ಉಡುಪಿಯಲ್ಲಿ ಮೊದಲ ಬಾರಿಗೆ ಸರ್ಕಾರದಿಂದ ಯಕ್ಷಗಾನ ಸಾಹಿತ್ಯ ಸಮ್ಮೇಳನ ಆಯೋಜನೆ

| Updated By: ವಿವೇಕ ಬಿರಾದಾರ

Updated on: Dec 19, 2022 | 5:35 PM

ಸರ್ಕಾರದಿಂದ ಮೊದಲ ಬಾರಿಗೆ ಫೆಬ್ರವರಿ 11 ಮತ್ತು 12ರಂದು ಉಡುಪಿಯಲ್ಲಿ ಯಕ್ಷಗಾನ ಸಾಹಿತ್ಯ ಸಮ್ಮೇಳನ ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ.

ಉಡುಪಿಯಲ್ಲಿ ಮೊದಲ ಬಾರಿಗೆ ಸರ್ಕಾರದಿಂದ ಯಕ್ಷಗಾನ ಸಾಹಿತ್ಯ ಸಮ್ಮೇಳನ ಆಯೋಜನೆ
ಯಕ್ಷಗಾನ
Follow us on

ಬೆಂಗಳೂರು: ಸರ್ಕಾರದಿಂದ ಮೊದಲ ಬಾರಿಗೆ ಫೆಬ್ರವರಿ 11 ಮತ್ತು 12ರಂದು ಉಡುಪಿಯಲ್ಲಿ (Udupi) ರಾಜ್ಯಮಟ್ಟದ ಯಕ್ಷಗಾನ ಸಾಹಿತ್ಯ ಸಮ್ಮೇಳನ (Yakshagana Sahitya Sammelana) ಆಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ (Sunil Kumar) ನೇತೃತ್ವದಲ್ಲಿ ಇಂದು (ಡಿ.19) ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಾಹಿತ್ಯ ಸಮ್ಮೇಳನಕ್ಕೆ ಸರಿ ಸಮಾನ ಸಿದ್ಧತೆ ಹಾಗೂ ಗುಣಮಟ್ಟದೊಂದಿಗೆ ಯಕ್ಷಗಾನ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಿದ್ದು, ಮೇಳ ಹಾಗೂ ಕಲಾವಿದರ ಸಮಸ್ಯೆ ಬಗ್ಗೆ ಪ್ರತ್ಯೇಕ ಗೋಷ್ಠಿ ಆಯೋಜಿಸಲಾಗುತ್ತದೆ.

ಇದನ್ನೂ ಓದಿ: ನೇಕಾರರಿಗೆ ಮತ್ತೊಂದು ಶುಭ ಸುದ್ದಿ ನೀಡಿದ ಬೊಮ್ಮಾಯಿ, ನಾಳೆಯೊಳಗೆ ಆದೇಶ ಆಗುತ್ತೆ ಎಂದ ಸಿಎಂ

ಹಾಗೇ ಯಕ್ಷರಂಗದ ಮೇಳದ ಯಜಮಾನರಿಗೆ, ಪಿಹೆಚ್​​ಡಿ ಪ್ರಬಂಧ ಮಂಡಿಸಿದವರಿಗೆ ಹಾಗೂ ಬಡ ಕಲಾವಿದರಿಗೆ ಸನ್ಮಾನಿಸಲು ತೀರ್ಮಾನಿಸಲಾಗಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:05 pm, Mon, 19 December 22