್ನುವುದು ನೆನಪಿರಲಿ. ಆ ಆಶಯಕ್ಕೆ ಮುಕ್ಕಾಗುವುದು ಖಂಡಿತಾ ಬೇಡ. #ಕನ್ನಡದಹಂತಕರಿಗೆಧಿಕ್ಕಾರ

ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​

ಇದನ್ನೂ ಓದಿ: ಈಡೇರದ ಸರ್ಕಾರಿ ಭರವಸೆ: ನೊಂದು ತಾವೇ ವೆಚ್ಚ ಭರಿಸಿ ಗ್ರಂಥಾಲಯ ಉದ್ಘಾಟನೆ ಮಾಡಿ ಕನ್ನಡ ಪ್ರೇಮ ಹೆಚ್ಚಿಸಿದ ಸೈಯದ್ ಇಸಾಕ್

Published On - 10:31 am, Fri, 28 January 22

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ