AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಾಫಿ ಸಮ್ಮೇಳನ

ಕಾಫಿ ಬೆಳೆಗಾರರು ಹಾಗೂ ಉದ್ಯಮಿಗಳಿಗೆ ಹೊಸ ಅವಕಾಶ ಸೃಷ್ಟಿ ಹಾಗೂ ಮಾರಿಕಟ್ಟೆಯ ವಿಸ್ತರಣೆಯ ಉದ್ದೇಶದಿಂದ ಏಷ್ಯಾದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರಿನ ಅಮನೆ ಮೈದಾನದಲ್ಲಿ ಸೆ.25 ರಿಂದ 28ರವರೆಗೆ 5ನೇ "ವಿಶ್ವ ಕಾಫಿ ಸಮ್ಮೇಳನ" ಆಯೋಜಿಸಲಾಗಿದೆ.

ಏಷ್ಯಾದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಾಫಿ ಸಮ್ಮೇಳನ
ವಿಶ್ವ ಕಾಫಿ ಸಮ್ಮೇಳನ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Aug 01, 2023 | 8:46 AM

Share

ಬೆಂಗಳೂರು: ಕರ್ನಾಟಕ ಭಾರತದ ಕಾಫಿ (Coffee) ರಾಜಧಾನಿಯಾಗಿದೆ. ಹೀಗಾಗಿ ಕಾಫಿ ಬೆಳೆಗಾರರು ಹಾಗೂ ಉದ್ಯಮಿಗಳಿಗೆ ಹೊಸ ಅವಕಾಶ ಸೃಷ್ಟಿ ಹಾಗೂ ಮಾರಿಕಟ್ಟೆಯ ವಿಸ್ತರಣೆಯ ಉದ್ದೇಶದಿಂದ ಏಷ್ಯಾದಲ್ಲಿ (Asia) ಇದೇ ಮೊದಲ ಬಾರಿಗೆ ಬೆಂಗಳೂರಿನ (Bengaluru) ಅಮನೆ ಮೈದಾನದಲ್ಲಿ ಸೆ.25 ರಿಂದ 28ರವರೆಗೆ 5ನೇ “ವಿಶ್ವ ಕಾಫಿ ಸಮ್ಮೇಳನ ” World Coffee Conference (WCC 2023)” ಆಯೋಜಿಸಲಾಗಿದೆ. ಭಾರತೀಯ ಕಾಫಿ ಮಂಡಳಿ, ಅಂತರಾಷ್ಟ್ರೀಯ ಕಾಫಿ ಸಂಘಟನೆಗಳು (ಐಸಿಒ) ಹಾಗೂ ಕಾಫಿ ಉದ್ಯಮದ ಸಹಯೋಗದಲ್ಲಿ ಈ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ. ಸಮ್ಮೇಳನದ ಬ್ರ್ಯಾಂಡ್​ ಅಂಬಾಸಿಡರ್​ ಆಗಿರವ ಟೆನಿಸ್​ ಆಟಗಾರ ಮತ್ತು ಅರ್ಜುನ ಪ್ರಶಸ್ತಿ ಪುರಸೃತ ರೋಹನ್​ ಬೋಪಣ್ಣ ಅವರು ಸೋಮವಾರ ಲಾಂಛನ ಅನಾವರಣಗೊಳಿಸಿದರು.

ಭಾರತೀಯ ಕಾಫಿ ಮಂಡಳಿ ಸಿಇಒ ಕೆ.ಜಿ ಜಗದೀಶ್​ ಮಾತನಾಡಿ ಜಾಗತಿಕವಾಗಿ ಕಾಫಿಯ ಆರ್ಥಿಕ ಪ್ರಾಮುಖ್ಯತೆಯನ್ನು ಹೆಚ್ಚಿಸಲು ವಿಶ್ವಸಂಸ್ಥೆಯ ಆಶ್ರಯದಲ್ಲಿ 1963 ರಲ್ಲಿ ಅಂತರಾಷ್ಟ್ರೀಯ ಕಾಫಿ ಸಂಘಟನೆಯನ್ನು (ಐಸಿಒ) ಸ್ಥಾಪಿಸಲಾಯಿತು. 2001ರಲ್ಲಿ ಲಂಡನ್​, ಬೆಜಿಲ್​ನಲ್ಲಿ 2005, ಗ್ವಾಟೆಮಾಲಾದಲ್ಲಿ 2010 ಮತ್ತು ಮತ್ತು ಇಥಿಯೋಪಿಯಾದಲ್ಲಿ ಸಮ್ಮೇಳನ ನಡೆದಿದ್ದವು. ಏಷ್ಯಾದಲ್ಲಿ ಮೊದಲ ಸಮ್ಮೇಳನ ಆಯೋಜಿಸಲಾಗುತ್ತಿದೆ. ಅದರಲ್ಲೂ ಬೆಂಗಳೂರು ವೇದಿಕೆಯಾಗುತ್ತಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.

ಇದನ್ನೂ ಓದಿ: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್​ವೇ: ಆಗಸ್ಟ್ 1 ರಿಂದ ಬೈಕ್​​, ಆಟೋ ಸಂಚಾರ ನಿರ್ಬಂಧ, ಮಧ್ಯರಾತ್ರಿಯಿಂದಲೇ ಆದೇಶ ಜಾರಿ

ವಿಶ್ವದಲ್ಲಿ ಭಾರತವು ಕಾಫಿ ಉತ್ಪಾದನೆಯಲ್ಲಿ 7ನೇ ಸ್ಥಾನದಲ್ಲಿದೆ. ರಫ್ತಿನಲ್ಲಿ 5ನೇ ಸ್ಥಾನದಲ್ಲಿದೆ. ದೇಶದ ರಪ್ತು ಪ್ರಮಾಣದಲ್ಲಿ ಕರ್ನಾಟಕದ ಕೊಡುಗೆಯು ಶೇ 70ರಷ್ಟಿದೆ. ದೇಶದಲ್ಲಿ ಕರ್ನಾಟಕ ಕಾಫಿ ರಾಜಧಾನಿಯಾಗಿದೆ. ಸಮ್ಮೇಳನದಿಂದ ಕಾಫಿ ಬೆಳೆಗಾರರಿಗೆ ಸಾಕಷ್ಟು ಪ್ರಯೋಜನವಾಗಲಿದೆ. 100 ಮಿಲಿಯನ್ ಕುಟುಂಬಗಳಿಗೆ ಉದ್ಯೋಗ ಮತ್ತು ಜೀವನೋಪಾಯವನ್ನು ಒದಗಿಸುವ 200 ಶತಕೋಟಿ ಮೌಲ್ಯದ ವಿಶ್ವದ ಅತಿದೊಡ್ಡ ವ್ಯಾಪಾರದ ಸರಕು ಕಾಫಿಯಾಗಿದೆ ಎಂದು ತಿಳಿಸಿದರು.

ಜಾಗತಿಕ ಮಟ್ಟದಲ್ಲಿ ಭಾರತೀಯ ಕಾಫಿಯನ್ನು ಪ್ರಚಾರ ಮಾಡುವ ಮೂಲಕ ಈ ಸಮ್ಮೇಳನವು ಕಾಫಿ ಬೆಳೆಗಾರರಿಗೆ ಹೊಸ ಅವಕಾಶಗಳನ್ನು ಒದಗಿಸುತ್ತದೆ. ಹಾಗೇ ಮಾರುಕಟ್ಟೆಗಳನ್ನು ಸೃಷ್ಟಿಸಲಿದೆ. ಕಾಫಿ ತೋಟದಿಂದ ಕೆಫೆಗಳವರೆಗೆ ನಮ್ಮ ಪ್ರತಿಭೆಗಳಿಗೆ ಹೆಚ್ಚಿನ ಉದ್ಯೋಗವಕಾಶಗಳು ದೊರೆಯಲಿವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ