ಲಂಚ ಪಡೆಯುವಾಗ ಸಿಕ್ಕಿಬಿದ್ದ ಫುಡ್ ಇನ್ಸ್ಪೆಕ್ಟರ್ ತಪ್ಪಿಸಿಕೊಳ್ಳಲು ಯತ್ನ; 15 ಕಿ.ಮೀ ಚೇಸ್ ಮಾಡಿ ಹಿಡಿದ ಲೋಕಾಯುಕ್ತ ಅಧಿಕಾರಿಗಳು
ಭ್ರಷ್ಟ ಅಧಿಕಾರಿಯನ್ನು ಹಿಡಿಯಲು ಬಲೆ ಬೀಸಿದ ಲೋಕಾಯುಕ್ತ ಅಧಿಕಾರಿಗಳು ಸಿನಿಮಾ ಶೈಲಿಯಲ್ಲಿ ಕಾರ್ಯಚರಣೆ ಮಾಡಿ, ಕೊನೆಗೂ ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರು, ಜು.15: ನಗರದ ತಹಶೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಹಾರ ನಿರೀಕ್ಷಕ(Food Inspector) ಮಹಾಂತೇಗೌಡ ಬಿ ಕಡಬಾಳು ಎನ್ನುವವರು, ರಂಗದಾಮಯ್ಯ ಎಂಬುವರ ಬಳಿ ಟ್ರೇಡ್ ಲೈಸೆನ್ಸ್ ಚೆಕ್ ಮಾಡಲು 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಮುಂಗಡ ಹಣ 43ಸಾವಿರ ನಗದನ್ನ ತೆಗೆದುಕೊಳ್ಳುವಾಗ ಲೋಕಾಯುಕ್ತ(Lokayukta) ಬಲೆಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇನ್ನು ತನ್ನ ಮೇಲೆ ಲೋಕಾಯುಕ್ತರು ದಾಳಿ ಮಾಡಿದ್ದಾರೆಂದ ಕೂಡಲೇ ತಮ್ಮ ಕಾರಿನಲ್ಲಿ ಪರಾರಿಯಾಗಲು ಪ್ರಯತ್ನಿಸಿದ್ದಾರೆ.
15 ಕಿ.ಮೀ ಚೇಸ್ ಮಾಡಿ ಹಿಡಿದ ಲೋಕಾಯುಕ್ತ ಅಧಿಕಾರಿಗಳು
ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆ ಆರೋಪಿ ಫುಡ್ ಇನ್ಸ್ಪೆಕ್ಟರ್ ಕಾರು ಹತ್ತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಸುಮಾರು 15 ಕಿ.ಮೀ ವರೆಗೆ ಹಿಂಬಾಲಿಸಿ ನೆಲಮಂಗಲದ ಸೊಂಡೆಕೊಪ್ಪ ರಸ್ತೆ ಬಳಿ ಲೋಕಾಯುಕ್ತ ಅಧಿಕಾರಿಗಳು ಸುತ್ತುವರೆದಿದ್ದಾರೆ. ಅದಾಗ್ಯೂ. ಅಧಿಕಾರಿಗಳ ಮೇಲೆ ವಾಹನವನ್ನು ಚಲಾಯಿಸಲು ಪ್ರಯತ್ನಿಸಿದ್ದರು. ಕೊನೆಗೆ ಮತ್ತೊಂದು ಕಾರನ್ನು ಬಳಸಿ ಅವರನ್ನು ಹಿಡಿದ ಘಟನೆ ನಡೆದಿದೆ.
ಇದನ್ನೂ ಓದಿ:ಅಜಿತ್ ರೈ ಲೋಕಾಯುಕ್ತ ಕಸ್ಟಡಿ ಅವಧಿ ಮುಕ್ತಾಯ: ಹೆಚ್ಚಿನ ತನಿಖೆಗಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ವಿಶೇಷ ಕೋರ್ಟ್
ಅಧಿಕಾರಿಯ ವಿರುದ್ದ ಪೊಲೀಸ್ ಠಾಣೆಗೆ ದೂರು
ಇನ್ನು ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದರು, ಜೊತೆಗೆ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನಲೆ, ಹಲ್ಲೆ ಮತ್ತು ಪೊಲೀಸರು ತಮ್ಮ ಕರ್ತವ್ಯವನ್ನು ನಿರ್ವಹಿಸದಂತೆ ತಡೆದ ಆರೋಪದ ಮೇಲೆ ಅಧಿಕಾರಿಯ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣವನ್ನೂ ದಾಖಲಿಸಲಾಗಿದೆ.
ಕಿಡಿಗೇಡಿಗಳ ದುಷ್ಕೃತ್ಯ; ಮನೆ ಮುಂದೆ ನಿಲ್ಲಿಸಿದ ಕಾರ್ ಮತ್ತು ಆಟೋಗಳ ಗ್ಲಾಸ್ ಒಡೆದ ಪುಂಡರು
ಕಲಬುರಗಿ: ಜಿಲ್ಲೆಯಲ್ಲಿ ಕಿಡಿಗೇಡಿಗಳ ದುಷ್ಕೃತ್ಯ ಹೆಚ್ಚಾಗಿದೆ. ಮನೆ ಮುಂದೆ ನಿಲ್ಲಿಸಿದ ಕಾರ್ ಮತ್ತು ಆಟೋಗಳ ಗ್ಲಾಸ್ನ್ನ ಒಡೆದು ಪುಂಡಾಡ ಮೆರೆದ ಘಟನೆ ಕಲಬುರಗಿ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. 2 ಕಾರು, ನಾಲ್ಕು ಆಟೋಗಳ ಗ್ಲಾಸ್ಗೆ ಕಿಡಿಗೇಡಿಗಳು ಕೆಲ್ಲೆಸದು ಹೋಗಿದ್ದಾರೆ. ಸ್ಥಳಕ್ಕೆ ಪೊಲೀಸರ ಆಗಮಿಸಿದ್ದು, ಸ್ಥಳೀಯರಿಂದ ಮಾಹಿತಿ ಸಂಗ್ರಹ ಮಾಡಿದ್ದಾರೆ. ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:53 am, Sat, 15 July 23