ಪಡಿತರದಾರರಿಗೆ ಬಿಗ್ ಶಾಕ್: ಮುಂದಿನ ತಿಂಗಳಿನಿಂದ ಪಡಿತರದಾರರಿಗೆ 4 ಕೆಜಿ ಅಕ್ಕಿ ಕಡಿತ

ಕಳೆದ 2 ವರ್ಷಗಳಿಂದ 10 ಕೆಜಿ ಉಚಿತ ಅಕ್ಕಿ ನೀಡಲಾಗುತ್ತಿತ್ತು. ಮುಂದಿನ ತಿಂಗಳಿಂದ 6 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ.

ಪಡಿತರದಾರರಿಗೆ ಬಿಗ್ ಶಾಕ್: ಮುಂದಿನ ತಿಂಗಳಿನಿಂದ ಪಡಿತರದಾರರಿಗೆ 4 ಕೆಜಿ ಅಕ್ಕಿ ಕಡಿತ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jan 04, 2023 | 1:42 PM

ಬೆಂಗಳೂರು: ಮುಂದಿನ ತಿಂಗಳಿನಿಂದ ಪಡಿತರದಾರರಿಗೆ 4 ಕೆಜಿ ಅಕ್ಕಿ ಕಡಿತ ಮಾಡಲಾಗುತ್ತದೆ. ಪಡಿತರದಾರರಿಗೆ 10 ಕೆಜಿ ಬದಲು 6 ಕೆಜಿ ಮಾತ್ರ ಅಕ್ಕಿ ವಿತರಣೆ ಮಾಡಲಾಗುತ್ತದೆ ಎಂದು ಆಹಾರ, ನಾಗರಿಕ ಸರಬರಾಜು & ಗ್ರಾಹಕರ ವ್ಯವಹಾರ ಇಲಾಖೆಯ ಜಂಟಿ ನಿರ್ದೇಶಕ ವಿಜಯ್ ಕುಮಾರ್ ತಿಳಿಸಿದ್ದಾರೆ.

ಕಳೆದ 2 ವರ್ಷಗಳಿಂದ 10 ಕೆಜಿ ಉಚಿತ ಅಕ್ಕಿ ನೀಡಲಾಗುತ್ತಿತ್ತು. ಮುಂದಿನ ತಿಂಗಳಿಂದ 6 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುತ್ತದೆ. ರಾಜ್ಯದಲ್ಲಿ ಕೇಂದ್ರದ 1.2 ಕೋಟಿ BPL ಕಾರ್ಡ್​ದಾರರಿದ್ದಾರೆ. ಈಗ ಕೇಂದ್ರವೇ ನೇರವಾಗಿ 5 ಕೆಜಿ ಅಕ್ಕಿ ಉಚಿತವಾಗಿ ನೀಡುತ್ತಿದೆ. ರಾಜ್ಯ ಸರ್ಕಾರ 1 ಕೆಜಿ ಅಕ್ಕಿ ಖರೀದಿಸಿ ಉಚಿತವಾಗಿ ನೀಡಲಿದೆ. ಈ ಹಿಂದೆ ರಾಜ್ಯ ಸರ್ಕಾರ ಕೇಂದ್ರದಿಂದ ಅಕ್ಕಿ ಖರೀದಿಸುತ್ತಿತ್ತು. ಪ್ರತಿ ಕೆಜಿಗೆ 3 ರೂ. ಕೊಟ್ಟು ಖರೀದಿಸಿ ಉಚಿತವಾಗಿ ನೀಡುತ್ತಿತ್ತು ಎಂದರು.

ಇದನ್ನೂ ಓದಿ: Covid New Symptoms: ಮತ್ತೆ ಬಂತು ಕೊರೊನಾ: ತೀವ್ರತೆಯೂ ಬೇರೆ, ಲಕ್ಷಣಗಳೂ ಬದಲು

ಕೊವಿಡ್‌ ಹಿನ್ನೆಲೆ 2020-21ರ ಮೇ ತಿಂಗಳಿಂದ 2022ರ ಡಿ.31ರವರೆಗೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋನೆಯಡಿ ಪ್ರತಿ ಫಲಾನುಭವಿಗಳಿಗೆ ತಲಾ 5 ಕೆಜಿ ಅಕ್ಕಿಯನ್ನು ವಿತರಿಸುತ್ತಿತ್ತು. ಇದರೊಂದಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ವಯ ರಾಜ್ಯ ಸರ್ಕಾರವೂ ಪ್ರತಿ ಫಲಾನುಭವಿಗೆ ತಲಾ 5 ಕೆಜಿ ಅಕ್ಕಿ ಹಂಚಿಕೆ ಮಾಡುತ್ತಿತ್ತು. ಈಗ ಹತ್ತು ಕೆಜಿ ಅಕ್ಕಿ ವಿತರಣೆ ಬಂದ್ ಮಾಡಿ ಕೇವಲ 6 ಕೆಜಿ ಅಕ್ಕಿ ನೀಡಲಾಗುತ್ತೆ. ಕೇಂದ್ರ ಸರ್ಕಾರವೇ 5 ಕೆಜಿ ಉಚಿತವಾಗಿ ಅಕ್ಕಿ ವಿತರಣೆ ಮಾಡಲಿದ್ದು ರಾಜ್ಯ ಸರ್ಕಾರ ಒಂದು ಕೆಜಿ ಅಕ್ಕಿ, ಖರೀದಿ ಮಾಡಿ ಉಚಿವಾಗಿ ವಿತರಣೆ ಮಾಡಲಿದೆ ಎಂದು ಇಲಾಖೆಯ ಜಂಟಿ ನಿರ್ದೇಶಕ ವಿಜಯ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ 10,91,508 ಅಂತ್ಯೋದಯ ಕಾರ್ಡುಗಳಿದ್ದು 44,83,745 ಮಂದಿ ಫಲಾನುಭವಿಗಳಿದ್ದಾರೆ. ಹಾಗೆಯೇ 1,15,93,227 ಬಿಪಿಎಲ್‌ ಕಾರ್ಡುಗಳಿದ್ದು 3,87,79,975 ಮಂದಿ ಫಲಾನುಭವಿಗಳಿದ್ದಾರೆ. ಹೀಗೆ ಒಟ್ಟು 4,32,63,720 ಮಂದಿ ಫಲಾನುಭವಿಗಳು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ವಯ ಪ್ರತಿ ತಿಂಗಳು ತಲಾ 6 ಕೆಜಿ ಅಕ್ಕಿಯನ್ನು ಪಡೆಯಲಿದ್ದಾರೆ. ಕೇಂದ್ರ ಸರ್ಕಾರವೇ ರಾಜ್ಯದ 4.32 ಕೋಟಿಗೂ ಅಧಿಕ ಜನರಿಗೆ ಪ್ರತಿ ಯೂನಿಟ್‌ಗೆ ತಲಾ 5 ಕೆಜಿ ಅಕ್ಕಿ ಉಚಿತವಾಗಿ ಹಂಚಿಕೆ ಮಾಡಲಿದ್ದು ಇದರಿಂದ ರಾಜ್ಯಕ್ಕೆ ಪ್ರತಿ ತಿಂಗಳು ಸುಮಾರು 12.90 ಕೋಟಿ ರೂ.ನಂತೆ ವರ್ಷಕ್ಕೆ 150ರಿಂದ 200 ಕೋಟಿ ರೂ ಉಳಿತಾಯವಾಗಲಿದೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ