ಮೂರು ಹಂತಗಳಲ್ಲಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ; ಇಲ್ಲಿದೆ ಮಾಹಿತಿ

ಬಿಪಿಎಲ್ ಕಾರ್ಡ್ (BPL Card) ತಿದ್ದುಪಡಿಗೆ ಆಹಾರ ಇಲಾಖೆ ಗುಡ್​ ನ್ಯೂಸ್​ ನೀಡಿದೆ.  ಹೌದು, ಬಿಪಿಎಲ್ ಕಾರ್ಡ್​ಗೆ ಫಲಾನುಭವಿ ಹೆಸರು ಸೇರ್ಪಡೆ ಮಾಡಿ, ತಿದ್ದುಪಡಿಗೆ ಅವಕಾಶ ಕೊಟ್ಟಿದ್ದು, ಅದನ್ನು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಬೆಳಿಗ್ಗೆ  10 ಗಂಟೆಯಿಂದ ಸಂಜೆ 7 ಗಂಟೆವರೆಗೆ ಸರಿಪಡಿಸಿಕೊಳ್ಳಬಹುದಾಗಿದೆ.

ಮೂರು ಹಂತಗಳಲ್ಲಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ; ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
Follow us
Poornima Agali Nagaraj
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 04, 2023 | 6:37 PM

ಬೆಂಗಳೂರು, ಅ.04: ಬಿಪಿಎಲ್ ಕಾರ್ಡ್ (BPL Card)ದಾರರಿಗೆ ಆಹಾರ ಇಲಾಖೆ ಗುಡ್​ ನ್ಯೂಸ್​ ನೀಡಿದೆ.  ಹೌದು, ಬಿಪಿಎಲ್ ಕಾರ್ಡ್​ಗೆ ಫಲಾನುಭವಿ ಹೆಸರು ಸೇರ್ಪಡೆ ಮಾಡಿ, ತಿದ್ದುಪಡಿಗೆ ಅವಕಾಶ ಕೊಟ್ಟಿದ್ದು, ಅದನ್ನು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಬೆಳಿಗ್ಗೆ  10 ಗಂಟೆಯಿಂದ ಸಂಜೆ 7 ಗಂಟೆವರೆಗೆ ಸರಿಪಡಿಸಿಕೊಳ್ಳಬಹುದಾಗಿದೆ.  ಅದನ್ನು ಕೂಡ ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಿಗೆ ನಿಗಧಿತ ದಿನಾಂಕವನ್ನು ಕೊಡಲಾಗಿದೆ ಇಲ್ಲಿದೆ.

ಮೂರು ಹಂತಗಳಲ್ಲಿ ವಿವಿಧ ದಿನಾಂಕದಂದು ತಿದ್ದುಪಡಿಗೆ ಅವಕಾಶ

ಹೌದು, ಅಕ್ಟೋಬರ್​ 5 ರಿಂದ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಅವಕಾಶ ನೀಡಲಾಗಿದೆ. ಇನ್ನು 2ನೇ ಹಂತದಲ್ಲಿ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಸೇರಿ ಒಟ್ಟು 15 ಜಿಲ್ಲೆಗಳಿಗೆ ಅ.8 ರಿಂದ ಅ.10ರವರೆಗೆ BPL ಕಾರ್ಡ್ ತಿದ್ದುಪಡಿಗೆ ಅವಕಾಶ ಕೊಡಲಾಗಿದೆ.

ಇದನ್ನೂ ಓದಿ:Political retirement: ಸಚಿವರ ಕಾರ್ಯವೈಖರಿ ವಿರುದ್ಧ ಅಸಮಾಧಾನ, ರಾಜಕೀಯ ನಿವೃತ್ತಿ ಒಳ್ಳೆಯದು ಅನಿಸುತಿದೆ ಎಂದ ಕಾಂಗ್ರೆಸ್​ ಶಾಸಕ 

ಇನ್ನು 3ನೇ ಹಂತದಲ್ಲಿ ಕಲಬುರಗಿ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಸೇರಿ ಒಟ್ಟು 14 ಜಿಲ್ಲೆಗಳಲ್ಲಿ ಅ.11 ರಿಂದ ಅ.13ರವರೆಗೆ ಅವಕಾಶ ನೀಡಲಾಗಿದೆ. ಇದನ್ನು ಬೆಳಿಗ್ಗೆ 10 ಗಂಟೆಯಿಂದ  ಸಂಜೆ 07 ಗಂಟೆಯವರೆಗೆ ತಿದ್ದುಪಡಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಕಳೆದ ತಿಂಗಳು ಒಂದೊಂದು ಜಿಲ್ಲೆಗಳಗೂ ಸಮಯ ನಿಗದಿ ಪಡಿಸಲಾಗಿತ್ತು. ಈ ತಿಂಗಳು ಎಲ್ಲಾ ಜಿಲ್ಲೆಗಳಲ್ಲೂ ಮೂರು ದಿನ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಈ ಕುರಿತು ಆಹಾರ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:35 pm, Wed, 4 October 23