AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ವಿದೇಶಿ ಪ್ರಜೆ ಅರೆಸ್ಟ್

ನಾಲ್ವರಲ್ಲಿ ಮೂವರು ಪೊಲೀಸರಿಗೆ ಕ್ಷಮೆ ಕೇಳಿ ಅಲ್ಲಿಂದ ತೆರಳಿದ್ದರು. ಆದರೆ ಮೋರ್ಗನ್ ಎಂಬುವವನು ಪೊಲೀಸರ ಜೊತೆಗೆ ವಾಗ್ವಾದ ಮಾಡಿ ಅವಾಚ್ಯ ಪದಗಳಿಂದ ನಿಂದಿಸಿದ್ದ. ಅಷ್ಟೇ ಅಲ್ಲದೇ ತನ್ನ ಕಾರ್ನಿಂದ ಚೀತಾ ಬೈಕ್ ಗುದ್ದಿ ಎಸ್ಕೇಪ್ ಆಗಿದ್ದ.

ಬೆಂಗಳೂರು ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ವಿದೇಶಿ ಪ್ರಜೆ ಅರೆಸ್ಟ್
ಪೊಲೀಸರ ಜೊತೆ ವಾಗ್ವಾದ ನಡೆಸುತ್ತಿರುವ ಆರೋಪಿ
TV9 Web
| Edited By: |

Updated on: Jul 18, 2021 | 9:13 AM

Share

ಬೆಂಗಳೂರು: ಪೊಲೀಸರು ಮೇಲೆ ಹಲ್ಲೆ ನಡೆಸಿದ್ದ ವಿದೇಶಿ ಪ್ರಜೆಯನ್ನು(Foreign citizen )ಬಂಧಿಸಲಾಗಿದೆ. ಹಲ್ಲೆ ಮಾಡಿ ಪರಾರಿಯಾಗಿದ್ದ ಘಾನ ದೇಶದ ಆರೋಪಿ ಮೋರ್ಗನ್(34) ಎಂಬಾತನನ್ನು ಉತ್ತರ ಪ್ರದೇಶದಲ್ಲಿ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜೂನ್ 25 ರಂದು ರಾತ್ರಿ 1.30 ಕ್ಕೆ 4 ವಿದೇಶಿ ಪ್ರಜೆಗಳು ಜಗಳ ಮಾಡುತ್ತಿದ್ದರು. ಕೆ.ಆರ್.ಪುರಂ ನ ವಾರಣಾಸಿ ಎನ್ಕ್ಲೇವ್ ಹತ್ತಿರ ಜಗಳ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದಿದ್ದ ಪೊಲೀಸರ ಮೇಲೆ ಮೋರ್ಗನ್ ಹಲ್ಲೆ ನಡೆಸಿದ್ದ.

ನಾಲ್ವರ ನಡುವೆ ಜಗಳವಾಗುತ್ತಿದ್ದಾಗ ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಬಂದಿದ್ದರು. ಆ ನಾಲ್ವರಿಗೆ ಪೊಲೀಸರು ಬುದ್ಧಿವಾದ ಹೇಳಿದ್ದರು. ನಾಲ್ವರಲ್ಲಿ ಮೂವರು ಪೊಲೀಸರಿಗೆ ಕ್ಷಮೆ ಕೇಳಿ ಅಲ್ಲಿಂದ ತೆರಳಿದ್ದರು. ಆದರೆ ಮೋರ್ಗನ್ ಎಂಬುವವನು ಪೊಲೀಸರ ಜೊತೆಗೆ ವಾಗ್ವಾದ ಮಾಡಿ ಅವಾಚ್ಯ ಪದಗಳಿಂದ ನಿಂದಿಸಿದ್ದ. ಅಷ್ಟೇ ಅಲ್ಲದೇ ತನ್ನ ಕಾರ್ನಿಂದ ಚೀತಾ ಬೈಕ್ ಗುದ್ದಿ ಎಸ್ಕೇಪ್ ಆಗಿದ್ದ. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಮಾದಕ ವಸ್ತು ಮಾರುತ್ತಿದ್ದ ವ್ಯಕ್ತಿ ಬಂಧನ ಬೆಂಗಳೂರಿನಲ್ಲಿ ಮಾದಕ ವಸ್ತು ಮಾರುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿ ಸಖ್​ದೇವ್​ ಎಂಬುವವನನ್ನು ಅರೆಸ್ಟ್ ಮಾಡಿ, ಆತನಿಂದ 1.84 ಕೆ.ಜಿ ಅಫೀಮು ಜಪ್ತಿ ಮಾಡಲಾಗಿದೆ. ಕೃತ್ಯಕ್ಕೆ ಬಳಸುತ್ತಿದ್ದ ಮೊಬೈಲ್ ಫೋನ್ ಹಾಗೂ 9 ಸಾವಿರ ನಗದು ಸೀಜ್ ಮಾಡಲಾಗಿದೆ. ಆರೋಪಿ ಸಖ್ದೇವ್ ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್ ಪಕ್ಕದ ಎಎಸ್​​ಸಿ ಕಾಲೇಜು ಬಳಿ ಅಫೀಮು ಮಾರಾಟ ಮಾಡುತ್ತಿದ್ದ. ಈತನನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ

ಬಾಂಗ್ಲಾದೇಶದ ಯುವತಿ ಗ್ಯಾಂಗ್‌ರೇಪ್ ಪ್ರಕರಣ; ಯುವತಿಯರ ಮಾಹಿತಿ ಕೇಳಿದ ಎನ್ಐಎ

ಅಪ್ಪನಿಗೆ ಬ್ಯಾಟರಿ ಚಾಲಿತ ಬೈಕ್, ಮಗನಿಗೆ ಜೀಪ್; ಲಾಕ್​ಡೌನ್​ ಸಮಯವನ್ನು ಸದುಪಯೋಗ ಮಾಡಿಕೊಂಡ ಬೀದರ್ ವ್ಯಕ್ತಿ

(Foreign citizen has been arrested for allegedly assaulting the Bangalore police)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ