ಹಿಂದಿನ ಅನುಭವಗಳ ಮೇಲೆ ಕೊವಿಡ್ ನಿರ್ವಹಣೆಗೆ ಗಮನವಹಿಸಲಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ
ಇಂದು ಸಂಜೆ ಕೊವಿಡ್ ನಿಯಂತ್ರಣ ಸಂಬಂಧ ಸಭೆ ನಿಗದಿ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಕೊವಿಡ್ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಕೊನೆ ಗಳಿಗೆಯಲ್ಲಿ ತಯಾರಿ ಬದಲು ಹಿಂದಿನ ಅನುಭವಗಳ ಮೇಲೆ ಕೊವಿಡ್ ನಿರ್ವಹಣೆಗೆ ಗಮನವಹಿಸಲಾಗಿದೆ. ಹೀಗಾಗಿ ಅದಕ್ಕಾಗಿ ತಜ್ಞರ ಅಭಿಪ್ರಾಯವನ್ನು ಪಡೆದುಕೊಳ್ಳುತ್ತೇನೆ. ಇಂದು ಸಂಜೆ ಕೊವಿಡ್ ನಿಯಂತ್ರಣ ಸಂಬಂಧ ಸಭೆ ನಿಗದಿ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ನಾಳೆ 75 ನೇ ಸ್ವಾತಂತ್ರೋತ್ಸವ ಮಾಡುವ ಸೌಭಾಗ್ಯ ಬಂದಿದೆ. ಹಲವಾರು ಸಂದರ್ಭಗಳಲ್ಲಿ ಕರ್ನಾಟಕ ಈ ದೇಶಕ್ಕೆ ಮಾದರಿಯಾಗಿದೆ. ಅದನ್ನು ಬಿಂಬಿಸುವ ಕೆಲಸ ಮಾಡುತ್ತೇವೆ. ನಾಳೆ ಕೊವಿಡ್ ನಿಯಮಗಳನ್ವಯ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶಾಲೆ ಆರಂಭದ ಬಗ್ಗೆ ತಜ್ಞರ ಜತೆ ಚರ್ಚಿಸಿ ಸಿಎಂ ತೀರ್ಮಾನ: ಮುಖ್ಯ ಆಯುಕ್ತ ಗೌರವ್ ಗುಪ್ತಾ ಶಾಲೆ ಆರಂಭದ ವಿಚಾರವಾಗಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಆಗಸ್ಟ್ 23ರಿಂದ ಹಂತ ಹಂತವಾಗಿ ಶಾಲೆ ಆರಂಭಕ್ಕೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ಸಂಬಂಧ ತಜ್ಞರ ಜತೆ ಚರ್ಚಿಸಿ ಸಿಎಂ ತೀರ್ಮಾನ ಮಾಡಲಾಗುತ್ತದೆ. ಶಿಕ್ಷಕರಿಗೆ ವ್ಯಾಕ್ಸಿನ್ ಪಡೆದಿರಬೇಕೆಂದು ಷರತ್ತು ಹಾಕಲಾಗಿದೆ. ಮಕ್ಕಳಿಗೆ ಇನ್ನೂ ವ್ಯಾಕ್ಸಿನ್ ನೀಡುವ ನಿಯಮ ಬಂದಿಲ್ಲ. ಮುಂದೆ ಮಕ್ಕಳಿಗೆ ವ್ಯಾಕ್ಸಿನ್ ಬರುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸದ್ಯಕ್ಕೆ ವಿಕೇಂಡ್ ಕರ್ಫ್ಯೂ ಜಾರಿ ಅನುಮಾನ ಬೆಂಗಳೂರಿನಲ್ಲಿ ವಿಕೇಂಡ್ ಕರ್ಫ್ಯೂ ಜಾರಿ ಅಷ್ಟು ಸುಲಭವಲ್ಲ. ವಿಕೇಂಡ್ ಕರ್ಫ್ಯೂ ಜಾರಿ ಮಾಡಿದರೆ, ಸರ್ಕಾರಕ್ಕೆ ದೊಡ್ಡ ಹೊಡೆತ ಬೀಳುವ ಆತಂಕ ಶುರುವಾಗಿದೆ. ಹೀಗಾಗಿ ಸದ್ಯಕ್ಕೆ ವಿಕೇಂಡ್ ಕರ್ಫ್ಯೂ ಜಾರಿ ಅನುಮಾನವಾಗಿದೆ. ಸೋಂಕಿನ ಪ್ರಮಾಣ ಮತ್ತಷ್ಟು ಏರಿಕೆ ಆದರೆ, ವಿಕೇಂಡ್ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆ ಇದೆ.
ಇದನ್ನೂ ಓದಿ: Assembly Session: ಸೆಪ್ಟೆಂಬರ್ನಲ್ಲಿ ವಿಧಾನಸಭಾ ಅಧಿವೇಶನ; ಸಿಎಂ ಬಸವರಾಜ ಬೊಮ್ಮಾಯಿ
2 ಡೋಸ್ ಲಸಿಕೆ ಪಡೆದವರಿಗೂ ಕೊರೊನಾ ದೃಢ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ
Published On - 11:09 am, Sat, 14 August 21