AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಶಾಮಿಲಾಗಿದ್ದ ನರ್ಸ್​​ ಬಂಧನ

ಬೆಂಗಳೂರು ಸೇರಿ ಮೂರು ಜಿಲ್ಲೆಗಳಲ್ಲಿ ನಡೆದಿದ್ದ ಹೆಣ್ಣು ಭ್ರೂಣ ಹತ್ಯೆ ಮತ್ತು ಭ್ರೂಣಲಿಂಗ ಪತ್ತೆ ಪ್ರಕರಣ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಈ ಪ್ರಕರಣವನ್ನು ಬೆಂಗಳೂರು ಪೊಲೀಸರು ಬೇದಿಸಿದ್ದಾರೆ. ಈ ಪ್ರಕರಣದಲ್ಲಿ ಶಾಮಿಲಾಗಿದ್ದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಶಾಮಿಲಾಗಿದ್ದ ನರ್ಸ್​​ ಬಂಧನ
ಬಂಧಿತ ಉಷಾರಾಣಿ (ಎಡಚಿತ್ರ)ಭ್ರೂಣ (ಸಾಂದರ್ಭಿಕ ಚಿತ್ರ)
Jagadisha B
| Updated By: ವಿವೇಕ ಬಿರಾದಾರ|

Updated on:Dec 04, 2023 | 10:27 AM

Share

ಬೆಂಗಳೂರು ಡಿ.04: ಬೆಂಗಳೂರು (Bengaluru) ಸೇರಿ ಮೂರು ಜಿಲ್ಲೆಗಳಲ್ಲಿ ನಡೆದಿದ್ದ ಭ್ರೂಣಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ (Foetus Gender Detection, Murder Case) ಪ್ರಕರಣ ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಈ ಪ್ರಕರಣವನ್ನು ಬೆಂಗಳೂರು ಪೊಲೀಸರು (Police) ಬೇದಿಸಿದ್ದಾರೆ. ಇದೀಗ ಪ್ರಕರಣ ಸಂಬಂಧ ಬೈಯ್ಯಪ್ಪಹಳ್ಳಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೈಸೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ನರ್ಸ್ ಉಷಾರಾಣಿ ಬಂಧಿತ ಆರೋಪಿ. ಈ ಮೂಲಕ ಪ್ರಕರಣ ಸಂಬಂಧ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಬಂಧಿತ ಉಷಾರಾಣಿ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಡಾ.ಚಂದನ್ ಬಲ್ಲಾಳ್​ನ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದಳು. ಪ್ರಕರಣ ಬೆಳಕಿಗೆ ಬಂದ ಬಳಿಕ ನರ್ಸ್​ ಉಷಾರಾಣಿ ಕೆಲಸ ಬಿಟ್ಟಿದ್ದಳು. ಬಳಿಕ ಮೈಸೂರಿನ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕೆಲಸಕ್ಕೆ ಸೇರಿದ್ದಳು.

ನರ್ಸ್​ ಉಷಾರಾಣಿ ಪ್ರಕರಣದ ಮತ್ತೊಬ್ಬ ಆರೋಪಿ ಬ್ರೋಕರ್ ಪುಟ್ಟರಾಜು ಸಂಬಂಧಿ ಆಗಿದ್ದಾಳೆ. ಬ್ರೋಕರ್ ಪುಟ್ಟರಾಜು ಅಣತಿ ಮೇರೆಗೆ ಉಷಾರಾಣಿ ಗರ್ಭಪಾತ ಮಾಡುತ್ತಿದ್ದಳು. ಗರ್ಭಪಾತಕ್ಕೆ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದಳು. ಬೈಯ್ಯಪ್ಪಹಳ್ಳಿ ಪೊಲೀಸರು ಬ್ರೋಕರ್​ ಪುಟ್ಟರಾಜು ಅನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ಎಲ್ಲ ವಿಚಾರಗಳು ಬಯಲಾಗಿವೆ. ಸದ್ಯ ಬ್ರೋಕರ್​​ ಪುಟ್ಟರಾಜು ಜಾಮೀನು ಪಡೆದಿದ್ದು, ಸಂಬಂಧಿ ಉಷಾರಾಣಿಯನ್ನು ಬಂಧಿಸಲಾಗಿದೆ.

ಆರೋಗ್ಯ ಇಲಾಖೆ ನಿಯಮಾವಳಿ ಪ್ರಕಾರ ಅಬಾಷನ್

ಇನ್ನು ಉಷಾರಾಣಿ ಕೆಲಸ ಮಾಡುತ್ತಿದ್ದ ಖಾಸಗಿ ಆಸ್ಪತ್ರೆ ಲಿಂಗ ಪತ್ತೆ ಮಾಡದೇ ಆರೋಗ್ಯ ಇಲಾಖೆ ನಿಯಮಾವಳಿ ಪ್ರಕಾರ ಅಬಾಷನ್​ ಮಾಡುತಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಆಸ್ಪತ್ರೆ ಮಾಲೀಕರನ್ನು ಬೈಯಪ್ಪನಹಳ್ಳಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಭ್ರೂಣ ಹತ್ಯೆ ಕಿಂಗ್ ಪಿನ್ ಆರೋಪಿ ವೈದ್ಯ ಕೊಡಗಿನಲ್ಲಿ ಸಾವು: ಸೂಸೈಡ್ ಮಾಡಿಕೊಂಡ್ರಾ ಡಾಕ್ಟರ್?

ಗರ್ಭಪಾತ ಕಾಯ್ದೆ

ಗರ್ಭಪಾತ ಕಾಯ್ದೆಯ ಪ್ರಕಾರ ಲಿಂಗ ಪತ್ತೆ ಮಾಡದೇ, ಪತಿ-ಪತ್ನಿ ಒಪ್ಪಿಗೆ ಬಳಿಕ ಮತ್ತು ಗರ್ಭಿಣಿಗೆ ತೀವ್ರ ಆರೋಗ್ಯ ಸಮಸ್ಯೆ ಇದ್ದಲ್ಲಿ ಮಾತ್ರ ಸ್ಕ್ಯಾನಿಂಗ್ ಹಾಗೂ ಮೆಡಿಕಲ್ ರಿಪೊರ್ಟ್ ಸಹಿತ ಅಬಾಷನ್ ಮಾಡಬೇಕು. ಇವೆಲ್ಲವೂ ಗರ್ಭಧರಿಸಿದ 24 ವಾರದ ಒಳಗಾಗಿ ಆಗಬೇಕು. ಬಳಿಕ ಸಂಬಂಧ ಪಟ್ಟ ಇಲಾಖೆಗೆ ಈ ಎಲ್ಲ ಮಾಹಿತಿ ನೀಡಬೇಕು. ಜೊತೆಗೆ ನಡೆದ ಎಲ್ಲ ಅಬಾಷನ್​ಗಳ ಎರಡು ವರ್ಷದ ದಾಖಲೆಗಳನ್ನು ಆಸ್ಪತ್ರೆಯಲ್ಲಿ ಇಟ್ಟುಕೊಂಡಿರಬೇಕು.

ಉಷಾರಾಣಿ ಕೆಲಸ ಮಾಡುತ್ತಿದ್ದ ಖಾಸಗಿ ಆಸ್ಪತ್ರೆ ಈ ನಿಯಮಗಳನ್ನು ಹೊಂದಿದೆ. ಇದನ್ನು ತಿಳಿದ ಉಷಾರಾಣಿ ಆಸ್ಪತ್ರೆಯ ಮಾಲೀಕ ಮತ್ತು ವೈದ್ಯರ ಗಮನಕ್ಕೂ ಬಾರದ ರೀತಿ, ನಕಲಿ ದಾಖಲೆ ಸೃಷ್ಟಿಸಿ ಅಬಾಷನ್​​ ಮಾಡುತ್ತಿದ್ದಳು. ಬಳಿಕ ವೈದ್ಯರಿಗೆ ಸುಳ್ಳು ಮಾಹಿತಿ ನೀಡುತ್ತಿದ್ದಳು.

ಈ ಹಿನ್ನೆಲೆಯಲ್ಲಿ ಬೈಯಪ್ಪನಹಳ್ಳಿ ಪೊಲೀಸರು ಉಷಾರಾಣಿಯನ್ನು ಬಂಧಿಸಿದ್ದಾರೆ ಉಷಾರಾಣಿಗೆ ಈ ಜಾಲದ ನಂಟು ಸಿಕ್ಕಿದ್ದು ಹೇಗೆ..? ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಉಷಾರಾಣಿ ನಕಲಿ ದಾಖಲೆ ಸೃಷ್ಟಿಸಿದ್ದು ಹೇಗೆ..? ಎಂಬ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:51 am, Mon, 4 December 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ