KC Raghu Passes Away: ನಾಡಿನ ಹೆಸರಾಂತ ಆಹಾರ ತಜ್ಞ ಕೆಸಿ. ರಘು ನಿಧನ
Food Expert KC Raghu Passes Away: ನಾಡಿನ ಹೆಸರಾಂತ, ಖ್ಯಾತ ಆಹಾರ ತಜ್ಞ ಕೆ.ಸಿ ರಘು(60 ) ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಘು ಇಂದು(ಅಕ್ಟೋಬರ್ 15) ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ಬೆಂಗಳೂರು, (ಅಕ್ಟೋಬರ್ 15): ನಾಡಿನ ಹೆಸರಾಂತ, ಖ್ಯಾತ ಆಹಾರ ತಜ್ಞ ಕೆ.ಸಿ ರಘು (Food Expert KC Raghu )(60 ) ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಘು ಇಂದು(ಅಕ್ಟೋಬರ್ 15) ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದ ಅವರು, ಇಂದು ಬೆಳಗ್ಗೆ ಬೆಂಗಳೂರಿನ ದಾಸರಹಳ್ಳಿಯ ಅಮೃತ ನಗರದಲ್ಲಿರುವ ಅವರ ನಿವಾಸದಲ್ಲಿ 7.30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪತ್ನಿ ಆಶಾ ರಘು ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಅವರು ಸ್ಥಾಪಿಸಿದ ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರ ವನ್ನು ಸಂಶೋಧನೆಯಿಂದ ಕಂಡುಹಿಡಿದು, ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸುತ್ತಿದ್ದರು. ನಿರರ್ಗಳವಾಗಿ ಮಾತನಾಡುತ್ತಿದ್ದ ರಘು ಅವರು ಆಹಾರ ಆರೋಗ್ಯದ ವಿಚಾರದಲ್ಲಿಅತ್ಯದ್ಭುತ ಜ್ಞಾನ ಹೊಂದಿದ್ದರು. ಆದರೆ ರಘು ಅವರು ವಯಸ್ಸಲ್ಲದ ವಯಸ್ಸಿನಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಲ್ಲದೇ ಕೆ.ಸಿ. ರಘು ಅವರು ಹಲವು ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ನಿರ್ವಹಿಸಿದ್ದಾರೆ.
ಇನ್ನು ಆಹಾರ ವಿಚಾರದಲ್ಲಿ ಸಾಕಷ್ಟು ಸ್ಪಷ್ಟ ಮಾಹಿತಿ ನೀಡುತ್ತಿದ್ದ ರಘು ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ನಾಡಿನ ಹೆಸರಾಂತ ಆಹಾರ ತಜ್ಞರಾದ ಶ್ರೀ ಕೆ.ಸಿ.ರಘು ಅವರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಶ್ರೀಯುತರು ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕೆಯ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆದು ಆಹಾರದ ಕುರಿತು ಅರಿವು ಮೂಡಿಸಿದ್ದಾರೆ. ಭಗವಂತ… pic.twitter.com/HlGuidF5WG
— DK Shivakumar (@DKShivakumar) October 15, 2023
Published On - 12:17 pm, Sun, 15 October 23